ವಿಜಯಪುರ: ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು
ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ನಡೆದಿದೆ. ಇತ್ತ ಉಡುಪಿ ತಾಲೂಕಿನ ಮಲ್ಪೆ ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ವಿಜಯಪುರ, ಏ.30: ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರ್ ಆಲಮೇಲ(16) ಹಾಗೂ ಮಲಿಕ್ ನದಾಫ್(16) ಮೃತ ರ್ದುದೈವಿಗಳು. ಬೀಸಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಈಜು ಬಾರದಿದ್ದರೂ ಬಾಲಕರು ಬಾವಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ
ಉಡುಪಿ: ತಾಲೂಕಿನ ಮಲ್ಪೆ ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಿಸಿದ ಘಟನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12), ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದಿದ್ದಾನೆ. ಈ ಕುರಿತು ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಬಿದ್ದ ಸ್ಕಾರ್ಪಿಯೊ, ಚಾಲಕ ಸಾವು
ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ಹಳೆನಿಜಗಲ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಸ್ಕಾರ್ಪಿಯೋ ಕಾರು ಮೋರಿಗೆ ಬಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ರಾಜಸ್ಥಾನ ಮೂಲದ ಸಚಿನ್(19) ಕೊನೆಯುಸಿರೆಳೆದಿದ್ದಾರೆ. ಗಾಯಾಳು ಬಲವಂತ್ ಸಿಂಗ್ಗೆ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:54 pm, Tue, 30 April 24