ವಿಜಯಪುರ ಸುರಕ್ಷತಾ ವಲಯದಲ್ಲಿದೆ, ಜನರು ಆತಂಕ ಪಡುವ ಅಗತ್ಯವಿಲ್ಲ; ಗಣಿ ಸಚಿವ ಹಾಲಪ್ಪ ಆಚಾರ್
ಅಪ್ರಾಪ್ತೆಯರ ಮೇಲೆ ನಡೆದ ಅತ್ಯಾಚಾರ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ದುಷ್ಟರ ಮಟ್ಟ ಹಾಕಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ನಾಲ್ಕು ಅತ್ಯಾಚಾರ ಪ್ರಕರಣಗಳು ನಡೆದಿವೆ.
ವಿಜಯಪುರ: ಜಿಲ್ಲೆಯಲ್ಲಿ ಪದೇ ಪದೇ ಭೂಕಂಪನ ಅನುಭವದಿಂದ ಜನರು ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಯಾವ ಸಮಯದಲ್ಲಿ ಏನಾಗುತ್ತದೆಯೋ ಎಂಬ ಭೀತಿಯಲ್ಲಿದ್ದಾರೆ. ಈ ವಿಚಾರದ ಬಗ್ಗೆ ಗಣಿ ಸಚಿವ ಹಾಲಪ್ಪ ಆಚಾರ್ (Halappa Achar) ಹೇಳಿಕೆ ನೀಡಿದ್ದಾರೆ. ವಿಜಯಪುರ ಜಿಲ್ಲೆ ಸುರಕ್ಷತಾ ವಲಯದಲ್ಲಿದೆ. ಹೆಚ್ಚಾಗಿ ಮಳೆ ಆಗಿದ್ದರಿಂದಾಗಿ ಈ ರೀತಿ ಆಗಿದೆ. ಅಗತ್ಯ ಬಿದ್ದರೆ ಹಿರಿಯ ವಿಜ್ಞಾನಿಗಳ ತಂಡ ಕರೆಸುತ್ತೇವೆ. ಜನರು ಆತಂಕ ಪಡುವ ಅಗತ್ಯವಿಲ್ಲ ಅಂತ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ಇನ್ನು ಇದೇ ವೇಳೆ ಮಾತನಾಡಿದ ಹಾಲಪ್ಪ ಆಚಾರ್, ಅಪ್ರಾಪ್ತೆಯರ ಮೇಲೆ ನಡೆದ ಅತ್ಯಾಚಾರ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ದುಷ್ಟರ ಮಟ್ಟ ಹಾಕಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ನಾಲ್ಕು ಅತ್ಯಾಚಾರ ಪ್ರಕರಣಗಳು ನಡೆದಿವೆ. ಜನಜಾಗೃತಿ, ಕಾನೂನಿನ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ ಅಂತ ನಗರದಲ್ಲಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ಬಿಜೆಪಿ ನಾಯಕರ ನೇತೃತ್ವದಲ್ಲಿ ಸಿಂದಗಿ ಉಪಸಮರದಲ್ಲಿ ಶೇಕಡಾ 100ರಷ್ಟು ಗೆಲುವು ಸಾಧಿಸಲಿದೆ. ಅಭ್ಯರ್ಥಿ ರಮೇಶ್ ಭೂಸನೂರ ಎರಡು ಬಾರಿ ಶಾಸಕರಾಗಿದ್ದಾರೆ. ಈ ಬಾರಿಯೂ ಗೆಲುವು ಸಾಧಿಸಲಿದ್ದಾರೆ. ಭಾವನಾತ್ಮಕವಾಗಿ ಕಳೆದ ಬಾರಿ ಜೆಡಿಎಸ್ನ ಮನಗೂಳಿ ಅವರು ಗೆಲುವು ಸಾಧಿಸಿದ್ದರು. ಹಾನಗಲ್ ಹಾಗೂ ಸಿಂದಗಿ ಎರಡು ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಬೊಮ್ಮಾಯಿ ಅವರು ಸಿಎಂ ಆದ ಕ್ಷಣದಲ್ಲೇ ರೈತರ ಮಕ್ಕಳಿಗೆ ಸ್ಕಾಲರ್ಶಿಪ್ ನೀಡುವ ಯೋಜನೆ ಘೋಷಣೆ ಮಾಡಿದ್ದಾರೆ. 7,500 ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡುವ ಕೆಲಸ ಮಾಡಲಾಗುತ್ತಿದೆ. ಪಿಂಚಣಿ ಹೆಚ್ಚಳ 1,000 ರೂ. ನಿಂದ 1,200 ರೂ. ಗೆ ಹೆಚ್ಚಳ ಮಾಡಲಾಗಿದೆ. ಸಿಎಂ ಸ್ಪಷ್ಟ ಆಡಳಿತ ನೀಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ
Viral News: ಮನೆಯ ಹಿಂಭಾಗದಲ್ಲಿ 90ಕ್ಕೂ ಹೆಚ್ಚು ಹಾವಿನ ಮರಿಗಳನ್ನು ಕಂಡು ಬೆಚ್ಚಿಬಿದ್ದ ಮಹಿಳೆ!