AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏ.26 ರಂದು ವಿಜಯಪುರಕ್ಕೆ ರಾಹುಲ್​ ಗಾಂಧಿ; ಸಿದ್ದತೆ ವೀಕ್ಷಿಸಿದ ಸಚಿವ ಎಂಬಿ ಪಾಟೀಲ್

ದೆಹಲಿ ಗದ್ದುಗೆಗಾಗಿ ನಾಳೆ(ಏ.26) ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ ಮತದಾರ ಪ್ರಭುಗಳು ಅಭ್ಯರ್ಥಿಗಳ ಹಣೆ ಬರಹವನ್ನು ಬರೆಯಲಿದ್ದಾರೆ. ಇತ್ತ ಇತರೆ 14 ಕ್ಷೇತ್ರಗಳಲ್ಲಿ ಪ್ರಚಾರದ ಅಬ್ಬರವೂ ಹೆಚ್ಚಾಗಲಿದೆ. ಅದರಂತೆ ನಾಳೆ ವಿವಿಧ ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಕ್ಯಾಂಪೇನ್ ಮಾಡಲಿದ್ದಾರೆ. ವಿಜಯಪುರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್​ ಕೇಂದ್ರ ನಾಯಕ ರಾಹುಲ್ ಗಾಂಧಿ ಎಂಟ್ರಿ ಕೊಡಲಿದ್ದಾರೆ. ನಾಳೆ ವಿಜಯಪುರ ನಗರದ ಬಿಎಲ್ಡಿಇ ಕ್ಯಾಂಪಸ್​ನಲ್ಲಿ ನಡೆಯಲಿರೋ ಬಹಿರಂಗ ಸಮಾವೇಶಕ್ಕಾಗಿ ಸಕಲ ಸಿದ್ದತೆಗಳು ಭರಿದಿಂದ ಸಾಗಿವೆ.

ಏ.26 ರಂದು ವಿಜಯಪುರಕ್ಕೆ ರಾಹುಲ್​ ಗಾಂಧಿ; ಸಿದ್ದತೆ ವೀಕ್ಷಿಸಿದ ಸಚಿವ ಎಂಬಿ ಪಾಟೀಲ್
ವಿಜಯಪುರಕ್ಕೆ ರಾಹುಲ್​ ಗಾಂಧಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 25, 2024 | 10:15 PM

Share

ವಿಜಯಪುರ, ಏ.25: ವಿಜಯಪುರ(Vijayapura) ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ರಾಜೂ ಆಲಗೂರು ಪರ ಪ್ರಚಾರ ಜೋರಾಗಿದೆ. ನಾಳೆ(ಏ.26) ಕಾಂಗ್ರೆಸ್ ಆಭ್ಯರ್ಥಿ ಪರ ಪ್ರಚಾರ ನಡೆಸಿ ಮತಯಾಚನೆ ಮಾಡಲು ಕೇಂದ್ರ ನಾಯಕ ರಾಹುಲ್ ಗಾಂಧಿ(Rahul Gandhi) ಸೇರಿದಂತೆ ಸಿಎಂ ಸಿದ್ದರಾಮಯ್ಯ, ಸುರ್ಜೆವಾಲಾ ಆಗಮಿಸಲಿದ್ದಾರೆ. ಈ ಹಿನ್ನಲೆ ನಗರದ ಬಿಎಲ್ಡಿಇ ಸಂಸ್ಥೆಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಜೊತೆಗೆ ಅಲ್ಲಲ್ಲಿ ಸ್ಕ್ರೀನ್ ಗಳನ್ನು ಹಾಕಲಾಗಿದೆ. ಇನ್ನು ಕಾರ್ಯಕ್ರಮದಲ್ಲಿ ಅಂದಾಜು 50 ಸಾವಿರಕ್ಕೂ ಅಧಿಕ ಜನರು ಭಾಗಿಯಾಗಲಿದ್ಧಾರೆ.

ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಅಧಿಕ ಜನರು ಭಾಗಿ

ಈ ಹಿನ್ನಲೆ ಕಾರ್ಯಕ್ರಮದ ಸಿದ್ದತೆಗಳನ್ನು ಇಂದು ಸಚಿವ ಎಂ.ಬಿ ಪಾಟೀಲ್ ವೀಕ್ಷಣೆ ಮಾಡಿದರು. ಇದೇ ವೇಳೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ‘ನಾಳೆ ಬೆಳಿಗ್ಗೆ 11 ಗಂಟೆಗೆ ಬಿಎಲ್ಡಿಇ ಕ್ಯಾಂಪಸ್​ನಲ್ಲಿನ ಹೆಲಿಪ್ಯಾಡ್​ಗೆ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆ ಶಿವಕುಮಾರ್​ ಕೂಡ ಆಗಮಿಸುವ ಸಾಧ್ಯತೆಯಿದೆ. ಕಳೆದ 2018 ರಲ್ಲಿ ಸೋನಿಯಾ ಗಾಂಧಿ ಅವರು ಮೋದಿ ಅವರು ಒಂದೇ ದಿನ ವಿಜಯಪುರ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮ ನಡೆಸಿದ್ದರು. ಆಗ ಮೋದಿ ಅವರ ಕಾರ್ಯಕ್ರಮಕ್ಕಿಂತ ಸೋನಿಯಾ ಗಾಂಧಿ ಅವರ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರಿದ್ದರು ಎಂದು ಮಾದ್ಯಮಗಳು ವಿಶ್ಲೇಸಿದ್ದವು ಎಂದರು.

ಇದನ್ನೂ ಓದಿ:ಪ್ರಧಾನಿ ಮೋದಿ, ರಾಹುಲ್​ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಬೃಹತ್ ವೇದಿಕೆಯನ್ನು ನಿರ್ಮಾಣ

ಇನ್ನು ಬಹಿರಂಗ ಸಮಾವೇಶ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ. 7 ಅಡಿ ಎತ್ತರದ ವೇದಿಕೆ ಹಾಕಲಾಗಿದೆ. 30\ 60 ಅಳಕೆಯ ಮುಖ್ಯ ವೇದಿಕೆ ಹಾಕಲಾಗಿದೆ. 260\ 680 ಅಡಿ ಆಳೆತೆಯ ದೊಡ್ಡ ಜರ್ಮನ್ ಸ್ಟಕ್ಚರ್ ವಾರ್ಟರ್ ಪ್ರೂಪ್ ಪೆಂಡಾಲ್ ಹಾಕಲಾಗಿದೆ. ಈ ಪೆಂಡಾಲ್ ಎರಡೂ ಬದಿಯಲ್ಲಿ 12 ಎಲ್​ಇಡಿ ಸ್ಕ್ರೀನ್​ಗಳನ್ನು ವೀಕ್ಷಣೆಗಾಗಿ ಅಳವಡಿಸಲಾಗಿದ್ದು, 50 ಸಾವಿರ ಜನರಿಗೆ ಕೂರಲು ಖುರ್ಚಿಯ ವ್ಯವಸ್ಥೆ ಮಾಡಲಾಗಿದೆ. ಇನ್ನು ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಜನರಿಗೆ ಕೂಡಲು ಸಾಧ್ಯವಾದಷ್ಟು ಖುರ್ಚಿ ಜೊತೆಗೆ ಬಿರು ಬಿಸಿಲಿರೋ ಕಾರಣದಿಂದ ಕಾರ್ಯಕ್ರಮಕ್ಕೆ ಆಗಮಿಸಿದ ಜನರಿಗೆ ಕುಡಿಯುವ ನೀರು ಹಾಗೂ ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಜನರು ಕಾರ್ಯಕ್ರಮಕ್ಕೆ ಬರಲಿದ್ದು, ನಾಳೆಯ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.

ಒಟ್ಟಾರೆ ನಾಳೆ ಕಾಂಗ್ರೆಸ್ ಆಭ್ಯರ್ಥಿ ರಾಜೂ ಆಲಗೂರ ಪರ ಪ್ರಚಾರಕ್ಕೆ ಹಾಗೂ ಮತಯಾಚನೆಗಾಗಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ರಂದೀಪ್ ಸುರ್ಜೆವಾಲಾ ಆಗಮಿಸುತ್ತಿದ್ದು, ಕೈ ನಾಯಕರಲ್ಲಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ. ನಾಳೆಯ ಕಾರ್ಯಕ್ರಮಕ್ಕಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗುತ್ತಿದೆ. ಕಾರ್ಯಕ್ರಮ ನಡೆಯೋ ಬಿಎಲ್ಡಿಇ ಕ್ಯಾಂಪಸ್ ನಲ್ಲಿ ಪರವಾನಿಗೆ ಇಲ್ಲದ ವಾಹನಗಳ ಪ್ರವೇಶ ನಿರಾಕರಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವವರ ವಾಹನಗಳಿಗೆ ಬೇರೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ