CLARIFICATION: ಕಪ್ಪು ಶಿಲೆಯ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ, ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಸ್ಪಷ್ಟನೆ

ಈ ಪ್ರದೇಶದ ವ್ಯಾಪ್ತಿಯಲ್ಲಿ ಕಡಿಮೆ ಮತ್ತು ಮಧ್ಯಮ ತೀವ್ರತೆಯುಳ್ಳ ಭೂಕಂಪನಸಾಧ್ಯತೆ ಇರುವುದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿರುವುದಿಲ್ಲ. ಇದಲ್ಲದೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ತಜ್ಞರ ತಂಡವನ್ನು ಜಿಲ್ಲೆಗೆ ನಿಯೋಜಿಸಲು ಸರ್ಕಾರಕ್ಕೆ ಸಹ ಪತ್ರ ಬರೆಯಲಾಗಿದ್ದು ಶೀಘ್ರವೆ ತಜ್ಞರ ತಂಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಲಿದೆ.

CLARIFICATION: ಕಪ್ಪು ಶಿಲೆಯ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ, ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಸ್ಪಷ್ಟನೆ
Clarification: ಕಪ್ಪು ಶಿಲೆಯ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ, ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಸ್ಪಷ್ಟನೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 24, 2022 | 8:51 PM

ಕಪ್ಪು ಶಿಲೆಯಿಂದ ಆವೃತವಾಗಿರುವ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಯಾವುದೇ ಹಾನಿ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ (Vijayapura DC) ಸ್ಪಷ್ಟನೆ ನೀಡಿದ್ದಾರೆ. ಇದು ಕಡಿಮೆ ಮತ್ತು ಮಧ್ಯಮ ತೀವ್ರತೆಯುಳ್ಳ ವಲಯವಾಗಿದೆ. ಹೀಗಾಗಿ ಈ ರೀತಿಯ ಪ್ರದೇಶಗಳಲ್ಲಿನ ಭೂಕಂಪನಗಳು (Intermittent earthquakes) ಯಾವುದೇ ಹಾನಿ ಸೃಷ್ಟಿಸುವುದಿಲ್ಲ. ಆದ್ದರಿಂದ ಸಾರ್ವಜನಿಕರು ಭಯ ಪಡುವ ಅಗತ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮೇಲಿಂದ ಮೇಲೆ ಕಡಿಮೆ ತೀವ್ರತೆ ಉಳ್ಳ ಭೂಕಂಪನ ಸಂಭವಿಸುತ್ತಿದೆ. ಈ ಬಗ್ಗೆ ಆಗಸ್ಟ್ 23ರಂದು ಜಿಲ್ಲಾಡಳಿತದಿಂದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿ ಜಿಲ್ಲೆಯಲ್ಲಿಯ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಸುತ್ತಿರುವ ತಾಂತ್ರಿಕ ತಜ್ಞರ ಹಾಗೂ ಜಿಲ್ಲೆಯಲ್ಲಿ ಲಭ್ಯವಿರುವ ಸಂಪನ್ಮೂಲಗಳ ಕ್ರೋಡೀಕರಿಸಿ ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ.

ಜಿಲ್ಲೆಯು ಭೌಗೋಳಿಕವಾಗಿ ದಖನ್ ಪ್ರಸ್ಥಭೂಮಿಯಲ್ಲಿದ್ದು, ಈ ಪ್ರದೇಶವು ಅಂದಾಜು ಶೇ.80 ರಷ್ಟು ಬೆಸಾಲ್ಟ್ (ಕಪ್ಪು ಶಿಲೆ)ಶಿಲೆಯಿಂದ ಆವೃತವಾಗಿದ್ದು, ಭಾರತದ ಭೂಕಂಪನ ವಲಯಗಳ ನಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಭೂಸ್ಥರವು ಝೋನ್-2 ಮತ್ತು ಝೋನ್-3 ಪ್ರದೇಶಗಳ ವ್ಯಾಪ್ತಿಯಲ್ಲಿ ಗುರುತಿಸಲಾಗಿರುತ್ತದೆ. ಇದು ಕಡಿಮೆ ಮತ್ತು ಮಧ್ಯಮ ತೀವ್ರತೆಯುಳ್ಳ ವಲಯವಾಗಿರುತ್ತದೆ. ಈ ರೀತಿಯ ಪ್ರದೇಶಗಳಲ್ಲಿನ ಭೂಕಂಪನಗಳು ಯಾವುದೇ ಹಾನಿಯನ್ನು ಸೃಷ್ಟಿಸುವುದಿಲ್ಲ.

ಹೀಗಾಗಿ ಈ ಪ್ರದೇಶದ ವ್ಯಾಪ್ತಿಯಲ್ಲಿ ಕಡಿಮೆ ಮತ್ತು ಮಧ್ಯಮ ತೀವ್ರತೆಯುಳ್ಳ ಭೂಕಂಪನಸಾಧ್ಯತೆ ಇರುವುದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿರುವುದಿಲ್ಲ. ಇದಲ್ಲದೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ತಜ್ಞರ ತಂಡವನ್ನು ಜಿಲ್ಲೆಗೆ ನಿಯೋಜಿಸಲು ಸರ್ಕಾರಕ್ಕೆ ಸಹ ಪತ್ರ ಬರೆಯಲಾಗಿದ್ದು ಶೀಘ್ರವೆ ತಜ್ಞರ ತಂಡ ಜಿಲ್ಲೆಗೆ ಭೇಟಿ ನೀಡಿ ವಿಸ್ತೃತವಾಗಿ ಪರಿಶೀಲನೆ ಕೈಗೊಳ್ಳಲಿದೆ.

ಇದಲ್ಲದೆ ಶಾಲಾ-ಕಾಲೇಜು, ಹಾಸ್ಟೆಲ್‌ಗಳಲ್ಲಿ ಭೂಕಂಪನ ಕುರಿತು ಅರಿವನ್ನು ಮೂಡಿಸಲು ವಿಪತ್ತು ನಿರ್ವಹಣಾ ಸಭೆಯಲ್ಲಿ ಸೂಚಿಸಿದ್ದು ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮ ಅನುಸರಿಸಿ:

ಆದಾಗ್ಯೂ ಇಷ್ಟರ ಮಧ್ಯೆ ಭೂಕಂಪನ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಗಳಂತೆ ಕೆಲವು ಪ್ರಮುಖ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿಗಳು ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.

* ಮನೆಯ ಕಪಾಟುಗಳನ್ನು ಬಲಪಡಿಸುವುದು ಹಾಗೂ ಎತ್ತರದ ಪಿಠೋಪಕರಣಗಳು ಇದ್ದಲ್ಲಿ ಗೋಡೆಗೆ ಅಲುಗಾಡದಂತೆ ಸ್ಥಿರಪಡಿಸಬೇಕು.

* ಮನೆಯಲ್ಲಿ ಮತ್ತು ಸಮೀಪದಲ್ಲಿ ಸುರಕ್ಷಿತ ಆಶ್ರಯ ತಾಣಗಳನ್ನು ಮತ್ತು ಅವುಗಳ ಮಾರ್ಗಗಳನ್ನು ಗುರುತಿಸಿಟ್ಟುಕೊಳ್ಳಬೇಕು.

* ಕಟ್ಟಡದಲ್ಲಿ ಯಾವುದೇ ಸಮಸ್ಯೆ ಇದ್ದಲ್ಲಿ ಎಂಜಿನೀಯರ್‌ಗಳಿಂದ ಸಲಹೆ ಪಡೆದು ಮರು ರೂಪಿಸಿಕೊಳ್ಳುವುದು.

* ಗಾಜಿನ ಕಿಟಕಿಯಿಂದ ದೂರವಿರಬೇಕು.

* ನಿಮ್ಮನ್ನು ಸುರಕ್ಷಿಸಿಕೊಳ್ಳಲು ಭಾರವಾದ ವಸ್ತುಗಳಿಂದ ದೂರವಿರಬೇಕು. ಕುರ್ಚಿ, ಟೇಬಲ್, ಮಂಚದ ಕೆಳಗಡೆ ಅವಿತುಕೊಳ್ಳಬೇಕು.

* ಗ್ಯಾಸ್ ಸ್ಟೋವ್‌ಗಳನ್ನು ಮತ್ತು ವಿದ್ಯುತ್ ದೀಪಗಳನ್ನು ಆರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದ್ದಾರೆ.

ಸಹಾಯವಾಣಿಗಳಿಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ಮನವಿ:

ಭೂಕಂಪನ ದಂತಹ ತುರ್ತು ಸಂದರ್ಭಗಳಲ್ಲಿ ತುರ್ತು ಸಮಯದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 1077. ಟಾಲ್ ಫ್ರೀ ಸಂಖ್ಯೆ 08352-221261, ಪೊಲೀಸ್ ಸಹಾಯವಾಣಿ ಸಂಖ್ಯೆ: 100 (ಟಾಲ್ ಫ್ರೀ) 112 (ಟಾಲ್ ಫ್ರೀ) 08352-250844 ಅಥವಾ ಆರೋಗ್ಯ ಸಹಾಯವಾಣಿ ಸಂಖ್ಯೆ : 104 ( ಟಾಲ್ ಫ್ರೀ) ಸಂಖ್ಯೆಗಳಿಗೆ ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವದಂತಿಗೆ ಕಿವಿಗೊಡಬೇಡಿ:

ಭೂಂಕಪನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ದವಾಗಿದೆ. ಯಾವುದೇ ಕಾರಣಕ್ಕೂ ವದಂತಿಗಳಿಗೆ ಕಿವಿ ಕೊಡಬಾರದು. ಮತ್ತು ಆತಂಕಕ್ಕೆ ಒಳಗಾಗಬಾರದು ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

– ಅಶೋಕ ಯಡಳ್ಳಿ, ಟಿವಿ 9, ವಿಜಯಪುರ

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ