ವಕ್ಫ್​ ವಿವಾದ: ಡಿಸಿ ಮನವೊಲಿಕೆ ಯಶಸ್ವಿ, ಪ್ರತಿಭಟನೆ ಕೈಬಿಟ್ಟ ವಿಜಯಪುರ ರೈತರು

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ವಿಚಾರದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಜಿಲ್ಲಾಧಿಕಾರಿಗಳು ಪಹಣಿಯಲ್ಲಿನ ವಕ್ಫ್ ಬೋರ್ಡ್ ಎಂಬ ಪದ ತೆಗೆಯುವುದು ಮತ್ತು ಭವಿಷ್ಯದಲ್ಲಿ ಯಾವುದೇ ಸಮಸ್ಯೆ ಆಗದಂತೆ ಶಾಶ್ವತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂಪಡೆದರು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಈ ವಿಷಯದ ಕುರಿತು ವಾಗ್ವಾದ ನಡೆದಿದೆ.

ವಕ್ಫ್​ ವಿವಾದ: ಡಿಸಿ ಮನವೊಲಿಕೆ ಯಶಸ್ವಿ, ಪ್ರತಿಭಟನೆ ಕೈಬಿಟ್ಟ ವಿಜಯಪುರ ರೈತರು
ಪ್ರತಿಭಟನೆ ನಡೆಸಿದ್ದ ರೈತರು
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ

Updated on:Oct 30, 2024 | 10:17 PM

ವಿಜಯಪುರ, ಅಕ್ಟೋಬರ್​ 30: ವಕ್ಫ್ (Waqf)​ ಆಸ್ತಿ ವಿಚಾರ ಸದ್ಯ ಕರ್ನಾಟಕದಲ್ಲಿ (Karnataka) ಸಾಕಷ್ಟು ಚರ್ಚೆಯಾಗುತ್ತಿದೆ. ವಿಜಯಪುರ, ಯಾದಗಿರಿ, ಧಾರವಾಡ ಸೇರಿದಂತೆ ಇನ್ನೂ ಹಲವು ಜಿಲ್ಲೆಗಳ ರೈತರನ್ನು ಕಂಗಾಲಾಗಿಸಿದೆ. ತಮ್ಮ ಜಮೀನುಗಳ ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ನಮೂದು ಆಗಿದ್ದು ಮತ್ತು ನೋಟಿಸ್ ನೀಡಿದ್ದನ್ನು ವಿರೋಧಿ ವಿಜಯಪುರ (Vijayapura) ಜಿಲ್ಲೆಯ ರೈತರು ಮಂಗಳವಾರ (ಅ.29) ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಪ್ರತಿಭಟನಾ ನಿರತರ ರೈತರ ಮನವೊಲಿಸುವಲ್ಲಿ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್, ಹೆಚ್ಚುವರಿ ಡಿಸಿ ಸೋಮಲಿಂಗ ಗೆಣ್ಣೂರು ಯಶಸ್ವಿಯಾಗಿದ್ದಾರೆ.

ಇಂದು (ಅ.30) ಪ್ರತಿಭಟನಾ ನಿರತ ರೈತರ ಬಳಿ ಬಂದ ಜಿಲ್ಲಾಧಿಕಾರಿಗಳು, “ಪಹಣಿಯಲ್ಲಿನ ವಕ್ಫ್ ಬೋರ್ಡ್ ಎಂಬ ಪದ ತೆಗೆಯಲಾಗಿದೆ. ಭವಿಷ್ಯದಲ್ಲೂ ಯಾವುದೇ ಸಮಸ್ಯೆ ಆಗುವುದಿಲ್ಲ. ಮತ್ತು ವಕ್ಫ್ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲಾಗುವುದೆಂದು” ಭರವಸೆ ನೀಡಿದರು. ಅಲ್ಲದೇ ಇಂಡಿ ತಾಲೂಕಿನ 41 ರೈತರ ಜಮೀನು ಇಂದೀಕರಣವನ್ನು ಈಗಾಗಲೇ ರದ್ದು ಮಾಡಿದ್ದೇವೆ. ಕೂಡಲೇ ಹೋರಾಟ ಕೈಬಿಡುವಂತೆ ಮನವೊಲಿಸಿದರು. ಜಿಲ್ಲಾಧಿಕಾರಿಗಳು ನೀಡಿದ ಭರವಸೆಯಿಂದ ರೈತರು ಅಹೋರಾತ್ರಿ ಹೋರಾಟ ಕೈಬಿಟ್ಟು ನಿರ್ಗಮಿಸಿದರು.

ಬಿಜೆಪಿ ವಿರುದ್ಧ ಜಮೀರ್​ ವಾಗ್ದಾಳಿ

ವಕ್ಫ್ ಬೋರ್ಡ್ ಹೆಸರಿನಲ್ಲಿ ರೈತರ ಭೂಮಿ ಕಬಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಚಿವ ಜಮೀರ್​ ಅಹ್ಮದ್​​ ತಿರುಗೇಟು ನೀಡಿದ್ದಾರೆ. ಶಿಗ್ಗಾಂವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಕ್ಫ್​ ಆಸ್ತಿ ವಿಚಾರವನ್ನು ಬಿಜೆಪಿ ಉಪಚುನಾವಣೆಗೆ ಬಳಸಿಕೊಳ್ಳುತ್ತಿದೆ. ನಿಮ್ಮ ಆಸ್ತಿ ತೆಗೆದುಕೊಳ್ಳಲು ಸಾಧ್ಯನಾ? ಇದು ರಾಜಕೀಯ ಗಿಮಿಕ್ ಎಂದಿದ್ದಾರೆ.​​

ಇದನ್ನೂ ಓದಿ: ಅಂತ್ಯಸಂಸ್ಕಾರಕ್ಕೆಂದು ತುಸು ಜಾಗ ನೀಡಿದ್ದರೆ ಇಡೀ ಆಸ್ತಿಯನ್ನೇ ಕಬಳಿಸಿದ ವಕ್ಫ್!

ಮಹಾರಾಷ್ಟ್ರ ಸೇರಿದಂತೆ ಹಲವೆಡೆ ಚುನಾವಣೆ ನಡೆಯುತ್ತಿದೆ. ಪ್ರಚಾರಕ್ಕೆ ಬೇರೆ ವಿಷಯ ಇಲ್ಲದಿದ್ದಕ್ಕೆ ಬಿಜೆಪಿಯವರು ವಕ್ಫ್​ ವಿಚಾರ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಭೂಮಿಯನ್ನು ಯಾರೂ ತೆಗೆದುಕೊಳ್ಳಲು ಆಗಲ್ಲ ಎಂದರು.

ಕೆಲವು ಧಾರ್ಮಿಕ ಕೇಂದ್ರಗಳು ಸಹ ವಕ್ಫ್​​​​ಗೆ ಸೇರಿಕೊಳ್ಳುತ್ತವೆ: ದಿನೇಶ್​

ರೈತರ ಭೂಮಿ ವಕ್ಫ್​ಗೆ ಸೇರಿಸಿದ್ದಾರೆಂಬುದು ಸುಳ್ಳು, ಅರೆಬರೆ ಸುದ್ದಿ. ಹಿಂದಿನ ಬಿಜೆಪಿ ಅವಧಿಯಲ್ಲಿ ವಕ್ಫ್​ ವಿಚಾರದಲ್ಲಿ ನೋಟಿಸ್​ ನೀಡಲಾಗಿದೆ. ರೈತರ ಜಮೀನುಗಳನ್ನು ವಕ್ಫ್​ ಬೋರ್ಡ್​ ಕಿತ್ತುಕೊಳ್ಳಲು ಸಾಧ್ಯವಿಲ್ಲ. ವಕ್ಫ್​ ಆಸ್ತಿ ಬಗ್ಗೆ ಇರುವ ಗೊಂದಲವನ್ನು ನಿವಾರಣೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ದಾನ ಮಾಡಿರುವ ಭೂಮಿ ವಕ್ಫ್​​ ಬೋರ್ಡ್​ಗೆ ಸೇರಿರುತ್ತೆ. ಕೆಲವು ಧಾರ್ಮಿಕ ಕೇಂದ್ರಗಳು ಸಹ ವಕ್ಫ್​​​​ ಆಸ್ತಿಗೆ ಸೇರಿಕೊಳ್ಳುತ್ತವೆ. ಈ ಸಂಬಂಧ ಈಗಾಗಲೇ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಮುಸ್ಲಿಮರ ಹೆಸರನ್ನು ತಂದಿದ್ದಾರೆ. ಹಿಂದೂ, ಮುಸ್ಲಿಮರ ನಡುವೆ ದ್ವೇಷ ಮೂಡಿಸುವುದೇ ಬಿಜೆಪಿ ಉದ್ದೇಶ. ಕಾಂಗ್ರೆಸ್ ದೇಶ ಮತ್ತು ರಾಜ್ಯದಲ್ಲಿ ಭೂಸುಧಾರಣೆ ಕಾಯ್ದೆ ಜಾರಿ ಮಾಡಿದೆ​​​​. ಹಿಂದೆ ಕಾಂಗ್ರೆಸ್ ಸರ್ಕಾರ ರೈತರಿಗೆ ಜಮೀನ್ದಾರರಿಂದ ಭೂಮಿ ಕೊಡಿಸಿದೆ. ಯಾರು ಕೂಡ ರಾಜ್ಯದ ರೈತರಿಗೆ ಮೋಸ ಮಾಡಲು ಸಾಧ್ಯವಿಲ್ಲ ಎಂದರು.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:17 pm, Wed, 30 October 24

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ