Siddeshwar Swamiji: ಸಿದ್ದೇಶ್ವರ ಸ್ವಾಮೀಜಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕೇಳಿಬಂತು ಮೊದಲ ಕೂಗು

ಈ ಹಿಂದೆ ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗೆ ಈಗ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

Siddeshwar Swamiji: ಸಿದ್ದೇಶ್ವರ ಸ್ವಾಮೀಜಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕೇಳಿಬಂತು ಮೊದಲ ಕೂಗು
ಸಿದ್ಧೇಶ್ವರ ಸ್ವಾಮೀಜಿImage Credit source: siddeshwar swamiji
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 03, 2023 | 5:39 PM

ವಿಜಯಪುರ: ನಿಸ್ವಾರ್ಥ ಸೇವೆ, ಮಮಕಾರಗಳಿಲ್ಲದೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಆಶ್ರಯತಾಣವಾಗಿ ಪೂಜ್ಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಪ್ರವಚನದ ಮೂಲಕ ಜನರಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗುತ್ತ ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ (Siddeshwar Swamiji) ಶಿವೈಕ್ಯರಾಗಿದ್ದಾರೆ. ಈಗ ಅವರಿಗೆ ಅವರಿಗೆ ಭಾರತರತ್ನ ಪ್ರಶಸ್ತಿ(Bharat Ratna Award) ನೀಡಬೇಕೆಂಬ ಮೊದಲ ಕೂಗು ಕೇಳಿಬಂದಿದೆ.

ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿಯನ್ನು ವಿನಮೃವಾಗಿಯೇ ನಿರಾಕರಿಸಿದ್ದ ಸಿದ್ಧೇಶ್ವರ ಸ್ವಾಮೀಜಿ, ಅಂದು ಮೋದಿಗೆ ಹೇಳಿದ್ದು ಇದೊಂದೇ ಮಾತು

ಇಂದು(ಜನವರಿ 03) ಸಿದ್ದೇಶ್ವರ ಸ್ವಾಮೀಜಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಾಗಲಕೋಟೆ ಜಿಲ್ಲೆ ಇಳಕಲ್ ವಿಜಯಮಹಾಂತೇಶ್ ಮಠದ ಗುರುಮಹಾಂತ ಶ್ರೀಗಳು, ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಮೊದಲು ಧ್ವನಿ ಎತ್ತಿದ್ದಾರೆ.

ಸಿದ್ದೇಶ್ವರ ಶ್ರೀಗಳು ನಾಡಿನ ಮಹಾನ್ ಸಂತರು. ನಡೆದಾಡುವ ದೇವರು. ಅವರ ಖ್ಯಾತಿ‌ ಮಹಿಮೆ‌ ಜಗದಗಲ,ಮುಗಿಲಗಲ. ಅವರಿಗೆ ಜಾತಿಭೇದ ಪಂತವಿಲ್ಲ. ಹಾಗಾಗಿ ಅವರಿಗೆ ಭಾರತ ಸರಕಾರ ಭಾರತರತ್ನ ನೀಡಬೇಕು. ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದರೆ ಪ್ರಶಸ್ತಿ ಗೌರವ ಹೆಚ್ಚಾಗುತ್ತದೆ. ಆದ ಕಾರಣ ಭಾರತ ರತ್ನ ನೀಡಬೇಕೆಂದು ಆಗ್ರಹಿಸಿದರು.

ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ್ದ ಶ್ರೀಗಳು

ಇನ್ನು 2018 ರಲ್ಲಿ ಕಲಬುರಗಿ ನಗರದಲ್ಲಿ ಸಿದ್ದೇಶ್ವರ ಸ್ವಾಮೀಜಿಯವರ ಪ್ರವಚನ ಕಾರ್ಯಕ್ರಮವಿತ್ತು. ಆಗಲೇ ಕೇಂದ್ರ ಸರ್ಕಾರ ಸಿದ್ದೇಶ್ವರ ಸ್ವಾಮೀಜಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಿತ್ತು. ಆದ್ರೆ ಪ್ರಶಸ್ತಿಯನ್ನು ಶ್ರೀಗಳು ವಿನಯದಿಂದಲೇ ತಿರಸ್ಕರಿಸಿದ್ದರು. ನಾನು ಒಬ್ಬ ಸಂತ. ನನಗೇಕೆ ಪ್ರಶಸ್ತಿ, ಕೇಂದ್ರ ಸರ್ಕಾರ ನೀಡಿರುವ ಪ್ರಶಸ್ತಿ ಮೇಲೆ ನನಗೆ ಗೌರವವಿದೆ. ಆದರೆ ನನಗೆ ಪ್ರಶಸ್ತಿ ಬೇಡ ಅಂತ ತಿರಸ್ಕರಿಸಿದ್ದರು.

ಇದನ್ನೂ ಓದಿ: Siddeshwara Swamiji: ಮೋದಿ ಸರ್ಕಾರ ಪದ್ಮಶ್ರೀ ಕೊಟ್ಟಾಗ ಬೇಡವೆಂದು ತಿರಸ್ಕರಿಸಿದರು, ಸಿದ್ದೇಶ್ವರ ಸ್ವಾಮೀಜಿಗೆ ಕಲಬುರಗಿ ಮೇಲೆ ಎಲ್ಲಿಲ್ಲದ ಪ್ರೀತಿ ಇತ್ತು

ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ ಎಂದು ಸಿದ್ದೇಶ್ವರ ಸ್ವಾಮೀಜಿಗಳು ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದರು.

ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು? ಎಂಬ ಪ್ರಶ್ನೆಗೆ, “ಅವರು ಆಧ್ಯಾತ್ಮ, ಆದರ್ಶ ಮತ್ತು ನೈತಿಕತೆ ಬಗ್ಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ. ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದು,” ಎಂದು ಸ್ವಾಮೀಜಿಯನ್ನು ಹತ್ತಿರದಿಂದ ಕಂಡಿರುವವರೊಬ್ಬರು ಹೇಳುತ್ತಾರೆ

ಶಿವಕುಮಾರ್ ಸ್ವಾಮೀಜಿಗೂ ಸಿಗಲಿಲ್ಲ

ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ್ ಸ್ವಾಮೀಜಿ ಅವರು ಸಹ ಅಸ್ತಂಗತವಾಗಿದ್ದ ಸಂದರ್ಭದಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಒತ್ತಾಯಗಳು ಕೇಳಿಬಂದಿದ್ದವು. ಲಕ್ಷಾಂತರ ಮಂದಿ ಅನ್ನ ಮತ್ತು ಅಕ್ಷರ ದಾಸೋಹ ಮಾಡಿದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಗೌರವ ನೀಡಬೇಕು ಎಂಬ ಆಗ್ರಹದ ನಡುವೆಯೂ ಕೇಂದ್ರ ಸರ್ಕಾರ ನೆನ್ನೆ ಪ್ರಕಟಿಸಿತ್ತು ಭಾರತ ರತ್ನ ಪಟ್ಟಿಯಲ್ಲಿ ಶ್ರೀಗಳ ಹೆಸರು ಇಲ್ಲದಿರವುದಕ್ಕೆ ರಾಜ್ಯದ ಎಲ್ಲ ಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಮರುಪರಿಶೀಲನೆ ನಡೆಸಿ, ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿದ್ದರು.  ಆದರೂ ಸಹ ಅವರಿಗೆ ಪ್ರಶಸ್ತಿ ಸಿಗಲೇ ಇಲ್ಲ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್