AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಟಿ ಜಿಟಿ ಮಳೆಗೆ ವಿಜಯಪುರದಲ್ಲಿ ಕುಸಿದು ಬಿದ್ದ ಸಾರ್ವಜನಿಕ ಶೌಚಾಲಯದ, ಮೂವರು ಮಹಿಳೆಯರಿಗೆ ಗಾಯ

ಜಿಲ್ಲೆಯಲ್ಲಿ ಜಿಟಿ ಜಿಟಿ‌ ಮಳೆ ಶುರವಾಗಿದೆ. ಅದರಂತೆ ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ಮಳೆಗೆ‌ ‌ನೆನೆದು ಸಾರ್ವಜನಿಕ‌ ಶೌಚಾಲಯದ ಮೇಲ್ಛಾವಣಿ ಕುಸಿದು ಬಿದ್ದು ಮೂವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಿಟಿ ಜಿಟಿ ಮಳೆಗೆ ವಿಜಯಪುರದಲ್ಲಿ ಕುಸಿದು ಬಿದ್ದ ಸಾರ್ವಜನಿಕ ಶೌಚಾಲಯದ, ಮೂವರು ಮಹಿಳೆಯರಿಗೆ ಗಾಯ
ವಿಜಯಪುರದಲ್ಲಿ ಸಾರ್ವಜನಿಕ ಶೌಚಾಲಯ ಕುಸಿದು ಬಿದ್ದು ಮಹಿಳೆಯರಿಗೆ ಗಾಯ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jul 21, 2023 | 10:22 AM

Share

ವಿಜಯಪುರ, ಜು.21: ಜಿಲ್ಲೆಯಲ್ಲಿ ಜಿಟಿ ಜಿಟಿ‌ ಮಳೆ ಶುರವಾಗಿದೆ. ಅದರಂತೆ ವಿಜಯಪುರ(Vijayapura) ತಾಲೂಕಿನ ಜುಮನಾಳ ಗ್ರಾಮದಲ್ಲಿ ಮಳೆಗೆ‌ ‌ನೆನೆದು ಸಾರ್ವಜನಿಕ‌ ಶೌಚಾಲಯದ ಮೇಲ್ಛಾವಣಿ ಕುಸಿದು ಬಿದ್ದು ಮೂವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಮಲಾಬಾಯಿ ಬಗಲಿ, ಮುಸ್ಕಾನ್, ಮುರ್ತುಜಭಿಗೆ ಎಂಬ ಮೂವರು ಮಹಿಳೆಯರು ಶೌಚಾಲಯದಲ್ಲಿ‌ ಸಿಲುಕಿದ್ದಾರೆ. ಕೂಡಲೇ ಗ್ರಾಮಸ್ಥರು ಹೋಗಿ ಮೂವರು ಮಹಿಳೆಯರನ್ನು‌ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ, ಸಧ್ಯ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿರಂತರ ಮಳೆಗೆ ಕುಸಿಯುತ್ತಿರುವ ಶಾಲಾ ಕೊಠಡಿ ಮೇಲ್ಚಾವಣಿ

ಕೊಪ್ಪಳ: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜಿಟಿ ಜಿಟಿ ಮಳೆಗೆ ಜಿಲ್ಲೆಯ ಗಂಗಾವತಿ ತಾಲೂಕಿನ ಬಸವನದುರ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಮೇಲ್ಚಾವಣಿಗಳು ಕುಸಿಯತ್ತಿದೆ. ಯಾವಾಗ ಮೇಲ್ಚಾವಣಿ ಕುಸಿತದಯೋ ಎಂಬ ಭಯದಲ್ಲೇ ಮಕ್ಕಳು ಪಾಠ ಕೇಳುವ ಪರಿಸ್ಥಿತಿ ಉಂಟಾಗಿದೆ. ಇನ್ನು ಕೊಠಡಿ ಸೋರುತ್ತಿದ್ದರೂ ಕೂಡ ಅದೇ ಕೋಣೆಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ.

ಇದನ್ನೂ ಓದಿ:ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ಥ; ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತ

ಸಣ್ಣ ಮಳೆಗೆ ಕಾಲುವೆಯಂತೆ ಹರಿಯುತ್ತದೆ ನೀರು; ಶಾಲೆಗೆ ಹೋಗುವ ದಾರಿಯು ಮುಚ್ಚುವ ಆತಂಕ

ವಿಜಯನಗರ: ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆಯ ಅಬ್ಬರ ಜೋರಾಗಿದೆ. ಇದೀಗ ಈ ಸಣ್ಣ ಮಳೆಗೆ ನೀರು ಕಾಲುವೆಯಂತೆ ಹರಿಯುತ್ತಿದೆ. ಇನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಚಪ್ಪರದಳ್ಳಿಯ ಕೊರಗಲ್ ಗೋಪಾಲ ಶೆಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇದರ ಎಫೆಕ್ಟ್​ ಜೋರಾಗಿದೆ. ಹೌದು, ಮಳೆಯಿಂದಾಗಿ ಶಾಲಾ ಆವರಣದಲ್ಲಿ ಹೊಂಡವೇ ನಿರ್ಮಾಣವಾಗುತ್ತಿದೆ. ಶಾಲೆಗೆ ಹೋಗುವುದಕ್ಕೆ ಇರುವ ಸಣ್ಣ ದ್ವಾರ ಕೂಡ ಸಂಪೂರ್ಣ ತುಂಬುತ್ತಿದ್ದು, ದಾರಿ ಬಂದಾಗುವ ಆತಂಕ ಎದುರಾಗಿದೆ. ಇದಲ್ಲದೆ ಶೌಚಾಲಯದ ನೀರು ಕೂಡ ಇದಕ್ಕೆ ಸೇರ್ಪಡೆಯಾಗುತ್ತಿದ್ದು, ಇದರಿಂದ ಮಕ್ಕಳಿಗೆ ತೀವ್ರ ಸಮಸ್ಯೆ ಎದುರಾಗುತ್ತಿದೆ. ಈ ಸಂಬಂಧ ಕೂಡಲೇ ಸಮಸ್ಯೆ ಸರಿಪಡಿಸಲು ಇಲಾಖೆಗೆ ಪೊಷಕರು ಒತ್ತಾಯ ಮಾಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ