AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಾಹ್ನ ಆದ್ರೆ ಸಾಕು ಬಾರ್, ಡಾಬಾಗಳೇ ಇವ್ರ ಅಡ್ಡ! ಅಧಿಕಾರಿ, ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ

ಕರ್ತವ್ಯ ವೇಳೆಯೇ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮದ್ಯಪಾನ ಪಾರ್ಟಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಡಿಯೋಗಳು ವೈರಲ್ ಆಗಿವೆ. ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಕ್ರಮವಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆ ಮತ್ತು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮಧ್ಯಾಹ್ನ ಆದ್ರೆ ಸಾಕು ಬಾರ್, ಡಾಬಾಗಳೇ ಇವ್ರ ಅಡ್ಡ! ಅಧಿಕಾರಿ, ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ
ಎಣ್ಣೆ ಪಾರ್ಟಿImage Credit source: tv9 kannada
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jun 25, 2026 | 5:00 PM

Share

ಮುಖ್ಯಾಂಶಗಳು

  • ಕರ್ತವ್ಯದ ವೇಳೆಯೇ ಅಧಿಕಾರಿಗಳು, ಸಿಬ್ಬಂದಿ ಎಣ್ಣೆ ಪಾರ್ಟಿ
  • ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಡಾಬಾದಲ್ಲಿ ಘಟನೆ
  • ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ವೈರಲ್​

ವಿಜಯಪುರ, ಜೂನ್​​ 25: ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಕೆಬಿಜೆಎನ್‌ಎಲ್ ಹೊಲಗಾಲುವೆ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯದ ವೇಳೆಯಲ್ಲೇ ಮದ್ಯಪಾನ ಪಾರ್ಟಿ (Alcohol party) ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಲಮೇಲ ಪಟ್ಟಣದ ಹೊರವಲಯದ ಡಾಬಾವೊಂದರಲ್ಲಿ ಅವರು ಮದ್ಯಪಾನ ಮಾಡುತ್ತಿರುವುದನ್ನು ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಕರ್ತವ್ಯ ವೇಳೆಯೇ ಪಾರ್ಟಿ

ಹೊಲಗಾಲುವೆ ವಿಭಾಗದ ಮ್ಯಾನೇಜರ್ ಶಶಿಧರ್ ಚೌಹಾನ್, ದ್ವಿತೀಯ ದರ್ಜೆ ಸಹಾಯಕ ಮುರಳಿದರ್ ಕುಲಕರ್ಣಿ ಹಾಗೂ ಸಿಪಾಯಿ ಶಂಕರಯ್ಯ ಕರ್ತವ್ಯದ ವೇಳೆಯಲ್ಲೇ ಮದ್ಯಪಾನ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳೀಯರ ಆರೋಪದ ಪ್ರಕಾರ, ಅಧಿಕಾರಿಗಳು ಹಾಗೂ ಸಿಬ್ಬಂದಿ ನಿತ್ಯ ಮಧ್ಯಾಹ್ನ ಕಚೇರಿಗೆ ಗೈರಾಗುತ್ತಿದ್ದು, ಬಾರ್‌ ಹಾಗೂ ಡಾಬಾಗಳಲ್ಲಿ ಸಮಯ ಕಳೆಯುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ!

ಈ ಕುರಿತು ಹಲವು ಬಾರಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಆದರೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ತವ್ಯದ ವೇಳೆಯಲ್ಲೇ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವುದು ಅವರ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಇಲಾಖೆ ಸಮಗ್ರ ತನಿಖೆ ನಡೆಸಿ ಕಠಿಣ ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಹಾಸ್ಟೆಲ್​​ನಲ್ಲೇ ವಿದ್ಯಾರ್ಥಿನಿಯರ ಎಣ್ಣೆ ಪಾರ್ಟಿ

ಕಲಬುರಗಿ ಜಿಲ್ಲೆಯ ಆಳದ ತಾಲೂಕಿನ‌ ಕಡಗಂಚಿ ಗ್ರಾಮದ ದೇವರಾಜ್ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ಹಾಸ್ಟೆಲ್​​ನಲ್ಲಿ ತಡರಾತ್ರಿವರೆಗೂ ವಿದ್ಯಾರ್ಥಿನಿಯರು ಬಿಂದಾಸ್ ಆಗಿ ಹುಡುಗರ ಜೊತೆ ಎಣ್ಣೆ ಪಾರ್ಟಿ ಮಾಡಿರುವಂತಹ ಘಟನೆ ಇತ್ತೀಚೆಗೆ ನಡೆದಿತ್ತು.

ಹಣಕ್ಕೆ ಡಿಮ್ಯಾಂಡ್: ವಾರ್ಡನ್ ಆಡಿಯೋ ವೈರಲ್​ 

ಕಡಗಂಚಿ ಗ್ರಾಮದ ಬಿಸಿಎಂ ಹಾಸ್ಟೆಲ್​​ನಲ್ಲಿ ಹೇಳುವವರು, ಕೇಳುವವರಿಲ್ಲದಂತಾಗಿತ್ತು. ಈ ಹಾಸ್ಟೆಲ್​ನಲ್ಲಿರುವ ವಿದ್ಯಾರ್ಥಿನಿಯರು ಬಿಂದಾಸ್ ಆಗಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಆದರೆ ದುರಂತ ಅಂದರೆ ಹಾಸ್ಟೆಲ್​ಗೆ ಎಣ್ಣೆ ತಂದು ಹುಡುಗರ ಜೊತೆ ಬಿಂದಾಸ್ ಆಗಿ ಪಾರ್ಟಿ ಮಾಡುತ್ತಿರುವುದು ವಾರ್ಡನ್ ಆಗಲಿ, ತಾಲೂಕು ಅಧಿಕಾರಿಗಳಾಗಲಿ ಯಾರೂ ತಲೆ ಕೆಡಿಸಿಕೊಂಡಿಲ್ಲ. ಬದಲಿಗೆ ಎಣ್ಣೆ ಪಾರ್ಟಿಯ ವಿಚಾರ, ಹುಡುಗರು ಬಂದು ಹೋಗುವ ವಿಚಾರವನ್ನ ಮುಚ್ಚಿ ಹಾಕುವುದಕ್ಕೆ ವಾರ್ಡನ್ ಹುಡುಗಿಯರ ಬಳಿ ಹಣಕ್ಕೆ ಡಿಮ್ಯಾಂಡ್ ಇಟ್ಟಿರುವ ಆಡಿಯೋ ಕೂಡ ವೈರಲ್ ಆಗಿತ್ತು. ಇದನ್ನು ನೋಡಿದರೆ ಈ ಅಕ್ರಮದಲ್ಲಿ ಅಧಿಕಾರಿಗಳು ಭಾಗಿಯಾಗಿರುವುದು ಬಹಳ ಸ್ಪಷ್ಟವಾಗಿ ಕಂಡುಬಂದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!