ಕಳ್ಳತನಕ್ಕೆ ಬಂದಿದ್ದ ಕಳ್ಳನ ಕರಾಮತ್ತು; ಸಾರ್ವಜನಿಕರ ಕೈಗೆ ಸಿಗ್ತಿದ್ದಂತೆ ಬಟ್ಟೆ ಬರೆ ಕಳಚಿ‌ ನಗ್ನನಾಗಿ ಪರಾರಿಯಾಗಲು ಯತ್ನ

ಇತ್ತೀಚೆಗೆ ಕಳ್ಳತನ ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಪೊಲೀಸರು ಎಷ್ಟೇ ಕ್ರಮಕೈಗೊಂಡರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ವಿಜಯಪುರ (Vijayapura) ನಗರದ ಶಿಕಾರಿಖಾನೆಯಲ್ಲಿ ಕಳ್ಳತನ ಮಾಡಲು‌ ಬಂದಿದ್ದ ಕಳ್ಳ, ಸಾರ್ವಜನಿಕರ ಕೈಗೆ ಸಿಗುತ್ತಿದ್ದಂತೆ ಬಟ್ಟೆ ಬರೆ ಕಳಚಿ‌ ನಗ್ನನಾಗಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಈ ಕುರಿತು ಎಪಿಎಂಸಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳತನಕ್ಕೆ ಬಂದಿದ್ದ ಕಳ್ಳನ ಕರಾಮತ್ತು; ಸಾರ್ವಜನಿಕರ ಕೈಗೆ ಸಿಗ್ತಿದ್ದಂತೆ ಬಟ್ಟೆ ಬರೆ ಕಳಚಿ‌ ನಗ್ನನಾಗಿ ಪರಾರಿಯಾಗಲು ಯತ್ನ
ನಗ್ನನಾಗಿ ಪರಾರಿಯಾಗಲು ಯತ್ನಿಸಿದ ಕಳ್ಳ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 07, 2024 | 3:02 PM

ವಿಜಯಪುರ, ಜು.07: ಕಳ್ಳತನ ಮಾಡಲು‌ ಬಂದಿದ್ದ ಕಳ್ಳ, ಸಾರ್ವಜನಿಕರ ಕೈಗೆ ಸಿಗುತ್ತಿದ್ದಂತೆ ಬಟ್ಟೆ ಬರೆ ಕಳಚಿ‌ ನಗ್ನನಾಗಿ ಪರಾರಿಯಾಗಲು ಯತ್ನಿಸಿದ ಘಟನೆ ವಿಜಯಪುರ(Vijayapura) ನಗರದ ಶಿಕಾರಿಖಾನೆಯಲ್ಲಿ ನಡೆದಿದೆ. ನಗ್ನಗೊಂಡ ಸ್ಥಿತಿಯಲ್ಲೇ‌ ಜನರು ಕಳ್ಳನನ್ನ ಹಿಡಿದು ಕಟ್ಟಿ ಹಾಕಿದ್ದಾರೆ. ಇನ್ನು ಈ ಕಳ್ಳ, ತನ್ನ ದೇಹಕ್ಕೆಲ್ಲ ಎಣ್ಣೆ ಹಚ್ಚಿಕೊಂಡು ಬಂದಿದ್ದನಂತೆ. ಕೂಡಲೇ ಆತನನ್ನು ಹಗ್ಗದಿಂದ ಕಟ್ಟಿ ಪೊಲಿಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಎಪಿಎಂಸಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾಸ್ ಕಟರ್ ಬಳಸಿ ಎಟಿಎಂ ನಲ್ಲಿ ಹಣ ಕಳ್ಳತನ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದ ಎಟಿಎಂ ನಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ತಡರಾತ್ರಿ ಎಟಿಎಂ ಗೆ ನುಗ್ಗಿದ ಖದೀಮರು, ಸಿಸಿ ಕ್ಯಾಮರಾಗಳಿಗೆ ಪೆಯೀಂಟ್ ಸ್ಪ್ರೇ ಮಾಡಿ. ಗ್ಯಾಸ್​ ಕಟರ್​ ಬಳಸಿ ಎಸ್​ಬಿಐ ಬ್ಯಾಂಕ್​ಗೆ ಸೇರಿದ ಎಟಿಎಮ್​ನಿಂದ ಬರೋಬ್ಬರಿ 15 ಲಕ್ಷಕ್ಕೂ ಅಧಿಕ ಹಣವನ್ನು ಕಳ್ಳತನ ಮಾಡಿ ಎಸ್ಕೇಫ್​ ಆಗಿದ್ದಾರೆ. ಯಾವುದೇ ಸೆಕ್ಯೂರಿಟಿ ಗಾರ್ಡ್​ಗಳಿಲ್ಲದ ಕಾರಣ ಈ ಘಟನೆ ನಡೆದಿದೆ. ಇನ್ನು ಬೆಳಗ್ಗೆ ಎಟಿಎಂ ಓಪನ್ ಆಗಿರುವುದನ್ನ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು  ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಮನೆ ಬೀಗ ಮುರಿದು ಚಿನ್ನಾಭರಣ ಕಳ್ಳತನ; ರಾಯರ ದರ್ಶನ ಪಡೆದು ಮನೆಗೆ ವಾಪಸ್ಸಾದವರಿಗೆ ಬಿಗ್ ಶಾಕ್

ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಬೆಸಗರಹಳ್ಳಿ ಗ್ರಾಮದ ನಿವಾಸಿ ಮಧುಕುಮಾರ್(34) ಮೃತ ರ್ದುದೈವಿ. ಈ ಕುರಿತು ಮದ್ದೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸ್ಥಳೀಯ ಪತ್ರಿಕೆ ವರದಿಗಾರನಾಗಿದ್ದ ಮಧುಕುಮಾರ ಕೆಲಸ ಮುಗಿಸಿ ರಾತ್ರಿ 9 ಗಂಟೆಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Sun, 7 July 24

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ