ರಾಜ್ಯದ ಕೆಲವೆಡೆ ಭಾರೀ ಮಳೆ; ಸಿಡಿಲು ಬಡಿದು ಓರ್ವ ಸಾವು

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 11, 2024 | 7:36 PM

ರಾಜ್ಯದಲ್ಲಿ ಕೆಲದಿನಗಳಿಂದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಭೀಕರ ಬರಕ್ಕೆ ತತ್ತರಿಸಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಅದರಂತೆ ಇಂದು(ಏ.11) ಕೂಡ ವಿಜಯಪುರ, ಕಲಬುರಗಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ವಿಜಯಪುರದ ಇಂಡಿ ತಾಲೂಕಿನಲ್ಲಿ 16 ವರ್ಷದ ಬಾಲಕ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ.

ರಾಜ್ಯದ ಕೆಲವೆಡೆ ಭಾರೀ ಮಳೆ; ಸಿಡಿಲು ಬಡಿದು ಓರ್ವ ಸಾವು
ರಾಜ್ಯದ ವಿವಿಧೆಡೆ ಮಳೆ; ಸಿಡಿಲಿಗೆ ಓರ್ವ ಸಾವು
Follow us on

ವಿಜಯಪುರ, ಏ.11: ರಾಜ್ಯದಲ್ಲಿ ಇಂದು(ಏ.11) ಹಲವೆಡೆ ಭಾರೀ ಮಳೆಯಾಗಿದ್ದು, ಬಿರು ಬಿಸಿಲಿಗೆ ತತ್ತರಿಸಿದ್ದ ಜನ ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ಅದರಂತೆ ವಿಜಯಪುರ(Vijayapura) ತಾಲೂಕು, ತಿಕೋಟ ಗ್ರಾಮದಲ್ಲಿ ಮಳೆ ತಂಪೆರೆದಿದ್ದು, ಇಂಡಿ ತಾಲೂಕಿನ ಮಾವಿನಹಳ್ಳಿಯಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಬೀರಪ್ಪ ನಿಂಗಪ್ಪ ಅವರಾದಿ(16) ಮೃತ ರ್ದುದೈವಿ. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬಿಸಿಲಿನ ಝಳದಿಂದ ಬಳಲಿದ್ದ ಜನರಿಗೆ ತಂಪೆರೆದ ಮಳೆರಾಯ

ಕಲಬುರಗಿ: ಕಳೆದೊಂದು ವಾರದಿಂದ ನಿಗಿನಿಗಿ ಕೆಂಡವಾಗಿದ್ದ ಕಲಬುರಗಿರಯಲ್ಲಿ ಇಂದು ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ಅಫಜಲಪುರ ತಾಲೂಕಿನ ಹಲವೆಡೆ ಗುಡುಗು, ಮಿಂಚು ಸಹಿತ ಧಾರಕಾರ‌ ಮಳೆಯಾಗಿದೆ. ವರ್ಷದ ಮೊದಲ ಮಳೆಗೆ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಲಬುರಗಿ ನಗರದಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ:ಮಳೆಗೆ ಕುಸಿದ ಮನೆ; ಕಳೆದ 1 ವರ್ಷದಿಂದ ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ

ಕಾಫಿನಾಡಿನ ಮಲೆನಾಡು ಭಾಗದಲ್ಲಿ ವರುಣನ ಸಿಂಚನ

ಚಿಕ್ಕಮಗಳೂರು: ತಾಲೂಕಿನ ಮಲೆನಾಡು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗಿದೆ. ಕಳೆದ ಅರ್ಧಗಂಟೆಯಿಂದ
ಕೆರೆಮಕ್ಕಿ, ಬೈಗೂರು, ಹಂಗರವಳ್ಳಿ, ಆವುತಿ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಶುರುವಾಗಿದೆ. ಬಿಸಿಲ ಝಳಕ್ಕೆ ಕಂಗಲಾಗಿದ್ದ ಮಲೆನಾಡಿಗರು ಮಳೆ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮಳೆಯಿಂದ ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಭಾಗದಲ್ಲಿ ಸುರಿದ ವರ್ಷದ ಮೊದಲ ಮಳೆ ಇದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ