AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಕೆಲವೆಡೆ ಭಾರೀ ಮಳೆ; ಸಿಡಿಲು ಬಡಿದು ಓರ್ವ ಸಾವು

ರಾಜ್ಯದಲ್ಲಿ ಕೆಲದಿನಗಳಿಂದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಭೀಕರ ಬರಕ್ಕೆ ತತ್ತರಿಸಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಅದರಂತೆ ಇಂದು(ಏ.11) ಕೂಡ ವಿಜಯಪುರ, ಕಲಬುರಗಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ವಿಜಯಪುರದ ಇಂಡಿ ತಾಲೂಕಿನಲ್ಲಿ 16 ವರ್ಷದ ಬಾಲಕ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ.

ರಾಜ್ಯದ ಕೆಲವೆಡೆ ಭಾರೀ ಮಳೆ; ಸಿಡಿಲು ಬಡಿದು ಓರ್ವ ಸಾವು
ರಾಜ್ಯದ ವಿವಿಧೆಡೆ ಮಳೆ; ಸಿಡಿಲಿಗೆ ಓರ್ವ ಸಾವು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 11, 2024 | 7:36 PM

Share

ವಿಜಯಪುರ, ಏ.11: ರಾಜ್ಯದಲ್ಲಿ ಇಂದು(ಏ.11) ಹಲವೆಡೆ ಭಾರೀ ಮಳೆಯಾಗಿದ್ದು, ಬಿರು ಬಿಸಿಲಿಗೆ ತತ್ತರಿಸಿದ್ದ ಜನ ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ಅದರಂತೆ ವಿಜಯಪುರ(Vijayapura) ತಾಲೂಕು, ತಿಕೋಟ ಗ್ರಾಮದಲ್ಲಿ ಮಳೆ ತಂಪೆರೆದಿದ್ದು, ಇಂಡಿ ತಾಲೂಕಿನ ಮಾವಿನಹಳ್ಳಿಯಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಬೀರಪ್ಪ ನಿಂಗಪ್ಪ ಅವರಾದಿ(16) ಮೃತ ರ್ದುದೈವಿ. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬಿಸಿಲಿನ ಝಳದಿಂದ ಬಳಲಿದ್ದ ಜನರಿಗೆ ತಂಪೆರೆದ ಮಳೆರಾಯ

ಕಲಬುರಗಿ: ಕಳೆದೊಂದು ವಾರದಿಂದ ನಿಗಿನಿಗಿ ಕೆಂಡವಾಗಿದ್ದ ಕಲಬುರಗಿರಯಲ್ಲಿ ಇಂದು ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ಅಫಜಲಪುರ ತಾಲೂಕಿನ ಹಲವೆಡೆ ಗುಡುಗು, ಮಿಂಚು ಸಹಿತ ಧಾರಕಾರ‌ ಮಳೆಯಾಗಿದೆ. ವರ್ಷದ ಮೊದಲ ಮಳೆಗೆ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಲಬುರಗಿ ನಗರದಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ:ಮಳೆಗೆ ಕುಸಿದ ಮನೆ; ಕಳೆದ 1 ವರ್ಷದಿಂದ ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ

ಕಾಫಿನಾಡಿನ ಮಲೆನಾಡು ಭಾಗದಲ್ಲಿ ವರುಣನ ಸಿಂಚನ

ಚಿಕ್ಕಮಗಳೂರು: ತಾಲೂಕಿನ ಮಲೆನಾಡು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗಿದೆ. ಕಳೆದ ಅರ್ಧಗಂಟೆಯಿಂದ ಕೆರೆಮಕ್ಕಿ, ಬೈಗೂರು, ಹಂಗರವಳ್ಳಿ, ಆವುತಿ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಶುರುವಾಗಿದೆ. ಬಿಸಿಲ ಝಳಕ್ಕೆ ಕಂಗಲಾಗಿದ್ದ ಮಲೆನಾಡಿಗರು ಮಳೆ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮಳೆಯಿಂದ ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಭಾಗದಲ್ಲಿ ಸುರಿದ ವರ್ಷದ ಮೊದಲ ಮಳೆ ಇದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More