ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4 ಸಾವಿರ, ಈಗ 5 ತಿಂಗಳಲ್ಲಿ 250ಕ್ಕೂ ಅಧಿಕ ರೈತರು ಆತ್ಮಹತ್ಯೆ: ಕಟೀಲ್
ಸಿದ್ದರಾಮಯ್ಯ ಬ್ರೇಕ್ ಫಾಸ್ಟ್, ಬೇರೆ ಫಾಸ್ಟ್, ಎಲ್ಲಾ ಮಾಡುತ್ತಿದ್ದಾರೆ. ರೈತರ ಬಗ್ಗೆ ಕಾಳಜಿ ಇಲ್ಲ. ರೈತರ ರಕ್ಷಣೆ ಮಾಡಿದರೆ ಸಿಎಂ ಸೀಟ್ ಉಳಿಯುತ್ತದೆ, ರೈತರ ಕಡೆಗಣಿಸಿದರೆ ಇವರ ಸೀಟ್ ಉಳಿಯೋದಿಲ್ಲ. ಬರದ ನಡುವೆ ಸಿಎಂಗೆ ರಾಜ್ಯದ ರೈತರ ಹಿತರಕ್ಷಣೆ ಮುಖ್ಯವಲ್ಲ. ಖುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ. ಖುರ್ಚಿ ಉಳಿಸಿಕೊಳ್ಳುವ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ. ರೈತರ ರಕ್ಷಣೆ ಹೇಗೆ ಮಾಡುವುದು ಎನ್ನುವ ಯೋಚನೆಯಲ್ಲಿ ಕಾಂಗ್ರೆಸ್ ಹಾಗೂ ಸಿಎಂ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.
ವಿಜಯಪುರ, ನ.04: ಈ ಹಿಂದೆ ಸಿದ್ದರಾಮಯ್ಯ (Siddaramaiah) CM ಆಗಿದ್ದಾಗ 4 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಾರಿ 5 ತಿಂಗಳಲ್ಲೇ 250ಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪೈಕಿ ವಿಜಯಪುರ ಜಿಲ್ಲೆಯಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ (Nalin Kumar Kateel) ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರದ ನಡುವೆ ಸಿಎಂಗೆ ರಾಜ್ಯದ ರೈತರ ಹಿತರಕ್ಷಣೆ ಮುಖ್ಯವಾಗಿಲ್ಲ. ಬ್ರೇಕ್ ಫಾಸ್ಟ್, ಬೇರೆ ಫಾಸ್ಟ್ ಎಲ್ಲಾ ಮಾಡುತ್ತಿದ್ದಾರೆ ಎಂದ ಆಕ್ರೋಶ ಹೊರ ಹಾಕಿದ್ದಾರೆ.
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಅರಕೇರಿಯಲ್ಲಿ ನಳಿನ್ ಕುಮಾರ್ ನೇತೃತ್ವದಲ್ಲಿ ಬರ ವೀಕ್ಷಣೆ ಮಾಡಲಾಗಿದೆ. ಈ ವೇಳೆ ಸಿದ್ದರಾಮಯ್ಯ ಅವರ ಬ್ರೇಕ್ ಪಾಸ್ಟ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಕಳೆದ ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಾರಿ ಕೇವಲ 5 ತಿಂಗಳಲ್ಲೇ 250 ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರದಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ರಾಜ್ಯ ಸರ್ಕಾರ ಪರಿಹಾರ ನೀಡಿಲ್ಲ. ಆತ್ಮಹತ್ಯೆ ಸರಣಿಯಲ್ಲಿ ನಡೆಯುತ್ತಿವೆ, ಬರದಿಂದ ರೈತ ಕಂಗೆಟ್ಟಿದ್ದಾನೆ. ಈ ಕುರಿತ ಯೋಚನೆ ಸಿಎಂಗೆ ಇಲ್ಲ, ಈ ಬಗ್ಗೆ ಸಿಎಂ ತಲೆಕೆಡಿಸಿಕೊಂಡಿಲ್ಲ. ಬ್ರೇಕ್ ಫಾಸ್ಟ್, ಬೇರೆ ಫಾಸ್ಟ್, ಎಲ್ಲಾ ಮಾಡುತ್ತಿದ್ದಾರೆ. ರೈತರ ಬಗ್ಗೆ ಕಾಳಜಿ ಇಲ್ಲ. ರೈತರ ರಕ್ಷಣೆ ಮಾಡಿದರೆ ಸಿಎಂ ಸೀಟ್ ಉಳಿಯುತ್ತದೆ, ರೈತರ ಕಡೆಗಣಿಸಿದರೆ ಇವರ ಸೀಟ್ ಉಳಿಯೋದಿಲ್ಲ. ಬರದ ನಡುವೆ ಸಿಎಂಗೆ ರಾಜ್ಯದ ರೈತರ ಹಿತರಕ್ಷಣೆ ಮುಖ್ಯವಲ್ಲ. ಖುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ. ಖುರ್ಚಿ ಉಳಿಸಿಕೊಳ್ಳುವ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ. ರೈತರ ರಕ್ಷಣೆ ಹೇಗೆ ಮಾಡುವುದು ಎನ್ನುವ ಯೋಚನೆಯಲ್ಲಿ ಕಾಂಗ್ರೆಸ್ ಹಾಗೂ ಸಿಎಂ ಇಲ್ಲ ಎಂದರು.
ಇದನ್ನೂ ಓದಿ: ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್ ಕತ್ತರಿಸಲು ಡಿಕೆ ಶಿವಕುಮಾರ್ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ
ಬರದ ವಿಚಾರದಲ್ಲಿ ರಾಜ್ಯದ ಸಂಸದರು ಪ್ರಧಾನಿಗಳ ಭೇಟಿಗೆ ಸಮಯ ನಿಗದಿ ಮಾಡಿಸಲಿ ಎಂದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯರಿಗೆ ಆಡಳಿತ ನಡೆಸೋಕೆ ಬರೋದಿಲ್ಲ. ಎರಡೆರೆಡು ಬಾರಿ ಮುಖ್ಯಮಂತ್ರಿ, ಹಣಕಾಸು ಸಚಿವರಾದವರಿಗೆ ಆಡಳಿತ ನಡೆಸೋಕೆ ಬರೋಲ್ಲ. NDRF ನಲ್ಲಿ ಹಣ ಬಿಡುಗಡೆಗೆ ಅದರದ್ದೆ ಆದ ಮಾರ್ಗಸೂಚಿ ಇವೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ನೆರೆ ಬಂದಿತ್ತು. ಅವರು ಕೇಂದ್ರ ಹಣಕಾಸಿಗೆ ಕಾಯಲಿಲ್ಲ, ತಕ್ಷಣ ಮನೆಗಳಿಗೆ ಹೋಗಿ 5 ಲಕ್ಷ ಪರಿಹಾರ ಕೊಟ್ಟರು. ಈಗ ಬರ ವಿಚಾರದಲ್ಲಿ ಕೇಂದ್ರದಿಂದ ಹಣ ಬಂದೆ ಬರುತ್ತದೆ. ಮಾರ್ಗಸೂಚಿ ಪ್ರಕಾರ ಅನುದಾನ ಬಂದೆ ಬರುತ್ತದೆ. ತಕ್ಷಣ ಪರಿಹಾರ ಕೊಡಬೇಕಾಗಿರೋದು ಸಿದ್ದರಾಮಣ್ಣನ ಜವಾಬ್ದಾರಿ. ಜಿಲ್ಲಾಧಿಕಾರಿಗಳ ಬಳಿ ಇರುವ NDRF ಹಣವನ್ನೇ ಬಿಡುಗಡೆ ಮಾಡಲಿ ಸಾಕಾಗುತ್ತದೆ. ಬರ ವಿಚಾರದಲ್ಲಿ ಸಿಎಂ ರಾಜಕಾರಣ ಮಾಡುತ್ತಿದ್ದಾರೆಂದು ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ