ವಿಜಯಪುರ: ಲಾರಿ ಡಿಕ್ಕಿ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ
ಲಾರಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬಸವನ ಬಾಗೇವಾಡಿ(Basavana Bagewadi) ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಈ ಹಿನ್ನಲೆ ರೊಚ್ಚಿಗೆದ್ದ ಜನರು, ರಾಷ್ಟ್ರೀಯ ಹೆದ್ದಾರಿಯನ್ನ ಬಂದ್ ಮಾಡಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.
ವಿಜಯಪುರ, ಅ.04: ಜಿಲ್ಲೆಯ ಬಸವನ ಬಾಗೇವಾಡಿ(Basavana Bagewadi) ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಲಾರಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮನಗೂಳಿ ನಿವಾಸಿ ಭೀಮಶಿ ಹಿಟ್ನಳ್ಳಿ(56) ಹಾಗೂ ಖಂಡೋಬಾ(60) ಮೃತರು. ಲಾರಿ ಚಾಲಕನ ನಿರ್ಲಕ್ಷ್ಯದಿಂದಲೇ ಬೈಕ್ ಸವಾರ ಸಾವನ್ನಪ್ಪಿರುವ ಆರೋಪ ಕೇಳಿಬಂದಿದ್ದು, ಇಬ್ಬರ ಸಾವಿನಿಂದ ರೊಚ್ಚಿಗೆದ್ದ ಮನಗೂಳಿ ಪಟ್ಟಣದ ಜನತೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯನ್ನ ಬಂದ್ ಮಾಡಿ ಆಕ್ರೋಶ
ಹೌದು, ಘಟನೆಗೆ ಲಾರಿ ಚಾಲಕನೇ ಕಾರಣವೆಂದು ಆರೋಪಿಸಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಜಮಾಯಿಸಿದ ಜನರು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತಿದೆ. ಜೊತೆಗೆ ಸಾವಿಗೀಡಾದ ಬೈಕ್ ಸವಾರರ ಕುಟುಂಬಕ್ಕೆ ಪರಿಹಾರ ನೀಡಬೇಕು. ಈ ಭಾಗದಲ್ಲಿ ಮೇಲ್ಸೆತುವೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಧ್ಯ ಪ್ರತಿಭಟನಾ ನಿರತರ ಮನವೋಲಿಕೆ ಯತ್ನಿಸಿದ್ದು, ಪೊಲೀಸರ ಮನವೋಲಿಕೆಗೆ ಜಗ್ಗದ ಜನರು, ಪ್ರತಿಭಟನೆ ಮುಂದುವರೆಸಿದ್ದಾರೆ.
ಇದನ್ನೂ ಓದಿ:ಬಾಗಲಕೋಟೆ: ನಿದ್ದೆ ಮಂಪರಿನಿಂದ ಕ್ಯಾಂಟರ್ಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ಸಾವು
ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಗೂಡ್ಸ್ ಲಾರಿ ಡಿಕ್ಕಿ; ಚಾಲಕ ಸಾವು
ಹಾವೇರಿ: ಶಿಗ್ಗಾಂವಿ ತಾಲೂಕಿನ ಮಡ್ಲಿ ಕ್ರಾಸ್ ಬಳಿ ನಿಂತಿದ್ದ ಕ್ಯಾಂಟರ್ಗೆ ಡಿಕ್ಕಿಯಾಗಿ ಲಾರಿ ಚಾಲಕ ಅನಿಲ್ ಹರಿಜನ(28) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಅನಿಲ್ ಹಾನಗಲ್ ತಾಲೂಕಿನ ಹರವಿ ಗ್ರಾಮದ ನಿವಾಸಿಯಾಗಿದ್ದು, ಗೋವಾದಿಂದ ಬೆಂಗಳೂರಿಗೆ ಹೊರಟ್ಟಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:24 pm, Fri, 4 October 24