AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಪಾಲಿಕೆ ಆಯುಕ್ತರ ಕಾರಿನ ನಾಮಫಲಕದಲ್ಲಿ ಪೂಜ್ಯ ಮಹಾಪೌರರೆಂದು ನಮೂದು; ಪೂಜ್ಯ ಪದ ಬಳಕೆ ತಪ್ಪೇ?

ಇತ್ತೀಚೆಗೆ ಇಸ್ಲಾಂ ಧರ್ಮದಂತೆ ಮೌಲ್ವಿ ಪ್ರಾರ್ಥನೆ ಮಾಡಿದ ನಂತರ ಕಾಂಗ್ರೆಸ್​ನ ಮಾಹೇಜಬೀನ್ ಹೊರ್ತಿ ಅವರು ಅವರು ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಆಗಿ ಅಧಿಕಾರ ಸ್ವೀಕರಿಸಿ ಸುದ್ದಿಯಾಗಿದ್ದರು. ಇದೀಗ, ಆಯುಕ್ತರು ಯಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಮೇಯರ್ ಬಳಕೆ ವಾಹನದ ನಾಮಫಲಕದಲ್ಲಿ ಪೂಜ್ಯ ಮಹಾಪೌರರೆಂದು ನಮೂದಿಸಲಾಗಿದ್ದು, ಆಯುಕ್ತರ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯಿಸಿದೆ.

ವಿಜಯಪುರ ಪಾಲಿಕೆ ಆಯುಕ್ತರ ಕಾರಿನ ನಾಮಫಲಕದಲ್ಲಿ ಪೂಜ್ಯ ಮಹಾಪೌರರೆಂದು ನಮೂದು; ಪೂಜ್ಯ ಪದ ಬಳಕೆ ತಪ್ಪೇ?
ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರ ವಾಹನದ ನಾಮಫಲಕದಲ್ಲಿ ಪೂಜ್ಯ ಮಹಾಪೌರರೆಂದು ನಮೂದು
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Jan 14, 2024 | 7:50 PM

Share

ವಿಜಯಪುರ, ಜ.14: ಇತ್ತೀಚೆಗೆ ಇಸ್ಲಾಂ ಧರ್ಮದಂತೆ ಮೌಲ್ವಿ ಪ್ರಾರ್ಥನೆ ಮಾಡಿದ ನಂತರ ಅಧಿಕಾರ ಸ್ವೀಕರಿಸಿ ಸುದ್ದಿಯಾಗಿದ್ದ ವಿಜಯಪುರ (Vijayapura Municipal Corporation) ಮಹಾನಗರ ಪಾಲಿಕೆ ಮೇಯರ್ ಮಾಹೇಜಬೀನ್ ಹೊರ್ತಿ ಇದೀಗ ತನ್ನ ಸರ್ಕಾರಿ ವಾಹನದ ನಾಮಫಲಕದಲ್ಲಿ ಪೂಜ್ಯ ಮಹಾಪೌರರೆಂದು ನಮೂದಿಸಿ ಯಡವಟ್ಟು ಮಾಡಿಕೊಂಡಿದ್ದಾರೆ.

ಕಳೆದ ಜನೇವರಿ 9 ರಂದು ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿರುವ ಮಾಹೇಜಬೀನ್ ಹೊರ್ತಿ ಅವರಿಗೆ ಸರ್ಕಾರಿಂದ ನೀಡಲಾಗಿರುವ ವಾಹನಕ್ಕೆ ಅಳವಡಿಸಿರುವ ಬೋರ್ಡ್​ನಲ್ಲಿ ಪೂಜ್ಯ ಮಹಾಪೌರರು ಎಂದು ನಮೂದು ಮಾಡಲಾಗಿದೆ. ಕಾನೂನು ಪ್ರಕಾರ ಮಹಾಪೌರರು ಎಂದಷ್ಟೇ ಬರೆಸಬೇಕು.

ಉಳಿದಂತೆ, ಸರ್ಕಾರಿ ವಾಹನದ ನಾಮಫಲಕವನ್ನು ಹೊರತುಪಡಿಸಿ ಇತರೆ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯಲ್ಲಿ ಪೂಜ್ಯ ಮಹಾಪೌರರು ಎಂದು ನಮೂದಿಸಬಹುದು. ಆದರೆ ಮೇಯರ್ ಅವರಿಗೆ ನೀಡಲಾಗಿರುವ ಸರ್ಕಾರಿ ವಾಹನದ ಬೋರ್ಡ್​ನಲ್ಲಿ ಪೂಜ್ಯ ಮಹಾಪೌರರು ಎಂದು ಬರೆಸಿದ್ದನ್ನು ವಿಪಕ್ಷ ಬಿಜೆಪಿ ಸದಸ್ಯರು ವಿರೋಧಿಸುತ್ತಿದ್ದು, ಆಯುಕ್ತರ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ಮಸೀದಿಗಳಾದ ದೇವಸ್ಥಾನಗಳು‌: ಉತ್ಖನನ ನಡೆಸುವಂತೆ ಪುರಾತತ್ವ ಇಲಾಖೆಗೆ ಯತ್ನಾಳ್ ಪತ್ರ

ಬಿಜೆಪಿ ಹಿಡಿತದಲ್ಲಿದ್ದ ವಿಜಯಪುರ ಮಹಾನಗರ ಪಾಲಿಕೆ ಈ ಬಾರಿ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಕಾಂಗ್ರೆಸ್​ ಮಾಹೇಜಬೀನ್ ಹೊರ್ತಿ ಅವರು ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಜನವರಿ 12 ರಂದು ಮಾಹೇಜಬೀನ್ ಹೊರ್ತಿ ಅವರು ಇಸ್ಲಾಂ ಧರ್ಮದಂತೆ ಮೌಲ್ವಿ ಪ್ರಾರ್ಥನೆ ಮಾಡಿದ ಬಳಿಕ ಅಧಿಕಾರ ಸ್ವೀಕರಿಸಿದ್ದರು. ಇದು ಕೆಲವರ ಆಕ್ರೋಶಕ್ಕೂ ಕಾರಣವಾಗಿತ್ತು.

ಜನವರಿ 09 ನಡೆದಿದ್ದ ನಡೆದ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮಹೆಜಬೀನ್ ಹೊರ್ತಿ ಒಟ್ಟು 22 ಮತ ಪಡೆದು ಮೇಯರ್ ಆಗಿ ಆಯ್ಕೆಯಾಗಿದ್ದರು. ಎಸ್​ಟಿಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್​ನ ದಿನೇಶ್ ಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದರು.

10 ಕಾಂಗ್ರೆಸ್ ಸದಸ್ಯರು ಐವರು ಪಕ್ಷೇತರರು, ಇಬ್ಬರು ಎಐಎಂಐಎಂ, ಓರ್ವ ಜೆಡಿಎಸ್ ಸದಸ್ಯರ ಬೆಂಬಲ ಹಾಗೂ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಥೋಡ್ ಮತಗಳ ಬೆಂಬಲದೊಂದಿಗೆ ವಿಜಯಪುರ ಮಹಾನಗರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ ಬಿತ್ತು. ಬಿಜೆಪಿ ಬಹುಮತ ಇದ್ದರೂ ಸಹ ಚುನಾವಣೆ ಬಹಿಷ್ಕರಿಸಿ ಅಧಿಕಾರ ಕಳೆದುಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ