Vijayapura ಮಗನ ಸಾವಿನ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ: ಸಾವಿನಲ್ಲೂ ಒಂದಾದ ತಾಯಿ-ಮಗ
ಮಗನ ಸಾವಿನ ಸುದ್ದಿ ಕೇಳಿ ತಾಯಿಗೆ ಹೃದಯಾಘಾತಗಿದ್ದು, ಸಾವಿನಲ್ಲೂ ತಾಯಿ-ಮಗ ಒಂದಾಗಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ: ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ತಾಯಿ-ಮಗ (mother And Son) ಸಾವಿನಲ್ಲೂ ಒಂದಾಗಿದ್ದಾರೆ. ಈ ಮನಕಲಕುವ ಘಟನೆ ಇಂದು(ನವೆಂಬರ್ 30) ವಿಜಯಪುರ (Vijayapura) ಜಿಲ್ಲೆ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದಿಂದ ಇಂದು(ಬುಧವಾರ) ಸಂಜೆ ಶರಣಪ್ಪ ಚನ್ನಮಲ್ಲಪ್ಪ ರೂಗಿ (48) ನಿಧನರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿದ ತಾಯಿ ಸುಗಲಾಬಾಯಿ ಚನ್ನಮಲ್ಲಪ್ಪ ರೂಗಿ (65) ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸಾವಿನಲ್ಲೂ ತಾಯಿ ಮತ್ತು ಮಗ ಒಂದಾಗಿದ್ದಾರೆ.
ಮಗ ಮೃತಪಟ್ಟ ಒಂದು ತಾಸಿನಲ್ಲೇ ತಾಯಿ ಹೃದಯಾಘಾತದಿಂದ ಕೊನೆಯುಸಿರೆಳಿದಿದ್ದಾಳೆ. ತಾಯಿ-ಮಗನ ಸಾವಿನ ಈ ಮನಕಲುಕುವ ಘಟನೆಯಿಂದ ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದ್ದು, ಮಮ್ಮಲ ಮರುಗಿ ಕಣ್ಣೀರಿಡುತ್ತಿದ್ದು, ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 10:31 pm, Wed, 30 November 22