ವಿಜಯಪುರ, ಏ.25: ವಿಜಯಪುರ(Vijayapura) ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ರಾಜೂ ಆಲಗೂರು ಪರ ಪ್ರಚಾರ ಜೋರಾಗಿದೆ. ನಾಳೆ(ಏ.26) ಕಾಂಗ್ರೆಸ್ ಆಭ್ಯರ್ಥಿ ಪರ ಪ್ರಚಾರ ನಡೆಸಿ ಮತಯಾಚನೆ ಮಾಡಲು ಕೇಂದ್ರ ನಾಯಕ ರಾಹುಲ್ ಗಾಂಧಿ(Rahul Gandhi) ಸೇರಿದಂತೆ ಸಿಎಂ ಸಿದ್ದರಾಮಯ್ಯ, ಸುರ್ಜೆವಾಲಾ ಆಗಮಿಸಲಿದ್ದಾರೆ. ಈ ಹಿನ್ನಲೆ ನಗರದ ಬಿಎಲ್ಡಿಇ ಸಂಸ್ಥೆಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಜೊತೆಗೆ ಅಲ್ಲಲ್ಲಿ ಸ್ಕ್ರೀನ್ ಗಳನ್ನು ಹಾಕಲಾಗಿದೆ. ಇನ್ನು ಕಾರ್ಯಕ್ರಮದಲ್ಲಿ ಅಂದಾಜು 50 ಸಾವಿರಕ್ಕೂ ಅಧಿಕ ಜನರು ಭಾಗಿಯಾಗಲಿದ್ಧಾರೆ.
ಈ ಹಿನ್ನಲೆ ಕಾರ್ಯಕ್ರಮದ ಸಿದ್ದತೆಗಳನ್ನು ಇಂದು ಸಚಿವ ಎಂ.ಬಿ ಪಾಟೀಲ್ ವೀಕ್ಷಣೆ ಮಾಡಿದರು. ಇದೇ ವೇಳೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ‘ನಾಳೆ ಬೆಳಿಗ್ಗೆ 11 ಗಂಟೆಗೆ ಬಿಎಲ್ಡಿಇ ಕ್ಯಾಂಪಸ್ನಲ್ಲಿನ ಹೆಲಿಪ್ಯಾಡ್ಗೆ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆ ಶಿವಕುಮಾರ್ ಕೂಡ ಆಗಮಿಸುವ ಸಾಧ್ಯತೆಯಿದೆ. ಕಳೆದ 2018 ರಲ್ಲಿ ಸೋನಿಯಾ ಗಾಂಧಿ ಅವರು ಮೋದಿ ಅವರು ಒಂದೇ ದಿನ ವಿಜಯಪುರ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮ ನಡೆಸಿದ್ದರು. ಆಗ ಮೋದಿ ಅವರ ಕಾರ್ಯಕ್ರಮಕ್ಕಿಂತ ಸೋನಿಯಾ ಗಾಂಧಿ ಅವರ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರಿದ್ದರು ಎಂದು ಮಾದ್ಯಮಗಳು ವಿಶ್ಲೇಸಿದ್ದವು ಎಂದರು.
ಇದನ್ನೂ ಓದಿ:ಪ್ರಧಾನಿ ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್
ಇನ್ನು ಬಹಿರಂಗ ಸಮಾವೇಶ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ. 7 ಅಡಿ ಎತ್ತರದ ವೇದಿಕೆ ಹಾಕಲಾಗಿದೆ. 30\ 60 ಅಳಕೆಯ ಮುಖ್ಯ ವೇದಿಕೆ ಹಾಕಲಾಗಿದೆ. 260\ 680 ಅಡಿ ಆಳೆತೆಯ ದೊಡ್ಡ ಜರ್ಮನ್ ಸ್ಟಕ್ಚರ್ ವಾರ್ಟರ್ ಪ್ರೂಪ್ ಪೆಂಡಾಲ್ ಹಾಕಲಾಗಿದೆ. ಈ ಪೆಂಡಾಲ್ ಎರಡೂ ಬದಿಯಲ್ಲಿ 12 ಎಲ್ಇಡಿ ಸ್ಕ್ರೀನ್ಗಳನ್ನು ವೀಕ್ಷಣೆಗಾಗಿ ಅಳವಡಿಸಲಾಗಿದ್ದು, 50 ಸಾವಿರ ಜನರಿಗೆ ಕೂರಲು ಖುರ್ಚಿಯ ವ್ಯವಸ್ಥೆ ಮಾಡಲಾಗಿದೆ. ಇನ್ನು ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಜನರಿಗೆ ಕೂಡಲು ಸಾಧ್ಯವಾದಷ್ಟು ಖುರ್ಚಿ ಜೊತೆಗೆ ಬಿರು ಬಿಸಿಲಿರೋ ಕಾರಣದಿಂದ ಕಾರ್ಯಕ್ರಮಕ್ಕೆ ಆಗಮಿಸಿದ ಜನರಿಗೆ ಕುಡಿಯುವ ನೀರು ಹಾಗೂ ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಜನರು ಕಾರ್ಯಕ್ರಮಕ್ಕೆ ಬರಲಿದ್ದು, ನಾಳೆಯ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ಒಟ್ಟಾರೆ ನಾಳೆ ಕಾಂಗ್ರೆಸ್ ಆಭ್ಯರ್ಥಿ ರಾಜೂ ಆಲಗೂರ ಪರ ಪ್ರಚಾರಕ್ಕೆ ಹಾಗೂ ಮತಯಾಚನೆಗಾಗಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ರಂದೀಪ್ ಸುರ್ಜೆವಾಲಾ ಆಗಮಿಸುತ್ತಿದ್ದು, ಕೈ ನಾಯಕರಲ್ಲಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ. ನಾಳೆಯ ಕಾರ್ಯಕ್ರಮಕ್ಕಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗುತ್ತಿದೆ. ಕಾರ್ಯಕ್ರಮ ನಡೆಯೋ ಬಿಎಲ್ಡಿಇ ಕ್ಯಾಂಪಸ್ ನಲ್ಲಿ ಪರವಾನಿಗೆ ಇಲ್ಲದ ವಾಹನಗಳ ಪ್ರವೇಶ ನಿರಾಕರಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವವರ ವಾಹನಗಳಿಗೆ ಬೇರೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ