ಕುಡಿದ ಮತ್ತಿನಲ್ಲಿ ಚಿಕಿತ್ಸೆ ಆರೋಪ: ರೋಗಿ ಸಾವು, ಶವವಿಟ್ಟು ಕುಟುಂಬಸ್ಥರಿಂದ ಪ್ರತಿಭಟನೆ
ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವನ್ನಪ್ಪಿರುವ ಆರೋಪ ಮಾಡಿ, ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಮುಂಭಾಗದಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಸ್ಪತ್ರೆ ಎದುರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ, ನ.01: ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಡಯಾಲಿಸಿಸ್(Dialysis) ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬ ಸಾವನ್ನಪ್ಪಿದ ಆರೋಪ ವಿಜಯಪುರ(Vijayapura) ಜಿಲ್ಲೆಯ ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಬಂದಿದೆ. ಬಿಸ್ಮಿಲ್ಲಾ ನದಾಫ್(35) ಮೃತ ರ್ದುದೈವಿ. ಮೃತ ನದಾಫ್ ಇಂಡಿ ತಾಲೂಕಿನ ಮಾವಿನಹಳ್ಳಿ ನಿವಾಸಿಯಾಗಿದ್ದು, ಕಿಡ್ನಿ ಸಮಸ್ಯೆಯಿಂದ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದ. ಇದೀಗ ದಿಢೀರ್ ಸಾವನ್ನಪ್ಪಿದ್ದು, ಕುಡಿದ ಮತ್ತಿನಲ್ಲಿ ನದಾಫ್ಗೆ ವೈದ್ಯರು ಚಿಕಿತ್ಸೆ ನೀಡಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ. ಆಸ್ಪತ್ರೆ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯದಿಂದ ರೋಗಿ ಕೊನೆಯುಸಿರೆಳೆದಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆ ಮುಂದೆ ನದಾಫ್ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಕುಡಿದ ಮತ್ತಿನಲ್ಲಿ ಡಯಾಲಿಸಿಸ್ ಚಿಕಿತ್ಸೆ ನೀಡಿದ ಆರೋಪ
ನಿನ್ನೆ ನದಾಫ್ ಡಯಾಲಿಸಿಸ್ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಆಗಮಿಸಿದ್ದ. ಈ ವೇಳೆ ಸಿಬ್ಬಂದಿ ಬಸವರಾಜ ಹಂಜಗಿ ಎಂಬಾತ ಮದ್ಯ ಸೇವಿಸಿ ಡಯಾಲಿಸಿಸ್ ಚಿಕಿತ್ಸೆ ನೀಡುತ್ತಿದ್ದನಂತೆ. ಜೊತೆಗೆ ವೈದ್ಯರ ನಿರ್ಲಕ್ಷ್ಯದಿಂದಲೂ ರೋಗಿ ಸಾವನ್ನಪ್ಪಿರುವ ಆರೋಪ ಮಾಡಿ, ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಮುಂಭಾಗದಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಸ್ಪತ್ರೆ ಎದುರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಪಾಂಡವಪುರ ಸರ್ಕಾರಿ ಆಸ್ಪತ್ರೆ ಎಡವಟ್ಟು: ಡಿ ಫ್ರಿಡ್ಜ್ ದುರಸ್ಥಿ, ಕೊಳೆತು ದುರ್ನಾತ ಬೀರಿದ ಅನಾಮಿಕ ಮೃತ ದೇಹ
ಬೈಕ್ ನಿಲ್ಲಿಸಿಕೊಂಡಿದ್ದವನಿಗೆ BMW ಕಾರು ಡಿಕ್ಕಿ
ಬೆಂಗಳೂರು: ನಗರದ ತೋಟದಗುಡ್ಡದಹಳ್ಳಿ ಬಸ್ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿಕೊಂಡಿದ್ದವನಿಗೆ ಬಿಎಂಡಬ್ಯೂ ಕಾರು ಡಿಕ್ಕಿಯಾಗಿ ಸವಾರನಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನಬೈಕ್ ಸವಾರ ಅಂದ್ರಹಳ್ಳಿಯ ಮಂಜುನಾಥ್ ಎಂದು ತಿಳಿದುಬಂದಿದೆ. ಸ್ನೇಹಿತನಿಗಾಗಿ ಬಸ್ ನಿಲ್ದಾಣದಲ್ಲಿ ಮಂಜುನಾಥ್ ಕಾಯತ್ತಿದ್ದ. ಈ ವೇಳೆ ಧೀಡಿರ್ ಬಂದು ಬೈಕ್ ಸವಾರನಿಗೆ ಗುದ್ದಿದೆ. ಬಳಿಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬ, ಬಸ್ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:39 pm, Wed, 1 November 23