ಸರ್ಕಾರಿ ಬೆಂಬಲ ಬೆಲೆಯಡಿ ಇಂದಿನಿಂದ ತೊಗರಿ ಖರೀದಿ ಆರಂಭ

ತೊಗರಿಯನ್ನು ಮಾರಾಟ ಮಾಡುವ ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವನ್ನು ಡಿಬಿಟಿ ಮೂಲಕ ಹಣ ಜಮಾ ಆಗುವಂತೆ ಪಾವತಿ ಕ್ರಮ ತೆಗೆದುಕೊಳ್ಳಲಾಗಿದೆ.

ಸರ್ಕಾರಿ ಬೆಂಬಲ ಬೆಲೆಯಡಿ ಇಂದಿನಿಂದ ತೊಗರಿ ಖರೀದಿ ಆರಂಭ
ತೊಗರಿ ಬೇಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 15, 2021 | 7:12 PM

ವಿಜಯಪುರ: ವಿಜಯಪುರ ಜಿಲ್ಲೆ ತೊಗರಿ ಬೆಳೆಯುವ ಅಗ್ರಗಣ್ಯ ಜಿಲ್ಲೆಗಳ ಸಾಲಿಗೆ ಸೇರಿದೆ. ಗುಮ್ಮಟ ನಗರಿಯ ಜಿಲ್ಲೆಯನ್ನು ತೊಗರಿ ಬೆಳೆಯುವ ಕಣಜ ಎಂದು ಕರೆದೂ ತಪ್ಪಾಗದು. ಈ ಬಾರಿ 11.90 ಲಕ್ಷ ಎಕರೆ ಪ್ರದೇಶದಲ್ಲಿ ತೊಗರಿಯನ್ನು ಬೆಳೆಯಲಾಗಿದೆ. ಮಳೆಯ ಕೊರತೆ, ಹವಾಮಾನ ವೈಪರೀತ್ಯ ಹಾಗೂ ಅಕಾಲಿಕ ಮಳೆಯ ಕಾಟದಿಂದ ಪ್ರಸಕ್ತ ವರ್ಷ ಉತ್ತಮ ಇಳುವರಿ ಬಾರದಂತಾಗಿದೆ. ಇದ್ದುದರಲ್ಲಿಯೇ ತೊಗರಿ ಫಸಲನ್ನು ರೈತರು ಕೊಯ್ಲು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ತೊಗರಿಯನ್ನು ಬೆಂಬಲ ಬೆಲೆಯಡಿ ಖರೀದಿ ಮಾಡಲು ಸರ್ಕಾರ ಸಮಯವನ್ನು ನಿಗದಿ ಮಾಡಿದೆ.

ಪ್ರಸಕ್ತ 2021-22ನೇ ವರ್ಷದಲ್ಲಿ ತೊಗರಿಯನ್ನು ಬೆಂಬಲ ಬೆಲೆಯಡಿ ಖರೀದಿ ಮಾಡಲು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. FAQ ಗುಣಮಟ್ಟ ತೊಗರಿಗೆ ಪ್ರತಿ ಕ್ವಿಂಟಾಲ್‍ಗೆ 6,300 ರೂ.ನಂತೆ ದರ ನಿಗದಿ ಮಾಡಲಾಗಿದೆ. ತೊಗರಿ ಖರೀದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಂಬಲ ಬೆಲೆ ಯೋಜನೆ ಮಾರ್ಗ ಸೂಚಿಗಳನ್ವಯ ಪೂರ್ವ ಸಿದ್ಧತೆ ಮತ್ತು ರೈತರ ನೋಂದಣಿ ಕಾರ್ಯವನ್ನು ಸರ್ಕಾರದ ಆದೇಶದಂತೆ ಇಂದಿನಿಂದ 45 ದಿನಗಳ ವರೆಗೆ ಅಂದರೆ ಮುಂದಿನ 2022ರ ಜನವರಿ ಕೊನೆಯವರೆಗೆ ನೋಂದಣಿ ಕಾರ್ಯ ಹಾಗೂ ತೊಗರಿ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ಟಿವಿ9 ವೆಬ್ ಗೆ ಮಾಹಿತಿ ನೀಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತಕ್ಕೆ ಖರೀದಿ ಏಜೆನ್ಸಿಯಾಗಿ ನೇಮಿಸಿರುವುದರಿಂದ ಜಿಲ್ಲೆಯಲ್ಲಿ ತೊಗರಿ ಖರೀದಿಗೆ ಸಂಬಂಧಿಸಿದಂತೆ ಸಿದ್ಧತೆ ಮಾಡಿಕೊಳ್ಳಲು ವ್ಯವಸ್ಥಾಪಕರು ಕೆಸಿಎಂಎಫ್ ವಿಜಯಪುರ ಅವರಿಗೆ ಸೂಚಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 11.90 ಲಕ್ಷ ಎಕರೆ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದ್ದು, ಅಂದಾಜು 35.70 ಲಕ್ಷ ಕ್ವಿಂಟಾಲ್ ಇಳುವರಿ ಬರಬಹುದೆಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ತೊಗರಿ ಕಟಾವಿಗೆ ಬಂದಿದ್ದು, ಡಿಸೆಂಬರ್ ಕೊನೆಯ ವಾರದಲ್ಲಿ ಮಾರಾಟಕ್ಕೆ ಮಾರುಕಟ್ಟೆಗೆ ಬರಬಹುದು ಎಂದು ಅಂದಾಜಿಸಲಾಗಿದೆ. ಪ್ರತಿ ಎಕರೆಗೆ 7.50 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಖರೀದಿಸಲು ಪ್ರಮಾಣ ನಿಗದಿ ಪಡಿಸಲಾಗಿದೆ.

ಖರೀದಿ ಕೇಂದ್ರಗಳಲ್ಲಿ ತೊಗರಿ ಉತ್ಪನ್ನವನ್ನು ಖರೀದಿಸೋ ಮುನ್ನ ರೈತರ ನೋಂದಣಿಯನ್ನು ಎನ್‍ಐಸಿ ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗೆ ಉತ್ಪನ್ನಗಳನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ ತೊಗರಿ ಬೆಂಬಲ ಬೆಲೆ ಯೋಜನೆಯಡಿ ನೊಂದಾಯಿಸಲು ಬಳಸಬೇಕು. ಎನ್‍ಐಸಿ ಸಂಸ್ಥೆಯು ಅಭಿವೃದ್ಧಿಪಡಿಸಿರುವ ಈ ನೋಂದಣಿ ತಂತ್ರಾಂಶ ಈಗಾಗಲೇ FRUIS ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ ಎಂದು ಆಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈತರು ಸಹ ಸರ್ಕಾರದ ನಿರ್ದೇಶನದಂತೆ FRUIS ತಂತ್ರಾಂಶದಲ್ಲಿ ನೋಂದಣಿ ಮಾಡಿಸಬೇಕಿದೆ. ತೊಗರಿಯನ್ನು ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಲು ರೈತರು ನೋಂದಣಿ ಮಾಡಿದ ನಂತರ NIC ತಂತ್ರಾಂಶದಿಂದ ನ್ಯಾಪೆಡ್ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೊಂದಣಿ ಮಾಹಿತಿಯನ್ನು ಒದಗಿಸಲಾಗುವುದು. ಈ ಸಂಸ್ಥೆಯು ತಮ್ಮ ತಂತ್ರಾಂಶದಲ್ಲಿ ಎಲ್ಲಾ ಮಾಹಿತಿಯನ್ನು ಬಳಸಿ ರೈತರಿಂದ ಉತ್ಪನ್ನವನ್ನು ಕೇಂದ್ರಗಳಿಂದ ಖರೀದಿಸಬೇಕೆಂಬ ನಿಯಮ ಜಾರಿ ಮಾಡಲಾಗಿದೆ.

ಇನ್ನು, ತೊಗರಿಯನ್ನು ಮಾರಾಟ ಮಾಡುವ ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವನ್ನು ಡಿಬಿಟಿ ಮೂಲಕ ಹಣ ಜಮಾ ಆಗುವಂತೆ ಪಾವತಿ ಕ್ರಮ ತೆಗೆದುಕೊಳ್ಳಲಾಗಿದೆ. ತೊಗರಿ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ತೊಗರಿ ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಕೃಷಿ ಆಧಿಕಾರಿಗಳು ಹೇಳಿದ್ದಾರೆ.

(ವರದಿ: ಅಶೋಕ್ ಯಡಳ್ಳಿ)

ಇದನ್ನೂ ಓದಿ: ಬಾಗಲಕೋಟೆ: 415 ಚೀಲ ತೊಗರಿ ಬೇಳೆ ಮಾರಿ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್

ತೊಗರಿ ಕಣಜ ಖ್ಯಾತಿಯ ಕಲಬುರಗಿಯಲ್ಲೇ ತೊಗರಿ ಬೇಳೆ ದಾಖಲೆಗೆ ಮಾರಾಟ!

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ