ನಾವು ದಲಿತರು, ನಮಗಾಗಿ ಯಾರೂ ಕೈ ಎತ್ತಿಲ್ಲ: ಬಿವೈ ವಿಜಯೇಂದ್ರ ನೇಮಕಕ್ಕೆ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ

| Updated By: ಗಣಪತಿ ಶರ್ಮ

Updated on: Nov 14, 2023 | 5:40 PM

ಅಸೆಂಬ್ಲಿಯಲ್ಲೂ ನೋಡಿದ್ದೇವೆ, ಲೋಕಸಭೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡದೊಡ್ಡ ಗೌಡರು, ಸಾಹುಕಾರರುಗಳು ಬಂದರು. ಅವರಿಗೆ, ಅವರ ಪರವಾಗಿ ಕೈ ಎತ್ತುತ್ತಲೇ ಇದ್ದೇವೆ. ಕಳೆದ 75 ವರ್ಷಗಳಿಂದ ನಾವು ಕೈ ಎತ್ತಿಕೊಂಡು ಬಂದಿದ್ದೇವೆ. ನಾವು ದಲಿತರು, ನಮಗಾಗಿ ಈ ಜೀವನದಲ್ಲಿ ಯಾರೂ ಕೈ ಎತ್ತಿಲ್ಲ. ಇದು ಬಹಳ ದುಃಖದ ಸಂಗತಿ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

ನಾವು ದಲಿತರು, ನಮಗಾಗಿ ಯಾರೂ ಕೈ ಎತ್ತಿಲ್ಲ: ಬಿವೈ ವಿಜಯೇಂದ್ರ ನೇಮಕಕ್ಕೆ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ
ರಮೇಶ ಜಿಗಜಿಣಗಿ
Follow us on

ವಿಜಯಪುರ, ನವೆಂಬರ್ 14: ‘ನಾವು ದಲಿತರು, ನಮಗಾಗಿ ಯಾರೂ ಕೈ ಎತ್ತಿಲ್ಲ. ನಾವು ದಲಿತರಾಗಿದ್ದರೆ ಯಾವುದೇ ರೀತಿಯ ಬೆಳವಣಿಗೆ ಸಾಧ್ಯವಿಲ್ಲ’ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಈ ಮೂಲಕ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹೈಕಮಾಂಡ್ ನಿರ್ಧಾರಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ದಲಿತರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಸೆಂಬ್ಲಿಯಲ್ಲೂ ನೋಡಿದ್ದೇವೆ, ಲೋಕಸಭೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡದೊಡ್ಡ ಗೌಡರು, ಸಾಹುಕಾರರುಗಳು ಬಂದರು. ಅವರಿಗೆ, ಅವರ ಪರವಾಗಿ ಕೈ ಎತ್ತುತ್ತಲೇ ಇದ್ದೇವೆ. ಕಳೆದ 75 ವರ್ಷಗಳಿಂದ ನಾವು ಕೈ ಎತ್ತಿಕೊಂಡು ಬಂದಿದ್ದೇವೆ. ನಾವು ದಲಿತರು, ನಮಗಾಗಿ ಈ ಜೀವನದಲ್ಲಿ ಯಾರೂ ಕೈ ಎತ್ತಿಲ್ಲ. ಇದು ಬಹಳ ದುಃಖದ ಸಂಗತಿ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ನೇಮಕ ನಾವಂತೂ ಮಾಡಿಲ್ಲ. ಪಕ್ಷದ ಹಿರಿಯರು ಯಾವ ಯಾವುದೋ ಕಾರಣಕ್ಕೆ ಮಾಡಿದ್ದಾರೆ. ಬಹಳ ಯೋಚಿಸಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಗನೇ ಆಗಬೇಕೆಂದು ನೇಮಿಸಿದ್ದಾರೆ. ಇದರಂತೆ ಬಿವೈ ವಿಜಯೇಂದ್ರ ಬಿಜೆಪಿ ಅಧ್ಯಕ್ಷರಾಗಿದ್ದಾರೆ. ವಿಜಯೇಂದ್ರ ಆಗಿರುವುದರಿಂದ ನಮಗೇನೂ ಹೊಟ್ಟೆ ಉರಿ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದಕ್ಕೆ ಅಸಮಾಧಾನವನ್ನು ಸಂಸದ ರಮೇಶ್​​​​ ಜಿಗಜಿಣಗಿ ಬೇರೆ ರೀತಿ ಹೊರಹಾಕಿದರು!

ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಬೇಕೆಂದು ಅಂದುಕೊಂಡವನೂ ಅಲ್ಲ. ಅದರ ಕನಸೂ ನಾವು ಕಂಡಿಲ್ಲ. ನಮಗೆ ಗೊತ್ತಿದೆ, ನಾವು ದಲಿತರಾಗಿದ್ದರೆ ಬೆಳವಣಿಗೆ ಸಾಧ್ಯವಿಲ್ಲ ಎಂದು ಜಿಗಜಿಣಗಿ ಬೇಸರ ವ್ಯಕ್ತಪಡಿಸಿದ್ದಾರೆ.

‘ರಾಜ್ಯಾಧ್ಯಕ್ಷ ಯಾರು ಆಗಬೇಕೆಂದು ಬಹಿರಂಗ ಚರ್ಚೆ ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರಿಂದಲೇ ಆಯ್ಕೆಯಾಗುತ್ತಾರೆ. ನಳಿನ್‌ ಕುಮಾರ್ ಕಟೀಲ್​ ಅವರ ಅವಧಿ ಮುಗಿದಿದೆ ಎಂದು ಗೊತ್ತಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಬೇಕೆಂದು ಎಲ್ಲರಿಗೂ ಆಸೆ ಇರುತ್ತೆ. ನಾನು ಕೂಡ ಬಿಜೆಪಿಯ ಹಿರಿಯ ನಾಯಕ. ಪಕ್ಷ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರದೇ’ ಎಂದು ಜೂನ್​ನಲ್ಲಿ ರಮೇಶ ಜಿಗಜಿಣಗಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Tue, 14 November 23