ಲೋಕಸಭಾ ಚುನಾವಣೆ: ಜಾತ್ರೆ, ಹಬ್ಬ, ಉತ್ಸವ ನಿಷೇಧಿಸಿ ವಿಜಯಪುರ ಜಿಲ್ಲಾಧಿಕಾರಿ ಆದೇಶ

ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಮೇ 06 ಮತ್ತು 07ರಂದು ನಡೆಯಲಿರುವ ಚುನಾವಣೆ ಸಲುವಾಗಿ ಜಾತ್ರೆ, ಹಬ್ಬ, ಸಂತೆ, ಉತ್ಸವಕ್ಕೆ ನಿಷೇಧಿಸಿ ವಿಜಯಪುರ (Vijayapura) ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಟಿ.ಭೂಬಾಲನ್​ ಆದೇಶಿಸಿದ್ದಾರೆ.

ಲೋಕಸಭಾ ಚುನಾವಣೆ: ಜಾತ್ರೆ, ಹಬ್ಬ, ಉತ್ಸವ ನಿಷೇಧಿಸಿ ವಿಜಯಪುರ ಜಿಲ್ಲಾಧಿಕಾರಿ ಆದೇಶ
ಜಾತ್ರೆ, ಹಬ್ಬ, ಉತ್ಸವ ನಿಷೇಧಿಸಿ ವಿಜಯಪುರ ಜಿಲ್ಲಾಧಿಕಾರಿ ಆದೇಶ
Edited By: ಕಿರಣ್ ಹನುಮಂತ್​ ಮಾದಾರ್

Updated on: Apr 19, 2024 | 5:28 PM

ವಿಜಯಪುರ, ಏ.19: ಲೋಕಸಭಾ ಚುನಾವಣೆ(Lok sabha election) ಹಿನ್ನೆಲೆ ಜಾತ್ರೆ, ಹಬ್ಬ, ಸಂತೆ, ಉತ್ಸವಕ್ಕೆ ನಿಷೇಧಿಸಿ ವಿಜಯಪುರ (Vijayapura) ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಟಿ.ಭೂಬಾಲನ್​ ಆದೇಶಿಸಿದ್ದಾರೆ. ಲೋಕಸಭಾ ಚುನಾವಣೆಯು ಮೇ 06 ಮತ್ತು 07ರಂದು ನಡೆಯಲಿದ್ದು, ಈ ಹಿನ್ನಲೆ ಜಿಲ್ಲೆಯ ಒಟ್ಟು 2,085 ಮತಗಟ್ಟೆಗಳಲ್ಲಿ ಮುಕ್ತ, ಶಾಂತಿಯುತ ಮತ್ತು ಪಾರದರ್ಶಕ ಮತದಾನ ನಡೆಸಲು ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ.

ಎರಡನೇ ಹಂತದ ಮತದಾನ ನಡೆಯೋ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

ಇನ್ನು ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಎರಡು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ಪೈಕಿ ಒಂದು ಸೆಟ್ ನಾಮಪತ್ರವನ್ನು ಜಿಲ್ಲಾ ಮಹಿಳಾ ಪದಾಧಿಕಾರಿಗಳೊಂದಿಗೆ ಮಾಡಿದ್ದು ಸಹ ವಿಶೇಷವಾಗಿತ್ತು. ಕೇಂದ್ರ ಸರ್ಕಾರದ ನಾರಿಶಕ್ತಿ ಯೋಜನೆಯ ಪ್ರತೀಕವಾಗಿ ಮಹಿಳಾ ಪದಾಧಿಕಾರಿಗಳ ಜೊತೆಗೆ ಬಿಜೆಪಿ ಆಭ್ಯರ್ಥಿ ರಮೇಶ್​ ಜಿಗಜಿಣಗಿ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ:ನೂರಾರು ವರ್ಷಗಳಿಂದ ಇದ್ದರೂ ಸಿಗದ ಹಕ್ಕು ಪತ್ರಗಳು; ಲೋಕಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ನಾಮಪ್ರ ಸಲ್ಲಿಕೆ ಬಳಿಕ ಮಾತನಾಡಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶಿಲ್ಪಾ ಕಣಮುಚನಾಳ ‘ನಿಜವಾಗಿ ನಾರಿ ಶಕ್ತಿ ಪರವಾಗಿ ಇರೋದು ಬಿಜೆಪಿ ಸರ್ಕಾರ, ಮೋದಿ ಅವರ ಸರ್ಕಾರ. ಈ ಕಾರಣದಿಂದ ನಮ್ಮ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ನಾವು ಮಹಿಳಾ ಪದಾಧಿಕಾರಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದೇವೆ ಎಂದರು. ಮೋದಿ ಸರ್ಕಾರದಲ್ಲಿ ಹಾಗೂ ಜಿಗಜಿಣಗಿ ಅವರು ಹತ್ತಾರು ಯೋಜನೆಗಳನ್ನು ಜಿಲ್ಲೆಗೆ ತಂದಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Fri, 19 April 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us