ಶಾಸಕ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆಗೆ ನೋಟಿಸ್: ಬಿಜೆಪಿಯರದ್ದೇ ಕೈವಾಡ ಎಂದ ಎಂಬಿ ಪಾಟೀಲ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಕಾರ್ಖಾನೆ ಬಂದ್ ಮಾಡುವಂತೆ ನೋಟಿಸ್ ನೀಡಿದ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಕಾನೂನು ಪ್ರಕಾರ ಸರ್ಕಾರ ಕ್ರಮ ತೆಗೆದುಕೊಂಡಿರುತ್ತದೆ. ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಕಾಂಗ್ರೆಸ್ನವರಲ್ಲ. ಅವರನ್ನು ಬಿಜೆಪಿಯವರ ಅವಧಿಯಲ್ಲಿನ ಆಧ್ಯಕ್ಷರನ್ನು ನೇಮಕ ಮಾಡಿದ್ದಾರೆ ಎಂದು ಹೇಳಿದ್ದಾರೆ.
ವಿಜಯಪುರ, ಜನವರಿ 28: ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಸಿದ್ದಶ್ರೀ ಸಹಕಾರಿ ಸಕ್ಕರೆ ಕಾರ್ಖಾನೆ ಪರಿಸರ ನಿಯಮಗಳನ್ನು ಪಾಲನೆ ಮಾಡಿಲ್ಲ ಎಂಬ ವಿಚಾರವಾಗಿ ಕಾರ್ಖಾನೆ ಬಂದ್ ಮಾಡುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟೀಸ್ ನೀಡಲಾಗಿದೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB. Patil) ಕಾನೂನು ಪ್ರಕಾರ ಸರ್ಕಾರ ಕ್ರಮ ತೆಗೆದುಕೊಂಡಿರುತ್ತದೆ. ಇದರಲ್ಲಿ ಬಿಜೆಪಿಯರದ್ದು ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ಯತ್ನಾಳ್ ಕಾರ್ಖಾನೆ ಆಗಿರಲ್ಲಿ, ಎಂ.ಬಿ ಪಾಟೀಲ್ ಕಾರ್ಖಾನೆ ಇರಬಹುದು ಮತ್ತೊಬ್ಬರದ್ದು ಇರಬಹುದು ಕಾನೂನು ಪ್ರಕಾರ ಕ್ರಮ ತೆಗೆದುಕೊಂಡಿರುತ್ತಾರೆ. ಒಂದು ವೇಳೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ನೋಟಿಸ್ ಸರಿ ಇಲ್ಲದಿದ್ದರೆ ನ್ಯಾಯಲಯದ ಮೊರೆ ಹೋಗಲಿ ಎಂದು ಯತ್ನಾಳ್ಗೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಆಮಿಶ ಒಡ್ಡಲಾಗಿತ್ತೋ ಅಥವಾ ಒತ್ತಡ ಹೇರಲಾಗಿತ್ತೋ ಅಂತ ಜಗದೀಶ್ ಶೆಟ್ಟರ್ ಅವರೇ ಹೇಳಬೇಕು: ಎಂಬಿ ಪಾಟೀಲ್, ಸಚಿವ
ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ನಮ್ಮವರಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ನೇಮಕ ಮಾಡಿದ್ದು. ಕಾರಣ ಯತ್ನಾಳ್ ಕಾರ್ಖಾನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣವಿಲ್ಲ ಎಂದು ಹೇಳಿದ್ದಾರೆ.
ಆಪರೇಷನ್ ಕಾಂಗ್ರೆಸ್ ಕುರಿತು ಪರೋಕ್ಷವಾಗಿ ಹೇಳಿದ ಸಚಿವ ಎಂ.ಬಿ ಪಾಟೀಲ್
ಲೋಕಸಭಾ ಚುನಾವಣೆಗೂ ಮುನ್ನ ಆಪರೇಷನ್ ಬಿಜೆಪಿ ವಿಚಾರವಾಗಿ ಮಾತನಾಡಿದ ಅವರು, ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್ ಆಗುತ್ತದೆ. ಆಪರೇಷನ್ ಕಾಂಗ್ರೆಸ್ ಕುರಿತು ಪರೋಕ್ಷವಾಗಿ ಹೇಳಿದ್ದಾರೆ. ಮಾಧ್ಯಮಗಳ ಮುಂದೆ ಎಲ್ಲವನ್ನು ಹೇಳಲ್ಲ. ಕಾಂಗ್ರೆಸ್ಗೆ ಬಿಜೆಪಿಯಿಂದ ಬಹಳ ಜನ ಬರುತ್ತಾರೆ ಎಂದಿದ್ದಾರೆ.
ಇದನ್ನೂ ಓದಿ: ವಿಜಯಪುರದಲ್ಲಿ ಮಸೀದಿಗಳಾದ ದೇವಸ್ಥಾನಗಳು: ಉತ್ಖನನ ನಡೆಸುವಂತೆ ಪುರಾತತ್ವ ಇಲಾಖೆಗೆ ಯತ್ನಾಳ್ ಪತ್ರ
ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ವೀರಶೈವ ಲಿಂಗಾಯತ ಮಹಾಸಭಾದಲ್ಲಿ ರೆಸಲ್ಯೂಷನ್ ಪಾಸ್ ಮಾಡಿದ್ಧಾರೆ. ನಾವು ಚತುವರ್ಣದಲ್ಲಿ ಇಲ್ಲಾ ಎಂದು ಹೇಳಿದ್ದಾರೆ. ವೀರಶೈವ ಲಿಂಗಾಯತ ಒಂದು ಧರ್ಮ. ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕೆಂದಿದ್ದಾರೆ.
ಟಿಕೆಟ್ ಸಿಗುವ ಸಾಧ್ಯತೆ ಇದೆ
ಮುಂದಿನ ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿ, ವಿಜಯಪುರ ಮೀಸಲು ಕ್ಷೇತ್ರದಿಂದ ಸ್ಥಳಿಯರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ. ಹೊರಗಿನವರು ಬಂದರೂ ಸಹ ಪರಿಗಣನೆ ಮಾಡುತ್ತೇವೆ. ಯಾರು ಚುನಾವಣೆ ಗೆಲ್ಲಲು ಸಾಧ್ಯವಿದೆ ಹಾಗೂ ಇತರೆ ವಿಷಯ ವಿಚಾರ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:07 pm, Sun, 28 January 24