ವಿಜಯಪುರ: ಬಬಲೇಶ್ವರನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ, ನಾಲ್ವರ ಸಾವು

ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಜಯಪುರ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸ್ಥಳಕ್ಕೆ ವಿಜಯಪುರ ಎಸ್​ಪಿ ಋಷಿಕೇಶ ಸೋನೆವಣೆ ಭೇಟಿ ನೀಡಿದ್ದಾರೆ. ಬಬಲೇಶ್ವರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯಪುರ: ಬಬಲೇಶ್ವರನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ, ನಾಲ್ವರ ಸಾವು
ರಸ್ತೆ ಅಪಘಾತದಲ್ಲಿ ಕಾರು ಜಖಂ
Edited By: ವಿವೇಕ ಬಿರಾದಾರ

Updated on: Apr 13, 2024 | 12:01 PM

ವಿಜಯಪುರ, ಏಪ್ರಿಲ್​ 13: ಬಬಲೇಶ್ವರ (Babaleshwar) ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಜಯಪುರ (Vijyapur) ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಮೃತ ದುರ್ದೈವಿಗಳು. KA 28 D 1021 ಸಂಖ್ಯೆಯ ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಯಲ್ಲಿರುವ ದೇವಸ್ಥಾನಕ್ಕೆ ಹೊರಟಿದ್ದರು.  ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಜಮಖಂಡಿಯಿಂದ ವಿಜಯಪುರಕ್ಕೆ ಬರುತ್ತಿತ್ತು. ಅರ್ಜುಣಗಿ ಗ್ರಾಮದ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಯಶ್ರೀ ಅರ್ಜುನ ರಜಪೂತ, ಪ್ರೇಮಸಿಂಗ್ ಅರ್ಜುನ ರಜಪೂತ ಮತ್ತು ನಯಾರಾ ಅರ್ಜುನ ರಜಪೂತ ಅವರಿಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಅರ್ಜುನ ತಿಕೋಟಾ ತಾಲೂಕಿನ ಬರಟಗಿ ತಾಂಡಾದ ನಿವಾಸಿಯಾಗಿದ್ದಾನೆ. ಮೃತ ರವಿನಾಥ್ ಪತ್ತಾರ ಬಾಗಲಕೋಟೆ ಜಿಲ್ಲೆ ಮುಧೋಳ ನಿವಾಸಿಯಾಗಿದ್ದಾನೆ. ಅಪಘಾತ ಸ್ಥಳಕ್ಕೆ ವಿಜಯಪುರ ಎಸ್​ಪಿ ಋಷಿಕೇಶ ಸೋನೆವಣೆ ಭೇಟಿ ನೀಡಿದ್ದಾರೆ. ಬಬಲೇಶ್ವರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಸ್ತೆ ಅಪಘಾತದಲ್ಲಿ ಕಾರಾಗೃಹ ಸಿಬ್ಬಂದಿ ಸಾವು

ಧಾರವಾಡ: ಗರಗ ಗ್ರಾಮದ ಬಳಿ‌ ಕಾರು ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿ, ಬೈಕ್​ನಲ್ಲಿದ್ದ ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡ ಕೇಂದ್ರ ಕಾರಾಗೃಹದ ಸಿಬ್ಬಂದಿ ರುದ್ರಪ್ಪ ಸಿದ್ದಣ್ಣವರ ಮೃತ ದುರ್ದೈವಿ.  ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ರುದ್ರಪ್ಪ ಅವರು ಕರ್ತವ್ಯ ಮುಗಿಸಿ ವಾಪಸ್ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಎಲೆಕ್ಷನ್‌ ಡ್ಯೂಟಿಗೆ ಹೋಗುತ್ತಿದ್ದಾಗ ಅಪಘಾತ; ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು

ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಬೆಂಗಳೂರು: ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಮುಖೇಶ್ (22) ಮೃತ ದುರ್ದೈವಿ. ಮುಖೇಶ್ ಬೈಕ್​ನಲ್ಲಿ ನೈಸ್ ರಸ್ತೆಯ ಹೊಸಕೆರೆಹಳ್ಳಿಯಿಂದ ತೆರಳುತ್ತಿದ್ದನು. ಅತಿವೇಗವಾಗಿ ಬೈಕ್​ ಚಲಾಯಿಸುತ್ತಿದ್ದು, ನಿಯಂತ್ರಣ ತಪ್ಪಿ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಲ್ಲಿ ಮುಖೇಶ್​ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಕೆಂಗೇರಿ‌ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:01 am, Sat, 13 April 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us