ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ, ಕಾರು ಸಂಪೂರ್ಣ ಬೆಂಕಿಗಾಹುತಿ
ವಿಜಯಪುರ: ಚಲಿಸುತ್ತಿದ್ದ ಫಿಯಟ್ ಫುಂಟೋ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿ ಉರಿದ ಘಟನೆ ವಿಜಯಪುರ ಹೊರವಲಯದ ಹೆದ್ದಾರಿಯಲ್ಲಿ ನಡೆದಿದೆ. ಕೆಎ 28- ಎನ್ 9957 ನಂಬರಿನ ಕಾರ್ ಬೆಂಕಿಗೆ ಸುಟ್ಟು ಧಗಧಗಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಬೆಂಕಿ ತಗುಲುತ್ತಿದ್ದಂತೆ ಕಾರಿಂದ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಜಯಪುರ: ಚಲಿಸುತ್ತಿದ್ದ ಫಿಯಟ್ ಫುಂಟೋ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿ ಉರಿದ ಘಟನೆ ವಿಜಯಪುರ ಹೊರವಲಯದ ಹೆದ್ದಾರಿಯಲ್ಲಿ ನಡೆದಿದೆ. ಕೆಎ 28- ಎನ್ 9957 ನಂಬರಿನ ಕಾರ್ ಬೆಂಕಿಗೆ ಸುಟ್ಟು ಧಗಧಗಿಸಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಬೆಂಕಿ ತಗುಲುತ್ತಿದ್ದಂತೆ ಕಾರಿಂದ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published On - 8:30 pm, Wed, 29 January 20