ಕುಮಾರಸ್ವಾಮಿ ಅರೆಸ್ಟ್​​ಗೆ​ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್‌ಟೇಬಲ್ ಸಾಕು: ಸಿಎಂ ತಿರುಗೇಟು

ಇಷ್ಟು ದಿನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಹಾಗೂ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ನಡುವೆ ಮಾತಿನ ಯುದ್ಧವೇ ನಡೆದಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ ನಡುವೆ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಇದಕ್ಕೆ ಕಾರಣ ಪ್ರಾಸಿಕ್ಯೂಷನ್​.

ಕುಮಾರಸ್ವಾಮಿ ಅರೆಸ್ಟ್​​ಗೆ​ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್‌ಟೇಬಲ್ ಸಾಕು: ಸಿಎಂ ತಿರುಗೇಟು
ಕುಮಾರಸ್ವಾಮಿ, ಸಿದ್ದರಾಮಯ್ಯ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 21, 2024 | 5:27 PM

ವಿಜಯಪುರ, (ಆಗಸ್ಟ್ 21): ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಇತ್ತ ರಾಜ್ಯರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳು ಜೋರಾಗಿದೆ. ಅದರಲ್ಲೂ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಹಳೇ ಪ್ರಕರಣವನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಸಂಬಂಧ ಪ್ರಾಸಿಕ್ಯೂಷನ್​ ಅನುಮತಿ ನೀಡಿವಂತೆ ಎಸ್​​ಐಟಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಇದರಿಂದ ಕೆರಳಿರುವ ಕುಮಾರಸ್ವಾಮಿ ಸಿದ್ದರಾಮಯ್ಯನವರಂತಹ ನೂರು ಜನ ಬಂದರೂ ನನ್ನ ಅರೆಸ್ಟ್​ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಕುಮಾರಸ್ವಾಮಿಗೆ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್‌ಟೇಬಲ್ ಸಾಕು ಎಂದು ಟಾಂಗ್ ಕೊಟ್ಟಿದ್ದಾರೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್‌ಟೇಬಲ್ ಸಾಕು. ಅರೆಸ್ಟ್‌ ಮಾಡುವುದು ಯಾರು, ನಾನು ಮಾಡ್ತೀನಾ? ಪೊಲೀಸರು ಮಾಡುತ್ತಾರೆ. ನನಗೆ ಹೆದರಿಕೊಳ್ಳದೆ ಹೋಗಿದ್ದರೆ ಕುಮಾರಸ್ವಾಮಿ ಪ್ರೆಸ್‌ಮೀಟ್‌ ಮಾಡುತ್ತಿದ್ದರಾ? ಎಂದು ಲೇವಡಿ ಮಾಡಿದರು.

ಇದನ್ನೂ ಓದಿ: ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು: ಸಿಎಂಗೆ ಹೆಚ್​ಡಿ ಕುಮಾರಸ್ವಾಮಿ ಟಾಂಗ್​​

ಕುಮಾರಸ್ವಾಮಿದು ಬರೀ ಹಿಟ್‌ ಆ್ಯಂಡ್ ರನ್‌. ಯಾವ ಪ್ರಕರಣವನ್ನೂ ಕುಮಾರಸ್ವಾಮಿ ಲಾಜಿಕಲ್ ಎಂಡ್‌ಗೆ ತೆಗೆದುಕೊಂಡು ಹೋಗಿಲ್ಲ. ಪೆನ್‌ಡ್ರೈವ್‌, ಪೆನ್‌ಡ್ರೈವ್‌ ಅಂದರು ಎಂದು ಅಣುಕಿಸಿ ತೋರಿಸಿದರು.

ಕುಮಾರಸ್ವಾಮಿ ಹೇಳಿದ್ದೇನು?

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ನಿಯಮ ಉಲ್ಲಂಘಿಸಿ ಗಣಿಗಾರಿಕೆ ಗುತ್ತಿಗೆ ಮುಂಜೂರು ಮಾಡಿದ್ದ ಆರೋಪ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ಸಿದ್ಧತೆ ನಡೆಸುತ್ತಿರುವ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿ ನಡೆಸಿದ್ದು, ಅಗತ್ಯ ಬಿದ್ರೆ ಕುಮಾರಸ್ವಾಮಿ ಬಂಧನ ಮಾಡುತ್ತೇವೆ ಎಂಬ ಸಿಎಂ ಹೇಳಿಕೆಗೆ ಕಿಡಿಕಾರಿದರು. ನನಗೆ ಯಾವುದೇ ಭಯ ಇಲ್ಲ, ನನ್ನ ಬಂಧನ ಮಾಡೋಕೆ ನೂರು ಸಿದ್ದರಾಮಯ್ಯ ಬರಬೇಕು ಎಂದು ಟಾಂಗ್ ಕೊಟ್ಟಿದ್ದರು.

ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ಮೈಸೂರಿನ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಅಂತ ಹೇಳುತ್ತಿದ್ದಾರೆ. ಇಂತಹ ಬಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡೋಕೆ ನೂರು ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಕುಮಾರಸ್ವಾಮಿ ಅರೆಸ್ಟ್​ ಮಾಡಿ ಎಂದು ನಾನು ಎಲ್ಲೂ ಹೇಳಿಲ್ಲ, ಆದರೆ ಅಂತಹ ಸನ್ನಿವೇಶ ಬಂದ್ರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ -ಸಿಎಂ

ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023 ನವೆಂಬರ್‌ನಲ್ಲಿ. ಸುಮಾರು ಹತ್ತು ತಿಂಗಳಾಗಿದೆ. ಆದರೆ ನೆನ್ನೆ ಬೆಳಗ್ಗೆಯಿಂದ ಸಂಜೆವರೆಗೂ ಕುಮಾರಸ್ವಾಮಿಗೆ ಮತ್ತೆ ಗಣಿ ಸಂಕಷ್ಟ ಶುರುವಾಗಿದೆ ಅಂತ ವರದಿಗಳು ಬರುತ್ತಿವೆ. 2023ರ ಜುಲೈನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಬಂದಾಗಲೇ ವರ್ಗಾವಣೆ ದಂಧೆಗೆ ಮುಂದಾದರು. ಅದರ ಬಗ್ಗೆ ನಾನು‌ ವಾಗ್ದಾಳಿ ನಡೆಸಿದೆ, ಇದರಿಂದ ಸರ್ಕಾರಕ್ಕೆ‌ ಮುಜುಗರ ಆಯಿತು, ಆಗ ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಅಂತೆಲ್ಲಾ ಹೇಳಿದರು ಎಂದು ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ