ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮಹಾರಾಷ್ಟ್ರ ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಫುಲ್ ಅಲರ್ಟ್

ಬೆಳಗಾವಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಕೇಸ್ ಪತ್ತೆಯಾದ ಹಿನ್ನೆಲೆ ಮಹಾರಾಷ್ಟ್ರ ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ವಿಜಯಪುರ ಡಿಹೆಚ್ಓ ಡಾ ಬಸವರಾಜ ಹುಬ್ಬಳ್ಳಿ ನೇತೃತ್ವದಲ್ಲಿ ವಿವಿಧ ಆಸ್ಪತ್ರೆಗಳಿಗೆ ಹಾಗೂ ಸ್ಕ್ಯಾನಿಂಗ್ ಸೆಂಟರ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮಹಾರಾಷ್ಟ್ರ ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಫುಲ್ ಅಲರ್ಟ್
ಡಿಹೆಚ್ಓ ಡಾ ಬಸವರಾಜ ಹುಬ್ಬಳ್ಳಿ ಪರಿಶೀಲನೆ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಆಯೇಷಾ ಬಾನು

Updated on: Jun 19, 2024 | 9:26 AM

ವಿಜಯಪುರ, ಜೂನ್.19: ಮಹಾರಾಷ್ಟ್ರ ಗಡಿಭಾಗದಲ್ಲಿ ಹೆಣ್ಣು ಭ್ರೂಣ ಹತ್ಯೆ (Foeticide) ಕೇಸ್ ಪತ್ತೆಯಾದ ಹಿನ್ನೆಲೆ ಮಹಾರಾಷ್ಟ್ರ ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು (Health Department) ಅಲರ್ಟ್ ಆಗಿದ್ದಾರೆ. ಮಹಾರಾಷ್ಟ್ರ ಗಡಿಭಾಗದ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ ಡಿಹೆಚ್ಓ ಡಾ ಬಸವರಾಜ ಹುಬ್ಬಳ್ಳಿ ನೇತೃತ್ವದಲ್ಲಿ ಚಡಚಣ ಪಟ್ಟಣದ ಖಾಸಗಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಲಾಯಿತು. ಮಹಾರಾಷ್ಟ್ರ ಗಡಿಭಾಗಕ್ಕೆ ಹೊಂದಿರುವ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿವಿಧ ಆಸ್ಪತ್ರೆಗಳಿಗೆ ಹಾಗೂ ಸ್ಕ್ಯಾನಿಂಗ್ ಸೆಂಟರ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ದರಪಟ್ಟಿ ಹಾಕದಿದ್ದ ಕೆಲ ಖಾಸಗಿ ಆಸ್ಪತ್ರೆಯವರಿಗೆ ಡಿಹೆಚ್​ಓ ಬಸವರಾಜ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಣ್ಣಪುಟ್ಟ ಲೋಪದೋಷ ಕಂಡು ಬಂದ ಹಿನ್ನಲೆ ನೊಟೀಸ್ ನೀಡಲಾಗಿದೆ. ಕೆಪಿಎಂಇ ಕಾಯ್ದೆಯಡಿ ನೊಂದಣಿ ಕಡ್ಡಾಯ ಹಾಗೂ ಚಿಕಿತ್ಸೆ ದರಪಟ್ಟಿ ಹಾಕಬೇಕು ಅಂತ ಡಿಹೆಚ್ಓ ಸೂಚಿಸಿದ್ದಾರೆ.

ಇದನ್ನೂ ಓದಿ: Bomb Threat: ಮುಂಬೈನ 50 ಆಸ್ಪತ್ರೆಗಳು ಹಾಗೂ ಕಾಲೇಜುಗಳಿಗೆ ಬಾಂಬ್​ ಬೆದರಿಕೆ

ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿ ನಕಲಿ ವೈದ್ಯನ ಫಾರ್ಮ್ ಹೌಸ್ ನಲ್ಲಿ ಹತ್ಯೆಯಾದ ನವಜಾತ ಶಿಶುಗಳು ಸಿಕ್ಕಿದ್ದವು. ಇದೇ ಪ್ರಕರಣ ಬೆನ್ನು ಬಿದ್ದಿರುವ ಪೊಲೀಸರು ಹಿಂಡಲಗಾ ಜೈಲಿನಲ್ಲಿದ್ದ ಆರೋಪಿಯನ್ನ ಕಸ್ಟಡಿಗೆ ಪಡೆದು ಡ್ರಿಲ್ ಮಾಡಿದ್ದಾರೆ. ಜೊತೆಗೆ ಆತನ ಆಸ್ಪತ್ರೆಗೆ ಕರೆತಂದು ಪಂಚನಾಮೆ ಕೂಡ ಮಾಡಿದ್ದಾರೆ.

ಆರೋಗ್ಯ ಅಧಿಕಾರಿಗಳು ಹಾಗೂ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು ನಕಲಿ ವೈದ್ಯನ ಫಾರ್ಮ್ ಹೌಸ್ ನಲ್ಲಿ ಸರ್ಚಿಂಗ್ ನಡೆಸಿ ಹತ್ಯೆಯಾದ ಭ್ರೂಣಗಳನ್ನ ಪತ್ತೆ ಹಚ್ಚಿದ್ದರು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಹೊರ ವಲಯದಲ್ಲಿದ್ದ ಫಾರ್ಮ್ ಹೌಸ್ ನಲ್ಲಿ ಈ ಶೋಧ ಕಾರ್ಯ ನಡೆದಿತ್ತು. ಡಿಎಚ್ಒ ಮಹೇಶ್ ಕೋಣಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ, ತಹಶಿಲ್ದಾರ್, ಡಿವೈಎಸ್ ಪಿ ಸಮ್ಮುಖದಲ್ಲಿ ನಕಲಿ ವೈದ್ಯನ ಸಹಾಯ ರೋಹಿತ್ ತೋರಿಸಿದ ಜಾಗದಲ್ಲಿ ಮೂರು ನವಜಾತ ಶಿಶಿಗಳು ಸಿಕ್ಕಿದ್ದವು. ಈ ಪ್ರಕರಣ ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು ಮತ್ತು ಪೊಲೀಸರು ಮಕ್ಕಳ ಮಾರಾಟ ಜಾಲದಲ್ಲಿ ಹಿಂಡಲಗಾ ಜೈಲು ಸೇರಿದ್ದ ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ ಕಸ್ಟಡಿಗೆ ಪಡೆದುಕೊಂಡರು. ಕೋರ್ಟ್ ನಲ್ಲಿ ಮನವಿ ಮಾಡಿಕೊಂಡು ಕಸ್ಟಡಿಗೆ ಪಡೆದು ಬಳಿಕ ಆತನ ಜನ್ಮ ಜಾಲಾಡುತ್ತಿದ್ದಾರೆ.

ಸಿಕ್ಕ ಭ್ರೂಣಗಳು ಯಾರದ್ದು? ಯಾವ ಕಾರಣಕ್ಕೆ ಅಬಾಷನ್ ಮಾಡಿ ಜಮೀನಿನಲ್ಲಿ ಹೂಳಲಾಗಿತ್ತು? ಇದರಲ್ಲಿ ಮತ್ತೆ ಯಾರೆಲ್ಲಾ ಭಾಗಿಯಾಗಿದ್ದಾರೆ ಅನ್ನೋ ಅಂಶವನ್ನ ಹೊರ ತೆಗೆಯುತ್ತಿದ್ದಾರೆ. ಪೊಲೀಸರ ವಿಚಾರಣೆಯಲ್ಲಿ ಪಾಪಿ ತಾನೇ ಅಬಾಷನ್ ಮಾಡಿದ್ದಾಗಿ ಒಪ್ಪಿಕೊಂಡಿದ್ದು ಹಣಕ್ಕಾಗಿ ಈ ರೀತಿ ಮಾಡಿದ್ದಾಗಿ ಹೇಳಿದ್ದಾನೆ. ಇನ್ನೂ ಹೆಂಡತಿ ಬಿಎಚ್ಎಂಎಸ್ ಮುಗಿಸಿದ್ದು ಆಕೆಯ ಹೆಸರಿನಲ್ಲಿ ಆಸ್ಪತ್ರೆ ನಡೆಸುತ್ತಿದ್ದಾಗಿ ಸುಳ್ಳು ಹೇಳಿದ್ದು ಇನ್ನಷ್ಟು ಸತ್ಯವನ್ನ ಪೊಲೀಸರು ಆರೋಪಿ ನಕಲಿ ವೈದ್ಯನಿಂದ ಕಕ್ಕಿಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ