ವಿಜಯಪುರ: ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು ಆರೋಪ!

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು ಮೃತಪಟ್ಟಿದ್ದಾರೆ. ವೈದ್ಯರು ಇಲ್ಲದ ಕಾರಣ ನರ್ಸ್‌ಗಳಿಂದ ಹೆರಿಗೆ ಮಾಡಿಸಲಾಗಿತ್ತು. ಈ ವೇಳೆ ನವಜಾತ ಶಿಶು ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರ ರಕ್ತಸ್ರಾವದಿಂದ ತಾಯಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಗ್ಯ ಇಲಾಖೆ ತನಿಖೆ ನಡೆಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಜಯಪುರ: ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು ಆರೋಪ!
ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು!
Edited By:

Updated on: Feb 20, 2026 | 2:42 PM

ವಿಜಯಪುರ, ಫೆಬ್ರವರಿ 20: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು (Newborn Death) ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಗರ್ಭಿಣಿಗೆ ನರ್ಸ್​ಗಳೇ ಹೆರಿಗೆ ಮಾಡಿಸಿದ್ದರು. ಈ ವೇಳೆ ನವಜಾತ ಶಿಶು ಸಾವನ್ನಪ್ಪಿತ್ತು. ನಂತರ ಬಾಣಂತಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ವೈದ್ಯರಿಲ್ಲದೆ ಹೆರಿಗೆ, ಶಿಶು ಸಾವು

ತಾಲೂಕಿನ ಢವಳಾರ ಗ್ರಾಮದ ಮೈತ್ರಾರನ್ನು ಹೆರಿಗೆಗಾಗಿ ಮೊದಲು ಯಂಕಂಚಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಸಿಂದಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಲಭ್ಯವಿರಲಿಲ್ಲವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಂತಿಮವಾಗಿ ನರ್ಸ್‌ಗಳು ಹಾಗೂ ಇತರ ಸಿಬ್ಬಂದಿಯವರು ಹೆರಿಗೆ ಮಾಡಿಸಿದ್ದು, ಹೆರಿಗೆಯ ವೇಳೆ ನವಜಾತ ಗಂಡು ಶಿಶು ಸಾವನ್ನಪ್ಪಿದೆ. ನಂತರ ಮೈತ್ರಾಗೆ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಿತಿ ಗಂಭೀರಗೊಂಡಾಗ ತಕ್ಷಣವೇ ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಲಾಯಿತು.

ಇದನ್ನೂ ಓದಿ ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆ; ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರ!

ಬೇರೆ ಆಸ್ಪತ್ರೆಗೆ ಕರೆದೊಯ್ಯುವಾಗ ಬಾಣಂತಿಯೂ ಸಾವು!

ಆದರೆ ಅಂಬ್ಯುಲೆನ್ಸ್‌ನಲ್ಲಿ ವಿಜಯಪುರಕ್ಕೆ ಸಾಗಿಸುವಾಗ ಮಾರ್ಗ ಮಧ್ಯೆ ಮೈತ್ರಾ ಮೃತಪಟ್ಟಿದ್ದಾರೆ. ಬಾಣಂತಿ ಮತ್ತು ಶಿಶುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತರ ಪೋಷಕರು ಆರೋಪಿಸಿದ್ದು, ಕರ್ತವ್ಯದಲ್ಲಿದ್ದರೆ ಇಬ್ಬರ ಜೀವ ಉಳಿಯುತ್ತಿತ್ತೆಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆಂಬ ಆರೋಪವೂ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ತನಿಖೆ ನಡೆಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ವೈದ್ಯಾಧಿಕಾರಿ ಸಂಪತ್ ಕುಮಾರ್,  ಈ ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆಯಾದ ಬಳಿಕ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:32 am, Fri, 20 February 26

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us