ಯಡಿಯೂರಪ್ಪ, ವಿಜಯೇಂದ್ರ ಆಪ್ತರ ವಿರುದ್ಧ ಶಾಸಕ ಯತ್ನಾಳ್ ಐಟಿ ದಾಳಿ ಮಾಡಿಸಿದ್ದಾರಾ ಹೇಗೆ: ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ

Karnataka Byelection 2021: ಸಿಂದಗಿ ಜೆಡಿಎಸ್ ಅಭ್ಯರ್ಥಿ ನಾಝಿಯಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಿಂದಗಿ ಚುನಾವಣಾಧಿಕಾರಿ ರಾಹುಲ್‌ಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.

ಯಡಿಯೂರಪ್ಪ, ವಿಜಯೇಂದ್ರ ಆಪ್ತರ ವಿರುದ್ಧ ಶಾಸಕ ಯತ್ನಾಳ್ ಐಟಿ ದಾಳಿ ಮಾಡಿಸಿದ್ದಾರಾ ಹೇಗೆ: ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ
ಎಚ್ ​ಡಿ ಕುಮಾರಸ್ವಾಮಿ
Follow us
TV9 Web
| Updated By: ganapathi bhat

Updated on:Oct 07, 2021 | 3:51 PM

ವಿಜಯಪುರ: ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ‌ ನಿಯಾಜ್ ಶೇಖ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಮತ್ತು ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಜೊತೆ ಆಗಮಿಸಿ ನಿಯಾಜ್ ಶೇಖ ನಾಮಪತ್ರ ಸಲ್ಲಿಸಿದ್ದಾರೆ. ಹಾನಗಲ್ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಇತ್ತ ಸಿಂದಗಿ ಜೆಡಿಎಸ್ ಅಭ್ಯರ್ಥಿ ನಾಝಿಯಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಿಂದಗಿ ಚುನಾವಣಾಧಿಕಾರಿ ರಾಹುಲ್‌ಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ ನಾಮಪತ್ರ ಸಲ್ಲಿಕೆ ನಂತರ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾನಗಲ್ ಮತ್ತು ಸಿಂದಗಿಯಲ್ಲಿ ಉಪಚುನಾವಣೆ ನಡೀತಿದೆ. ಎರಡೂ ಕಡೆಗಳಲ್ಲಿ ಜೆಡಿಎಸ್ ವಿದ್ಯಾವಂತ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ನಾನು ಹಾನಗಲ್‌ನಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಜೆಡಿಎಸ್ ಅದರಲ್ಲೂ ದೇವೇಗೌಡರು ಪ್ರಧಾನಿ ಆಗಿದ್ದಾಗ ಮುಸ್ಲಿಂ ಸಮಾಜಕ್ಕೆ ಆದ್ಯತೆ ನೀಡಿ ಮೀಸಲಾತಿ ನೀಡಿದ್ದರು. ಹಾಗಂತ ನಾವು ಯಾವುದೇ ಸಮಾಜ, ಧರ್ಮವನ್ನ ಟಾರ್ಗೆಟ್ ಮಾಡ್ಕೊಂಡು ಹೊರಟಿಲ್ಲ. 2018ರ ಚುನಾವಣೆ ಸಮಯದಲ್ಲೂ ಕಾಂಗ್ರೆಸ್​ನವರು ಜೆಡಿಎಸ್ ಬಿಜೆಪಿಯ ಬಿ ಟೀಂ ಅಂತಾ ಹೇಳ್ಕೊಂಡು ಹೋಗಿದ್ರು. ರಾಜಕೀಯವಾಗಿ ಲಾಭ ಪಡೆದುಕೊಳ್ಳಲು ಕಾಂಗ್ರೆಸ್ ಈ ರೀತಿ ಹೇಳಿಕೊಂಡು ಹೊರಟಿದ್ದಾರೆ. ಜೆಡಿಎಸ್ ಹಾನಗಲ್ ನಲ್ಲಿ ಅಷ್ಟೊಂದು ಪ್ರಬಲವಾಗಿಲ್ಲ ಅನ್ನೋ ಭಾವನೆ ಇದೆ. ನಾವು ಧೃತಿಗೆಡದೆ ಚುನಾವಣೆ ನಡೆಸ್ತೀವಿ. ಹಾನಗಲ್ ಮತ್ತು ಸಿಂದಗಿಯಲ್ಲಿ ಜನರು ನಮ್ಮನ್ನ ಆಯ್ಕೆ ಮಾಡೋ ಎಲ್ಲ ವಿಶ್ವಾಸವಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾಂಗ್ರೆಸ್, ಬಿಜೆಪಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ಸಿಂದಗಿ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಾಝಿಯಾ ಶಕೀಲ್ ಅಂಗಡಿ ನಾಮಪತ್ರ ಸಲ್ಲಿಕೆ ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಬಣ್ಣ ಬಯಲು ಮಾಡಲು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದೇವೆ. ಕಾಂಗ್ರೆಸ್​ನ ಕೀಳು ಮಟ್ಟದ ರಾಜಕೀಯ ನಿಲ್ಲಬೇಕು. ಬಿಜೆಪಿಯಂತ ಕೆಟ್ಟ ಸರ್ಕಾರ ಬರಲು ಕಾಂಗ್ರೆಸ್ ನಾಯಕರೇ ಕಾರಣ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

2018 ರಲ್ಲಿ ರಾಹುಲ್ ಗಾಂಧಿ ಮೂಲಕ ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಅಪಪ್ರಚಾರ ಮಾಡಿಸಿ ಹೇಳಿಕೆ ಕೊಡಿಸಿದ್ದರು. ಆ ವೇಳೆ ಅಧಿಕಾರಿಗಳು, ಧರ್ಮ ಗುರುಗಳನ್ನ ದುರುಪಯೋಗಪಡಿಸಿಕೊಂಡಿದ್ದರು. ನಾವು ಕೆಲಸಕ್ಕೆ ಬರದೇ ಇರೋರನ್ನು ಉಪ ಚುನಾವಣೆಗಾಗಿ ಅಭ್ಯರ್ಥಿ ಮಾಡಿಲ್ಲ. ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಗೆ ಸ್ಪರ್ದೆ ಮಾಡಿರೋ ನಮ್ಮ ಪಕ್ಷದ ಅಭ್ಯರ್ಥಿಗಳು ವಿದ್ಯಾವಂತರು, ಪದವಿಧರರು, ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಚುನಾವಣೆಯಲ್ಲಿ ಗೆಲ್ಲಲು ಸುಶಿಕ್ಷಿತರಿಗೆ ಟಿಕೇಟ್ ನೀಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ದಿ. ಎಂ.ಸಿ ಮನಗೂಳಿ ಶಾಸಕರಿದ್ದಾಗ ಸಿಂದಗಿ ಕ್ಷೇತ್ರದ ಜನರ ಬೇಡಿಕೆಗಳನ್ನ ಈಡೇರಿಸಿದ್ದೇವೆ. ಸಿಂದಗಿಗೆ ಜೆಡಿಎಸ್ ಕೊಡುಗೆ ಇದೆ. ಜನರ ಬಳಿ ಮತ ಕೇಳಲು ನೈತಿಕತೆ ಇಟ್ಟುಕೊಂಡು ಬಂದಿದ್ದೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳಲಿ. ಅಪಪ್ರಚಾರ ಮಾಡಿ ಮತ ಕೇಳಬಾರದು. ಹಿಂದುತ್ವದ ಹೆಸರಲ್ಲಿ ಬಿಜೆಪಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ಹಿಂದೂಗಳ ಮತಗಳಿಗಾಗಿ ಬಿಜೆಪಿ ಕೀಳುಮಟ್ಟಕ್ಕೆ ಇಳಿದಿದೆ. ಇವರ ಸ್ವಾರ್ಥಕ್ಕೆ ದೇಶ ಒಡೆಯುವಂತ ಕೆಲಸ ನಾವು ಮಾಡಿಲ್ಲ ಎಂದು ಬಿಜೆಪಿ ವಿರುದ್ಧವೂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಆಡಳಿತದ ಅಧಿಕಾರವನ್ನ ಮಂತ್ರಿಗಳಿಗೆ ಕೊಟ್ಟಿಲ್ಲ ಅಧಿಕಾರಿಗಳಿಗೆ ಕೊಟ್ಟಿದ್ದಾರೆ ಅಂತಾ ಹೇಳಿದ್ದಾರೆ. ಹೀಗಾದರೆ ಚುನಾವಣೆ, ಪ್ರಜಾಪ್ರಭುತ್ವ ಯಾಕೆ ಬೇಕು? ಮಂತ್ರಿಗಳು, ಶಾಸಕರು ಯಾಕೆ ಬೇಕು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ದಿ. ಎಂ.ಸಿ ಮನಗೂಳಿ ಪುತ್ರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಜೆಡಿಎಸ್​ನಿಂದ ಎಲೆಕ್ಷನ್ ನಿಂತರೆ ಕಷ್ಟ ಆಗುತ್ತೆ ಅಂತಾ ನನಗೆ ಹೇಳಿ ಕಾಂಗ್ರೆಸ್​ಗೆ ಹೋಗಿದ್ದಾರೆ. ನನಗೆ ಕಿರೀಟ ಅಲ್ಲ ಟೋಪಿ ಹಾಕಿ ಹೋಗಿದ್ದಾರೆ ಎಂದು ಟೀಕಿಸಿದ್ದಾರೆ.

ಶಾಸಕ ಯತ್ನಾಳ್ ಐಟಿ ದಾಳಿ ಮಾಡಿಸಿದ್ದಾರಾ ಹೇಗೆ: ಕುಮಾರಸ್ವಾಮಿ ಪ್ರಶ್ನೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕ ಯತ್ನಾಳ್ ಐಟಿ ದಾಳಿ ಮಾಡಿಸಿದ್ದಾರಾ ಹೇಗೆ ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಚರ್ಚೆ ಮಾಡಲ್ಲ. ಆದರೆ, ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಹಿತೈಷಿಗಳ ಮನೆ ಮೇಲೆಯೇ ದಾಳಿ ಆಗಿದೆ. ಅವರನ್ನು ಹಿಡಿದಿಟ್ಟುಕೊಳ್ಳಲು ಈ ದಾಳಿ ನಡೆಸಲಾಗಿದೆ. ಮುಂದಿ ದಿನಗಳಲ್ಲಿ ಮತ್ತೆ ಬೇರೆನೋ ಆರಂಭವಾಗುತ್ತೆ. ಹೀಗೆಂದು ಈಗಲೇ ಹಿಡಿದಿಟ್ಟುಕೊಳ್ಳಲು ಐಟಿ ದಾಳಿ ಆಗಿದೆ. ಬೇರೆಯದ್ದು ಪ್ರಾರಂಭವಾಗೋ ಮುನ್ನವೇ ದಾಳಿ ಮಾಡಲಾಗಿದೆ ಎಂದು ವಿಜಯಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿಗಳು; ಹಾನಗಲ್ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾರ್ಯಕರ್ತರ ಅಸಮಾಧಾನ

ಇದನ್ನೂ ಓದಿ: Karnataka Bypolls 2021: ಹಾನಗಲ್ ಉಪಚುನಾವಣೆ: ಮೂರೂ ಪಕ್ಷಗಳಲ್ಲಿ ಸಿದ್ಧತೆ ಚುರುಕು, ತ್ರಿಕೋನ ಸ್ಪರ್ಧೆ ನಿರೀಕ್ಷಿತ

Published On - 3:37 pm, Thu, 7 October 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ