Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮಟ್ಟಿ ಶಾಸ್ತ್ರಿ ಸಾಗರಕ್ಕೆ ಹೆಚ್ಚಿದ ಒಳಹರಿವು; ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಿದ ಅಧಿಕಾರಿಗಳು

ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ(Lal Bahadur Shastri Sagar Dam) ಕ್ಕೆ ಒಂದೇ ದಿನದಲ್ಲಿ ಒಳಹರಿವು ದ್ವಿಗುಣಗೊಂಡಿದೆ. ಪರಿಣಾಮ ಜಲಾಶಯದಿಂದ ಕೃಷ್ಣಾ ನದಿಗೆ ಬಿಡುತ್ತಿರುವ ನೀರಿನ ಪ್ರಮಾಣ ಸಂಜೆ ವೇಳೆಗೆ ಒಂದೂವರೆ ಲಕ್ಷ ಕ್ಯೂಸೆಕ್ ಮೀರಿದೆ. ಈ ಹಿನ್ನಲೆ ಅಧಿಕಾರಿಗಳು, ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಿದ್ದಾರೆ.

ಆಲಮಟ್ಟಿ ಶಾಸ್ತ್ರಿ ಸಾಗರಕ್ಕೆ ಹೆಚ್ಚಿದ ಒಳಹರಿವು; ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಿದ ಅಧಿಕಾರಿಗಳು
ಆಲಮಟ್ಟಿ ಡ್ಯಾಂಗೆ ಹೆಚ್ಚಿದ ಒಳಹರಿವು, ಕೃಷ್ಣಾ ನದಿ ತೀರದ ಜನರಿಗೆ ಎಚ್ಚರಿಕೆ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 21, 2024 | 9:59 PM

ವಿಜಯಪುರ, ಜು.21: ಮಹಾರಾಷ್ಟ್ರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ(Lal Bahadur Shastri Sagar Dam) ಕ್ಕೆ ಒಂದೇ ದಿನದಲ್ಲಿ ಒಳಹರಿವು ದ್ವಿಗುಣಗೊಂಡಿದೆ. ಪರಿಣಾಮ ಜಲಾಶಯದಿಂದ ಕೃಷ್ಣಾ ನದಿಗೆ ಬಿಡುತ್ತಿರುವ ನೀರಿನ ಪ್ರಮಾಣ ಸಂಜೆ ವೇಳೆಗೆ ಒಂದೂವರೆ ಲಕ್ಷ ಕ್ಯೂಸೆಕ್ ಮೀರಿದೆ. ಇಂದು (ಭಾನುವಾರ) ಬೆಳಿಗ್ಗೆ ಜಲಾಶಯಕ್ಕೆ 87,127 ಕ್ಯೂಸೆಕ್ ಇದ್ದ ಒಳಹರಿವು, ಮಧ್ಯಾಹ್ನದ ವೇಳೆಗೆ 1.25 ಲಕ್ಷಕ್ಕೆ ಏರಿಕೆಯಾಗಿತ್ತು. ಪರಿಣಾಮ ಬೆಳಿಗ್ಗೆ 8 ಕ್ಕೆ 99,584 ಕ್ಯೂಸೆಕ್ ಇದ್ದ ಜಲಾಶಯದ ಹೊರ ಹರಿವಿನ ಪ್ರಮಾಣ ಮಧ್ಯಾಹ್ನದ ವೇಳೆಗೆ 1.25 ಲಕ್ಷ ಕ್ಯೂಸೆಕ್ ಗೆ ಏರಿತ್ತು.

ನಂತರ ಸಾಯಂಕಾಲದ ವೇಳೆಗೆ ಶಾಸ್ತ್ರೀ ಸಾಗರಕ್ಕೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ 1.25 ಲಕ್ಷ ಕ್ಯೂಸೆಕ್ ಗೆ ಏರಿಕೆಯಾದರೆ ಹೊರ ಹರಿವಿನ ಪ್ರಮಾಣ 1.50 ಲಕ್ಷ ಕ್ಯೂಸೆಕ್ ಗೆ ಏರಿಕೆಯಾಗಿದೆ. ಶನಿವಾರ ರಾತ್ರಿಯಿಂದಲೇ ಜಲಾಶಯಕ್ಕೆ ಒಳಹರಿವಿನ ಪ್ರಮಾಣದ ಭಾರಿ ಏರಿಕೆ ಕಂಡು ಬರುತ್ತಲೇ ಇತ್ತು.

ಇದನ್ನೂ ಓದಿ: ಆಲಮಟ್ಟಿಗೆ 3 ದಿನಗಳಲ್ಲಿ 6 ಟಿಎಂಸಿ ಒಳಹರಿವು, ಜು.05ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಪ್ರವಾಹದ ಮುನ್ನೆಚ್ಚರಿಕೆ ನೀಡಿದ ಅಧಿಕಾರಿಗಳು

ಇದನ್ನರಿತ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ಭಾನುವಾರ ಬೆಳಗಿನಿಂದಲೇ ಕೃಷ್ಣಾ ನದಿ ಮೂಲಕ ಬಸವ ಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿ ಬಿಡಲು ಆರಂಭಿಸಿದ್ದರು. ಕಾರಣ, ಶಾಸ್ತ್ರಿ ಸಾಗರದಿಂದ ಕಾಲ ಕಾಲಕ್ಕೆ ನದಿಗೆ ಬಿಡುತ್ತಿರುವ ನೀರಿನ‌ ಕುರಿತು ನದಿ ತೀರದ ಜನರಿಗೆ ಮಾಹಿತಿ ನೀಡುತ್ತ, ಪ್ರವಾಹದ ಮುನ್ನೆಚ್ಚರಿಕೆ ನೀಡಿದ್ದಾರೆ. ಸೂಕ್ತ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ