ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ; ಓರ್ವ ವ್ಯಕ್ತಿ ಸಾವು

ರಾಜ್ಯಾದ್ಯಂತ ಮೊಹರಂ ಹಬ್ಬವು ಅದ್ದೂರಿಯಾಗಿ ನಡೆದಿದೆ. ಈ ವೇಳೆ ಹಲವೆಡೆ ಅವಘಡಗಳು ಸಂಭವಿಸಿದ್ದು, ವಿಜಯಪುರ(Vijayapura) ನಗರದ ಮೆಹತರ್ ಮಹಲ್ ಎದುರು ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇತ್ತ ಮಸ್ಕಿ ತಾಲ್ಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಮೊಹರಂ ಅಲಾಯಿ ಕುಣಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಕೊನೆಯುಸಿರೆಳೆದಿದ್ದಾನೆ.

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ; ಓರ್ವ ವ್ಯಕ್ತಿ ಸಾವು
ಮೃತ ವ್ಯಕ್ತಿ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2024 | 9:10 PM

ವಿಜಯಪುರ, ಜು.16: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ವಿಜಯಪುರ(Vijayapura) ನಗರದ ಮೆಹತರ್ ಮಹಲ್ ಎದುರು ನಡೆದಿದೆ. ವಾಹನ ಚಾಲಕ ಮೊಹಮ್ಮದ್ ಇನಾಂದಾರ್(40) ಮೃತ ವ್ಯಕ್ತಿ. ಎದುರಿಗೆ ಬಂದ‌ ಕಾರಿಗೆ ದಾರಿ ಬಿಡುವ ವೇಳೆ ಟ್ರಾನ್ಸ್​ಫಾರ್ಮರ್​ಗೆ ವಾಹನ ತಗುಲಿದೆ. ಈ ವೇಳೆ ಶಾಕ್​ನಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮತ್ತೋರ್ವ ಸಾಧಿಕ್‌ ಎಂಬಾತನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗೋಲಗುಂಬಜ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಹರಂ ಅಲಾಯಿ ಕುಣಿಗೆ ಬಿದ್ದು ವ್ಯಕ್ತಿ ಸಾವು

ರಾಯಚೂರು: ಮಸ್ಕಿ ತಾಲ್ಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಮೊಹರಂ ಅಲಾಯಿ ಕುಣಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಕೊನೆಯುಸಿರೆಳೆದ ಘಟನೆ ನಡೆದಿದೆ. ಯಮನಪ್ಪ ಹಳೆಗೌಡ್ರು(45) ಮೃತ ರ್ದುದೈವಿ. ಇದೇ ಜುಲೈ.14 ರ ರಾತ್ರಿ ಈ ಘಟನೆ ನಡೆದಿದೆ. ಮೊಹರಂ ಹಿನ್ನೆಲೆ ಮೊನ್ನೆ ರಾತ್ರಿ ಬೊಮ್ಮನಾಳ ಗ್ರಾಮದ ಮಸೀದಿ ಎದುರಿನ ಅಲಾಯಿ ಕುಣಿಯಲ್ಲಿ ಆಚರಣೆ ನಡೆಸಲಾಗಿತ್ತು. ಈ ವೇಳೆ ಅಲಾಯ ಕುಣಿಯಲ್ಲಿ ಓಡುತ್ತಿದ್ದಾಗ ಯಮನಪ್ಪ ಕಾಲುಜಾರಿ ಬಿದ್ದಿದ್ದ.

ಇದನ್ನೂ ಓದಿ:ಗೌರಿಬಿದನೂರು ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಯಾವಾಗ ಯಮನಪ್ಪ ಬಿದ್ದನೂ ಕೂಡಲೇ ಆತನ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಸ್ಥಳದಲ್ಲೇ ಯಮನಪ್ಪ ಸಾವನ್ನಪ್ಪಿದ್ದಾನೆ. ಇನ್ನು ಕುಣಿಯಲ್ಲಿ ಬಿದ್ದಿದ್ದವನನ್ನು ಮೇಲೇತ್ತಿದ್ದ ಸ್ಥಳೀಯರು, ಬಿಂದಿಗೆಗಳ ಮೂಲಕ ನೀರು ಎರಚಿ ಯಮನಪ್ಪ ರಕ್ಷಣೆಗೆ ಗ್ರಾಮಸ್ಥರು ಯತ್ನಿಸಿದ್ದಾರೆ. ಆದರೆ, ತೀವ್ರವಾಗಿ ಬೆಂಕಿ ತಗುಲಿದ ಹಿನ್ನೆಲೆ ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ