Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ: ಕ್ರಮಕ್ಕೆ ಆಗ್ರಹಿಸಿ ನಿರ್ಮಲಾ ಸೀತಾರಾಮನ್​ಗೆ ಯತ್ನಾಳ್ ಪತ್ರ

ಈ ಹಿಂದೆ ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಕಾಂಗ್ರೆಸ್​ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಪತ್ರ ಬರೆದಿದ್ದಾರೆ. ಹಾಗಾದರೆ ಆ ಪತ್ರದಲ್ಲೇನಿದೆ?

ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ: ಕ್ರಮಕ್ಕೆ ಆಗ್ರಹಿಸಿ ನಿರ್ಮಲಾ ಸೀತಾರಾಮನ್​ಗೆ ಯತ್ನಾಳ್ ಪತ್ರ
ನಿರ್ಮಲಾ ಸೀತಾರಾಮನ್​ಗೆ ಶಾಸಕ ಯತ್ನಾಳ್ ಪತ್ರ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 11, 2024 | 7:19 PM

ವಿಜಯಪುರ, ಜು.11: ಗ್ಯಾರಂಟಿ ಯೋಜನೆ ಬಗ್ಗೆ ಕೇಂದ್ರ ಹಣಕಾಸು ಸಚಿವರಿಗೆ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​(Basangouda Patil Yatnal) ಪತ್ರ ಬರೆದಿದ್ದಾರೆ. ‘ನಿನ್ನೆ(ಬುಧವಾರ) ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರನ್ನು ಭೇಟಿಯಾಗಿ ಪತ್ರ ನೀಡಿದ್ದಾರೆ. ‘ಗ್ಯಾರಂಟಿ ಯೋಜನೆಗಳಿಂದ ಆಗ್ತಿರುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಮಾಹಿತಿ ಉಲ್ಲೇಖಿಸಿ, ಹಣಕಾಸಿನ ಜವಾಬ್ದಾರಿ ಹಾಗೂ ಬಜೆಟ್ ನಿರ್ವಹಣ ಕಾಯ್ದೆ ಉಲ್ಲಂಘನೆ ಆರೋಪ ಮಾಡಿದ್ದಾರೆ.

ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ

ಇನ್ನು ಕಾಂಗ್ರೆಸ್​ ಸರ್ಕಾರ ಕೊಟ್ಟಿರುವ ಉಚಿತ ಭಾಗ್ಯಗಳು, ರಾಜ್ಯದ ಹಣಕಾಸು ಪರಿಸ್ಥಿತಿ ಮೇಲೆ ಪರಿಣಾಮ ಬೀರಿದೆ. ಕೇಂದ್ರ ಸರ್ಕಾರ ತನ್ನ ಅಧಿಕಾರ ಬಳಸಿ ಕ್ರಮಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವರಿಗೆ ನೀಡಿರುವ ಪತ್ರದಲ್ಲಿ ಯತ್ನಾಳ್ ವಿವರಿಸಿದ್ದಾರೆ. ಈ ಹಿಂದೆಯೂ ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆಯೂ ಕೇಂದ್ರ ಗೃಹಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದರು. ಜೊತೆಗೆ ಶಾಸಕ ಯತ್ನಾಳ್ ಪತ್ರಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಉತ್ತರ ನೀಡಿದ್ದರು. ಇದೀಗ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಗಮನ ಹರಿಸುವುದಾಗಿ ಕೇಂದ್ರ ಹಣಕಾಸು ಸಚಿವರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:ವಾಲ್ಮೀಕಿ ನಿಗಮದ ಹಗರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ರಾಜ್ಯವನ್ನು ಹೇಗೆ ದಿವಾಳಿತನಕ್ಕೆ ತಳ್ಳುತ್ತವೆ ಎಂಬುದರ ಕುರಿತು ಹಣಕಾಸು ಇಲಾಖೆಯಿಂದ ಸ್ಪಷ್ಟ ಸೂಚನೆಗಳ ಹೊರತಾಗಿಯೂ ಅತೀ ಹೆಚ್ಚು ಬಜೆಟ್​ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಇದು ಸಾರ್ವಜನಿಕ ವೆಚ್ಚಗಳು, ಸಬ್ಸಿಡಿಗಳು, ಸಾಲಗಳು ಮತ್ತು ಹಣದುಬ್ಬರವನ್ನು ಹೆಚ್ಚಿಸುತ್ತದೆ. ಈ ಬಿಟ್ಟಿ ಯೋಜನೆಯಿಂದ ಉಂಟಾದ ಲೋಪಗಳಿಗೆ ಕೇಂದ್ರ ಸರಕಾರ ಕಡಿವಾಣ ಹಾಕಬೇಕಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Thu, 11 July 24