ವಿಜಯಪುರ: ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 30, 2024 | 7:00 PM

ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ನಡೆದಿದೆ. ಇತ್ತ ಉಡುಪಿ ತಾಲೂಕಿನ ಮಲ್ಪೆ ಬೀಚ್​ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ವಿಜಯಪುರ: ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು
ಮೃತ ಬಾಲಕರು
Follow us on

ವಿಜಯಪುರ, ಏ.30: ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರ್ ಆಲಮೇಲ(16) ಹಾಗೂ ಮಲಿಕ್ ನದಾಫ್(16) ಮೃತ ರ್ದುದೈವಿಗಳು. ಬೀಸಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಈಜು ಬಾರದಿದ್ದರೂ ಬಾಲಕರು ಬಾವಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಉಡುಪಿ: ತಾಲೂಕಿನ ಮಲ್ಪೆ ಬೀಚ್​ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಿಸಿದ ಘಟನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12), ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದಿದ್ದಾನೆ. ಈ ಕುರಿತು ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಪ್ರತ್ಯೇಕ ಪ್ರಕರಣ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು, ಆಡು ಮೇಯಿಸಲು ಹೋಗಿದ್ದ ಯುವಕ ನದಿಯಲ್ಲಿ ‌ಮುಳುಗಿ ಸಾವು ಶಂಕೆ

ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಬಿದ್ದ ಸ್ಕಾರ್ಪಿಯೊ, ಚಾಲಕ ಸಾವು

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ಹಳೆನಿಜಗಲ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಸ್ಕಾರ್ಪಿಯೋ ಕಾರು ಮೋರಿಗೆ ಬಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ರಾಜಸ್ಥಾನ ಮೂಲದ ಸಚಿನ್(19) ಕೊನೆಯುಸಿರೆಳೆದಿದ್ದಾರೆ. ಗಾಯಾಳು ಬಲವಂತ್ ಸಿಂಗ್​​ಗೆ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Tue, 30 April 24