ಜೀವ ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ನಾಲ್ವರ ಬಂಧನ

ವಿಜಯಪುರ(Vijayapura) ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಸೇರಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಬಳಿಕ ಅದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ಆ ಮಹಿಳೆಗೆ ಬೆದರಿಕೆ ಹಾಕಿ ನಿರಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರಂತೆ. ಈ ಕುರಿತು ಮನೆಯವರಿಗೆ ವಿಚಾರ ತಿಳಿಯುತ್ತಿದ್ದಂತೆ ಸಂತ್ರಸ್ಥೆ ಮನೆಬಿಟ್ಟು ಹೋಗಿದ್ದಾರೆ.

ಜೀವ ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ನಾಲ್ವರ ಬಂಧನ
ಬಂಧಿತ ಆರೋಪಿಗಳು
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 01, 2024 | 5:13 PM

ವಿಜಯಪುರ, ಮೇ.01: ಎಲ್ಲೆಡೆ ಪ್ರಜ್ವಲ ರೇವಣ್ಣ ಆಶ್ಲೀಲ್ ವಿಡಿಯೋ ಹರಿದಾಡುತ್ತಿದ್ದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಇಷ್ಟರ ಮದ್ಯೆ ಇದೇ ಮಾದರಿಯ ಘಟನೆ ವಿಜಯಪುರ(Vijayapura) ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ನಂತರ ಆ ಮಹಿಳೆಗೆ ಬೆದರಿಕೆ ಹಾಕಿ ನಿರಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರಂತೆ.

ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ವಿಡಿಯೋ ವೈರಲ್

ಇನ್ನು ಈ ವಿಚಾರ ಬಹಿರಂಗ ಮಾಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ಸಾಲದೆಂಬಂತೆ ಮಹಿಳೆಯ ಜೊತೆಗಿನ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ವೈರಲ್ ಆದ ವಿಡಿಯೋವನ್ನು ಅತ್ಯಾಚಾರಕ್ಕೀಡಾದ ಪತಿ ನೋಡಿ ಅದನ್ನು ಮನೆಯವರಿಗೆ ತಿಳಿಸಿದ್ಧಾನೆ. ನಂತರ ಆ ಮಹಿಳೆಯನ್ನು ವಿಚಾರಣೆ ಮಾಡಿದಾಗ, ‘ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಕಾಶ ಹಡಗಲಿ, ಅಭಿಷೇಕ ಸಜ್ಜನ ಎಂಬಿಬ್ಬರು ನನಗೆ ಜೀವ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದಾರೆ. ಈ ವಿಚಾರ ಹೊರಗಡೆ ಹೇಳಿದರೆ ಕೊಲೆ ಮಾಡೋದಾಗಿ ಜೀವ ಬೆದರಿಕೆ ಹಾಕಿದ್ದರು. ಭಯದಿಂದ ಈ ವಿಚಾರವನ್ನು ನಾನು ಎಲ್ಲಿಯೂ ಹೇಳಿಲ್ಲ ಎಂದು ಮಹಿಳೆ ವಿಷಯ ಮನೆಯವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಬರ್ಹಿದೆಸೆಗೆ ತೆರಳಿದ್ದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಯುವಕ ಪರಾರಿ

ಮನೆ ಬಿಟ್ಟು ಹೋದ ಸಂತ್ರಸ್ಥೆ

ಮನೆಯಲ್ಲಿ ವಿಚಾರ ಗೊತ್ತಾದ ಕಾರಣ ಮನನೊಂದ ಮಹಿಳೆ, ‘ತನ್ನ 6 ವರ್ಷದ ಮಗನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ. ಈ ಕುರಿತು ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಪತಿ ಹಾಗೂ ಮನೆಯವರು ಮನಗೂಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನಿಖೆ ನಡೆಸಿದ ಮನಗೂಳಿ ಪೊಲೀಸ್ ಸಬ್ ಇನ್ಸಪೆಕ್ಟರ್ ಶ್ರೀಕಾಂತ ಕಾಂಬಳೆ ಹಾಗೂ ತಂಡ, ಕೃತ್ಯ ಎಸಗಿರುವ ಆಕಾಶ ಹಡಗಲಿ, ಅಭಿಷೇಕ ಸಜ್ಜನ ಹಾಗೂ ಇವರಿಗೆ ಸಹಾಯ ಮಾಡಿದ ಸೋಮಪ್ಪ ಸಜ್ಜನ ಹಾಗೂ ಜಯಶ್ರೀ ಹಡಗಲಿ ಎಂಬುವವರನ್ನು ಬಂಧಿಸಿದ್ಧಾರೆ. ಈ ಕುರಿತು ತನಿಖೆ ಮುಂದುವರೆದಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯಿಂದ ಕಾಣೆಯಾಗಿರುವ ಮಹಿಳೆ ಹಾಗೂ ಆಕೆಯ ಮಗು ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು