AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಬಾರಿ ಶಾಸಕನಾದ ಅರ್ಹತೆಯೇ ಸಾಕು ನಾನು ಸಿಎಂ ಆಗಲು: ಸಚಿವ ಉಮೇಶ ಕತ್ತಿ

ನಾನು ಇನ್ನೂ 2 ವರ್ಷಗಳ ಕಾಲ ಮುಖ್ಯಮಂತ್ರಿಯಾಗಲು ಸಾಧ್ಯವಾಗದು. ಆದರೆ 2 ವರ್ಷದ ನಂತರ ಆ ಕುರ್ಚಿ ಖಾಲಿಯಾಗಲಿದೆ. ಆಗ ಖಂಡಿತವಾಗಿಯೂ ಮುಖ್ಯಮಂತ್ರಿಯಾಗು ಇಚ್ಛೆ ಇದೆ ಎಂದು ಅವರು ಉತ್ತರಿಸಿದ್ದಾರೆ.

8 ಬಾರಿ ಶಾಸಕನಾದ ಅರ್ಹತೆಯೇ ಸಾಕು ನಾನು ಸಿಎಂ ಆಗಲು: ಸಚಿವ ಉಮೇಶ ಕತ್ತಿ
ಉಮೇಶ್ ಕತ್ತಿ
TV9 Web
| Edited By: |

Updated on:Jun 28, 2021 | 10:48 PM

Share

ವಿಜಯಪುರ: ‘ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಸದ್ಯ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅವರ ಕುರ್ಚಿ ಖಾಲಿಯಾದ ಮೇಲೆ ನೋಡೋಣ’ ಎಂದಿದ್ದಾರೆ  ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ತಮಗೂ ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದ ಮಹದಿಚ್ಛೆ ಇರುವುದನ್ನು ಅವರು ತೆರೆದಿಟ್ಟಿದ್ದಾರೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಣೆಕಟ್ಟು ವೀಕ್ಷಣೆಗೆ ಆಗಮಿಸಿದ್ದ ಅವರಿಗೆ ಸುದ್ದಿಗಾರರು ಕೇಳಿದ ‘ನಿಮಗೆ ಮುಖ್ಯಮಂತ್ರಿ ಆಗಬೇಕೆಂಬ ಇಚ್ಛೆ ಇದೆಯಾ?’ ಎಂಬ ಪ್ರಶ್ನೆ ಕೇಳಿದ್ದಾರೆ, ಪ್ರಶ್ನೆಗೆ ಪ್ರಶ್ನೆಯ ಮೂಲಕವೇ ಉತ್ತರಿಸಿದ ಆಹಾರ ಸಚಿವ ಉಮೇಶ್ ಕತ್ತಿ, ನಾನ್ಯಾಕೆ ಸಿಎಂ ಆಗಬಾರದು ಎಂದು ಅವರು ಮರು ಪ್ರಶ್ನಿಸಿದ್ದಾರೆ. ಅಲ್ಲದೇ ತಮ್ಮ ಮರು ಪ್ರಶ್ನೆಗೆ ಕಾರಣಗಳನ್ನೂ ತೆರೆದಿಟ್ಟಿದ್ದಾರೆ.

‘ನಾನು ಈವರೆಗೆ ಒಟ್ಟ 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಈ ಅನುಭವವೇ ಸಾಕು, ನಾನು ಮುಖ್ಯಮಂತ್ರಿ ಆಗುವ ಇಚ್ಛೆಯನ್ನು ಹೊಂದಲು. ಆದರೆ ಸದ್ಯ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಈ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಹೀಗಾಗಿ ನಾನು ಇನ್ನೂ 2 ವರ್ಷಗಳ ಕಾಲ ಮುಖ್ಯಮಂತ್ರಿಯಾಗಲು ಸಾಧ್ಯವಾಗದು. ಆದರೆ 2 ವರ್ಷದ ನಂತರ ಆ ಕುರ್ಚಿ ಖಾಲಿಯಾಗಲಿದೆ. ಆಗ ಖಂಡಿತವಾಗಿಯೂ ಮುಖ್ಯಮಂತ್ರಿಯಾಗು ಇಚ್ಛೆ ಇದೆ ಎಂದು ಅವರು ಉತ್ತರಿಸಿದ್ದಾರೆ.

ಮುಂದಿನ ಮುಖ್ಯಮಂತ್ರಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದವರಿಗೆ ನೊಟೀಸ್: ಕೋಳಿವಾಡ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಬಹಿರಂಗ ಹೇಳಿಕೆ ನೀಡಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ನಗರದಲ್ಲಿ ಕಾಂಗ್ರೆಸ್ ಶಿಸ್ತು ಸಮಿತಿ ಸದಸ್ಯ ಕೆ.ಬಿ.ಕೋಳಿವಾಡ ಹೇಳಿದರು. ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಹೇಳಿಕೆ ನೀಡಿರುವ ಶಾಸಕರಿಗೆ ನೊಟೀಸ್ ಜಾರಿ ಮಾಡಲಾಗುವುದು. ಶಿಸ್ತು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕು, ಶಿಸ್ತು ಸಮಿತಿ ಬಗ್ಗೆ ಯಾರೂ ಲಘುವಾಗಿ ಪರಿಗಣಿಸಬೇಡಿ ಎಂದು ಸಲಹೆ ಮಾಡಿದರು.

ಸಿಎಂ ಅಭ್ಯರ್ಥಿ ಬಗ್ಗೆ ಹೇಳಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಕೆಪಿಸಿಸಿ ಶಿಸ್ತು ಸಮಿತಿ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಇನ್ನೊಂದು ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸಲು ಸಮಿತಿ ನಿರ್ಧರಿಸಿದೆ. ಶಾಸಕರಿಗೆ ನೋಟಿಸ್ ನೀಡಿ ಸಭೆಗೆ ಕರೆಸಬೇಕು. ಈಗ ಕ್ರಮಕೈಗೊಳ್ಳದಿದ್ದರೆ ಸಮಿತಿ ಬಗ್ಗೆ ಉಳಿದ ಶಾಸಕರೂ ಲಘುವಾಗಿ ಪರಿಗಣಿಸುವ ಅಪಾಯವಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!

ಕಾಂಗ್ರೆಸ್​ನಲ್ಲಿ ಇರೋದು 68 ಶಾಸಕರು, ಆದರೆ ‘ಮುಂದಿನ ಮುಖ್ಯಮಂತ್ರಿ’ ಆಕಾಂಕ್ಷಿಗಳು 100ಕ್ಕೂ ಅಧಿಕ!  ಟ್ವೀಟ್​ ಮಾಡಿ ಕುಟುಕಿದ ಬಿಜೆಪಿ

(Karnataka Food Minister Umesha Katti says As a 8 time MLA Iam eligible to become CM But the chair is not empty)

Published On - 10:41 pm, Mon, 28 June 21

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ