AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಯುವಕರ ಪುಂಡಾಟ; ಇಬ್ಬರು ಅರೆಸ್ಟ್​

ಗಣೇಶ ವಿಸರ್ಜನೆ ವೇಳೆ ಇಬ್ಬರು ವ್ಯಕ್ತಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಮೆರೆದ ಘಟನೆ ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ನಡೆದಿದೆ. ಫೈರ್​ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಯುವಕರ ಪುಂಡಾಟ; ಇಬ್ಬರು ಅರೆಸ್ಟ್​
ಗಣೇಶ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಯುವಕರ ಪುಂಡಾಟ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Sep 18, 2024 | 4:59 PM

Share

ವಿಜಯಪುರ, ಸೆ.18: ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಇಬ್ಬರು ವ್ಯಕ್ತಿಗಳು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಇದೀಗ ಆರೋಪಿಗಳಾದ ಪ್ರಶಾಂತ ಬಿರಾದಾರ ಹಾಗೂ ಮುದಕಪ್ಪ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಸಪ್ಟೆಂಬರ್ 14 ರಂದು ನಡೆದಿದ್ದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗಾಳಿಯಲ್ಲಿ ಗುಂಡು ಹಾರಿಸುವ ವಿಡಿಯೋ ವೈರಲ್

ಹೌದು, ಪ್ರಶಾಂತ್​ ಬಿರಾದಾರ ಎಂಬುವವರ ಬಳಿಯಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್​ನಿಂದ ಮುದಕಪ್ಪ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಇದಕ್ಕೂ ಮೊದಲು ಪ್ರಶಾಂತ್​ ಬಿರಾದಾರ್ ಕೂಡ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಪರವಾನಿಗೆ ಹೊಂದಿದ ಪಿಸ್ತೂಲ್​ನನ್ನು ಮತ್ತೊಬ್ಬರ ಕೈಗೆ ಕೊಟ್ಟ ಪ್ರಶಾಂತ್​, ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಮಾಡಿದ್ದ ಆರೋಪದ ಮೇಲೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ:Video: ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ನವ ದಂಪತಿ ವಿರುದ್ಧ ಎಫ್‌ಐಆರ್ ದಾಖಲು

ನಿಂತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ, ಗಾಯಾಳು ಸ್ಥಿತಿ ಗಂಭೀರ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿಯಾಗಿದ್ದು, ಸವಾರನ ಸ್ಥಿತಿ ಗಂಭೀರವಾಗಿದೆ. ತುಮಕೂರಿನ SIT ಬಡಾವಣೆ ನಿವಾಸಿ ನಂದೀಶ್(47)ಗಾಯಾಳು. ಇನ್ನು ಅಪಘಾತವಾಗುತ್ತಿದ್ದಂತೆ ಕೂಡಲೇ ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Wed, 18 September 24

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More