ವಿಜಯಪುರ, ಜು.21: ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಶುರವಾಗಿದೆ. ಅದರಂತೆ ವಿಜಯಪುರ(Vijayapura) ತಾಲೂಕಿನ ಜುಮನಾಳ ಗ್ರಾಮದಲ್ಲಿ ಮಳೆಗೆ ನೆನೆದು ಸಾರ್ವಜನಿಕ ಶೌಚಾಲಯದ ಮೇಲ್ಛಾವಣಿ ಕುಸಿದು ಬಿದ್ದು ಮೂವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಮಲಾಬಾಯಿ ಬಗಲಿ, ಮುಸ್ಕಾನ್, ಮುರ್ತುಜಭಿಗೆ ಎಂಬ ಮೂವರು ಮಹಿಳೆಯರು ಶೌಚಾಲಯದಲ್ಲಿ ಸಿಲುಕಿದ್ದಾರೆ. ಕೂಡಲೇ ಗ್ರಾಮಸ್ಥರು ಹೋಗಿ ಮೂವರು ಮಹಿಳೆಯರನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ, ಸಧ್ಯ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಪ್ಪಳ: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜಿಟಿ ಜಿಟಿ ಮಳೆಗೆ ಜಿಲ್ಲೆಯ ಗಂಗಾವತಿ ತಾಲೂಕಿನ ಬಸವನದುರ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಮೇಲ್ಚಾವಣಿಗಳು ಕುಸಿಯತ್ತಿದೆ. ಯಾವಾಗ ಮೇಲ್ಚಾವಣಿ ಕುಸಿತದಯೋ ಎಂಬ ಭಯದಲ್ಲೇ ಮಕ್ಕಳು ಪಾಠ ಕೇಳುವ ಪರಿಸ್ಥಿತಿ ಉಂಟಾಗಿದೆ. ಇನ್ನು ಕೊಠಡಿ ಸೋರುತ್ತಿದ್ದರೂ ಕೂಡ ಅದೇ ಕೋಣೆಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ.
ಇದನ್ನೂ ಓದಿ:ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ಥ; ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತ
ವಿಜಯನಗರ: ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆಯ ಅಬ್ಬರ ಜೋರಾಗಿದೆ. ಇದೀಗ ಈ ಸಣ್ಣ ಮಳೆಗೆ ನೀರು ಕಾಲುವೆಯಂತೆ ಹರಿಯುತ್ತಿದೆ. ಇನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಚಪ್ಪರದಳ್ಳಿಯ ಕೊರಗಲ್ ಗೋಪಾಲ ಶೆಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇದರ ಎಫೆಕ್ಟ್ ಜೋರಾಗಿದೆ. ಹೌದು, ಮಳೆಯಿಂದಾಗಿ ಶಾಲಾ ಆವರಣದಲ್ಲಿ ಹೊಂಡವೇ ನಿರ್ಮಾಣವಾಗುತ್ತಿದೆ. ಶಾಲೆಗೆ ಹೋಗುವುದಕ್ಕೆ ಇರುವ ಸಣ್ಣ ದ್ವಾರ ಕೂಡ ಸಂಪೂರ್ಣ ತುಂಬುತ್ತಿದ್ದು, ದಾರಿ ಬಂದಾಗುವ ಆತಂಕ ಎದುರಾಗಿದೆ. ಇದಲ್ಲದೆ ಶೌಚಾಲಯದ ನೀರು ಕೂಡ ಇದಕ್ಕೆ ಸೇರ್ಪಡೆಯಾಗುತ್ತಿದ್ದು, ಇದರಿಂದ ಮಕ್ಕಳಿಗೆ ತೀವ್ರ ಸಮಸ್ಯೆ ಎದುರಾಗುತ್ತಿದೆ. ಈ ಸಂಬಂಧ ಕೂಡಲೇ ಸಮಸ್ಯೆ ಸರಿಪಡಿಸಲು ಇಲಾಖೆಗೆ ಪೊಷಕರು ಒತ್ತಾಯ ಮಾಡಿದ್ದಾರೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ