ಗಣಪತಿ ಚೌಕ್ ಮೇಲೆ ಕಲ್ಲು ಎಸೆತ: ಆರೋಪಿ ಸೊಹೇಲ್, ಜುಬೇರ್ ಹೆಡೆಮುರಿ ಕಟ್ಟಿದ ಪೋಲಿಸರು

ಮಂಡ್ಯ, ದಾವಣಗೆರೆ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಮಾಡಿದ್ದ ದುರುಳರು ವಿಜಯಪುರದಲ್ಲೂ ಗಲಭೆ ಉಂಟು ಮಾಡಲು ಮುಂದಾಗಿದ್ದರು. ಆದರೆ, ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿ‌ ಆರೋಪಿಗಳನ್ನು ಬಂಧಿಸಿದ್ದು, ಕೋಮ ಗಲಾಟೆ ತಪ್ಪಿಸಿದ್ದಾರೆ. ಮಾಡಬಾರದ ಕೆಲಸ ಮಾಡಿದ ಇಬ್ಬರನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಗಣಪತಿ ಚೌಕ್ ಮೇಲೆ ಕಲ್ಲು ಎಸೆತ: ಆರೋಪಿ ಸೊಹೇಲ್, ಜುಬೇರ್ ಹೆಡೆಮುರಿ ಕಟ್ಟಿದ ಪೋಲಿಸರು
ವಿಜಯಪುರದಲ್ಲಿ ಚತುರ್ಮುಖ ಗಣೇಶನಿಗೆ ಕಲ್ಲು ತೂರಿದ ದುಷ್ಕರ್ಮಿಗಳು ಆರೆಸ್ಟ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 04, 2024 | 5:46 PM

ವಿಜಯಪುರ, ಅ.04: ಗುಮ್ಮಟ ನಗರ ವಿಜಯಪುರದ ಐತಿಹಾಸಿಕ ಗಣಪತಿ ಚೌಕ್​ನಲ್ಲಿ ಕಲ್ಲೆಸೆದು ವಿಕೃತಿ ಮೆರೆದಿದ್ದ ಇಬ್ಬರು ಮುಸ್ಲಿಂ ಯುವಕರನ್ನ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ(Vijayapura)ದ ಅಫಜಲಪುರ ಟಕ್ಕೆ ನಿವಾಸಿಗಳಾದ ಸೋಹೆಲ್ ಜಮಾದಾರ್ ಹಾಗೂ ಜುಬೇರ್ ಬಂಧಿತ ಆರೋಪಿಗಳು. ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ ಆಧಾರದ ಮೇಲೆ ಈ ಇಬ್ಬರು ದುರುಳರನ್ನ ಬಂಧಿಸಿದ್ದಾರೆ.

ಏನಿದು ಘಟನೆ?

ಇದೇ ಅಕ್ಟೋಬರ್ 3 ರ ಮಧ್ಯರಾತ್ರಿ 1 ಗಂಟೆಗೆ ಆಟೋದಲ್ಲಿ ಗಣೇಶ ವೃತ್ತದ ಬಳಿ ಬಂದ  ಕಿಡಿಗೇಡಿಗಳು, ಕಲ್ಲು ಎಸೆಯಲು ಮುಂದಾಗುತ್ತಾರೆ. ಈ ವೇಳೆ ಸ್ಥಳಕ್ಕೆ ಬಂದ್ ಹೋಮ ಗಾರ್ಡ್, ಇಬ್ಬರನ್ನ ತಡೆಯಲು ಮುಂದಾಗಿದ್ದರು. ಈ ವೇಳೆ ಇಬ್ಬರು ಕಲ್ಲು ತೂರಾಟ ಮಾಡಿ, ಬಳಿಕ ಅದರ ಪೋಟೋ ತೆಗೆದುಕೊಂಡು ಹೋಗುತ್ತಾರೆ. ವಿಡಿಯೋದಲ್ಲಿ ಕಂಡ ಆಟೋದ ಆಧಾರದ ಮೇಲೆ ಆರೋಪಿಗಳನ್ನ ಬಂಧಿಸಿದ್ದಾರೆ.

ಇದನ್ನೂ ಓದಿ:ವಿಜಯಪುರದ ಚತುರ್ಮುಖ ಗಣೇಶನಿಗೆ ಕಲ್ಲು ತೂರಿದ ದುಷ್ಕರ್ಮಿಗಳು; ಸ್ಥಳದಲ್ಲಿ ಬಿಗುವಿನ ವಾತಾವರಣ

ಘಟನೆ ಬಳಿಕ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟನೆ ಮುಖಂಡರು ದೂರು ದಾಖಲಿಸಿದ್ದರು. ಜೊತೆಗೆ ಕತ್ಯದಲ್ಲಿ ಸೆರೆಸಿಕ್ಕ ಆಟೋ, ನಿತ್ಯ ಆಶ್ರಮ ರಸ್ತೆಯಲ್ಲಿ ಓಡಾಡುತ್ತಿದ್ದ ಬಗ್ಗೆ ಮಾಹಿತಿ ನೀಡಿದ್ದರು. ಇದೀಗ ತನಿಖೆ ನಡೆಸಿ ಇಬ್ಬರನ್ನ ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಬೇಕಂತಲೇ ಕಲ್ಲು ಎಸೆದು ಕೋಮ ಗಲಭೆ ಹಬ್ಬಿಸಲು ಮುಂದಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ವಿಡಿಯೋ ವೈರಲ್ ಆಗುತ್ತಲ್ಲೇ ಆಕ್ರೋಶಗೊಂಡ ಹಿಂದೂ ಮುಖಂಡರು, ನೇರ ಸವಾಲು ಹಾಕಿದ್ದಾರೆ. ನವರಾತ್ರಿ ಹಬ್ಬದ ಪ್ರಯುಕ್ತ ಶಾಂತವಾಗಿದ್ದೇವೆ. ಮುಂದಿನ ದಿನಗಳಲ್ಲಿ ನಿಮಗೆ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ‌.

ಘಟನೆ ಬಳಿಕ ಇಡೀ ವಿಜಯಪುರದಲ್ಲಿ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಂತವಾಗಿದ್ದ ವಿಜಯಪುರದಲ್ಲಿ ದುರುಳರಿಬ್ಬರು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಹಿಂದೂಗಳ ಸಂಯಮದಿಂದ ವರ್ತಿಸಿ ಪರಿಸ್ಥಿತಿ ಶಾಂತವಾಗಿಸಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ