AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವೇಶ್ವರರ ನಾಡಿಗೂ ಕಾಲಿಟ್ಟ ಧರ್ಮ ದಂಗಲ್​: ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಯತ್ನಾಳ್​ಗೆ ಮನವಿ

ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ವಿಜಯಪುರ ಜಿಲ್ಲಾ ಶ್ರೀರಾಮಸೇನೆ ಕಾರ್ಯಕರ್ತರು, ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರಿಗೆ ಮನವಿ ಮಾಡಿದ್ದಾರೆ.

ಬಸವೇಶ್ವರರ ನಾಡಿಗೂ ಕಾಲಿಟ್ಟ ಧರ್ಮ ದಂಗಲ್​: ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಯತ್ನಾಳ್​ಗೆ ಮನವಿ
ಶ್ರೀರಾಮ ಸೇನಾ ಕಾರ್ಯಕರ್ತರಿಂದ ಯತ್ನಾಳಗೆ ಮನವಿ
TV9 Web
| Edited By: |

Updated on:Dec 07, 2022 | 8:27 PM

Share

ವಿಜಯಪುರ: ರಾಜ್ಯದಲ್ಲಿ ಧರ್ಮ ದಂಗಲ್​ಗೆ​​ ಬ್ರೇಕ್​​ ಬೀಳುತ್ತಿಲ್ಲ. ಒಂದಲ್ಲಾ ಒಂದು ವಿಚಾರಕ್ಕಾಗಿ ಧರ್ಮ ದಂಗಲ್​​ ಮತ್ತೆ ಮುನ್ನಲೆಗೆ ಬರುತ್ತಲೇ ಇದೆ. ಇತ್ತೀಚಿಗೆ ಅಂಜನಾದ್ರಿಯಲ್ಲಿ ಹಿಂದೂಯೇತರ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಬೋರ್ಡ್​​ ಹಾಕಿದ್ದವು. ಈಗ ಇದು ವಿಜಯಪುರಕ್ಕೂ ಕಾಲಿಟ್ಟಿದ್ದು, ನಗರದ ಸಿದ್ದೇಶ್ವರ ಜಾತ್ರೆಯಲ್ಲಿ (Siddeshwar jatre) ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ವಿಜಯಪುರ (Vijaypura) ಜಿಲ್ಲಾ ಶ್ರೀರಾಮಸೇನೆ ಕಾರ್ಯಕರ್ತರು (Shri ram sena activists), ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ (Basangouda Patil Yatnal) ಅವರಿಗೆ ಮನವಿ ಮಾಡಿದ್ದಾರೆ.

ಪ್ರತಿವರ್ಷ ಸಂಕ್ರಮಣದ ವೇಳೆ 8 ದಿನ ಸಿದ್ದೇಶ್ವರ ಜಾತ್ರೆ ನಡೆಯುತ್ತದೆ. ಹೀಗಾಗಿ ಬಸನಗೌಡ ಪಾಟೀಲ್​ ಯತ್ನಾಳ್​ ನೇತೃತ್ವದಲ್ಲಿ ಈ ಬಾರಿಯ ಜಾತ್ರಾ ಪೂರ್ವಭಾವಿ ಸಭೆ ನಡೆದಿದೆ. ಸಭೆಯಲ್ಲಿ ಜಿಲ್ಲಾ ಶ್ರೀರಾಮಸೇನೆ ಕಾರ್ಯಕರ್ತರು ಅಂಗಡಿ-ಮುಂಗಟ್ಟು ಹಾಕಲು ಮುಸ್ಲೀಂ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು. ಲವ್ ಜಿಹಾದ್ ನಿಲ್ಲೋವರೆಗೂ ವ್ಯಾಪಾರ ನಿಷೇಧಿಸುವಂತೆ ಮನವಿ ಮಾಡಿದ್ದಾರೆ.

ಅಂಜನಾದ್ರಿ ಬೆಟ್ಟದಲ್ಲಿ ಅನ್ಯ ಧರ್ಮೀಯರು ವ್ಯಾಪಾರ ಮಾಡುತ್ತಿದ್ದರೆ ಖಂಡಿಸುತ್ತೇನೆ- ಶಶಿಕಲಾ ಜೊಲ್ಲೆ

ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅಂಜನಾದ್ರಿ ಬೆಟ್ಟದಲ್ಲಿ ಅನ್ಯ ಧರ್ಮೀಯರ ವ್ಯಾಪಾರಕ್ಕೆ ವಿರೋಧ ವಿಚಾರವಾಗಿ ಈಗಾಗಲೇ ಮನವಿ ಕೊಟ್ಟಿದ್ದಾರೆ. ನನ್ನ ಗಮನಕ್ಕೆ ಬಂದಿದೆ. ಈ ಕುರಿತು  ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕೋ ಅದನ್ನ ಮಾಡುತ್ತೇನೆ. ಅನ್ಯ ಧರ್ಮಿಯರು ವ್ಯಾಪಾರ ಮಾಡುತ್ತಿದ್ದರೆ ಅದನ್ನು ಖಂಡಿಸುತ್ತೇನೆ. ಆದಷ್ಟು ನಮ್ಮ ಧರ್ಮದವರಿಗೆ ಅನುಕೂಲ ಆಗುವ ರೀತಿ ಮಾಡಿಕೊಡುತ್ತೇನೆ ಎಂದಿದ್ದರು.

ಗಂಗಾವತಿ ತಾಲೂಕಿನಲ್ಲಿರುವ ಹನುಮ ಜನ್ಮಸ್ಥಳ ಐತಿಹಾಸಿಕ ಅಂಜನಾದ್ರಿಯಲ್ಲಿಂದು ಹನುಮ ಮಾಲೆ ವಿಸರ್ಜನೆ ಹಿನ್ನಲೆ. ಅಂಜನಾದ್ರಿಯಲ್ಲಿ ಈ ಭಾರಿ ಹಿಂದೂಗಳನ್ನು ಹೊರತುಪಡಿಸಿ ವ್ಯಾಪಾರ ವಹಿವಾಟು ನೆಡಸದಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಾಣ ವೇದಿಕೆ ಮನವಿ ಮಾಡಿತ್ತು. ಹೀಗಾಗಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಇದರ ಹೊರತಾಗಿ ಇಂದು ಮುಸ್ಲಿಂ ವರ್ತಕರು ವ್ಯಾಪಾರ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶಶಿಕಲಾ ಜೊಲ್ಲೆಯವರು ಹೇಳಿದ್ದರು.

ಇನ್ನು ಇದೆ ಸಂದರ್ಭದಲ್ಲಿ ಮದರಸಾಗಳಂತೆ ಕೇಸರಿ ಶಾಲೆಗಳನ್ನ ಆರಂಭಿಸಬೇಕು ಎನ್ನುವ ವಿಚಾರವಾಗಿ ಮಾತನಾಡಿದ ಅವರು ಈಗಾಗಲೇ ಆ ಬೇಡಿಕೆಯಿದೆ, ಸಂಘರ್ಷ ನಡೆಯುತ್ತಿದೆ. ಶಿಕ್ಷಣ ಸಚಿವರು, ಸಿಎಂ ವಿಶೇಷ ಕಾಳಜಿ ವಹಿಸುತ್ತಾರೆ. ಯಾವುದಕ್ಕೂ ಹಿಂದುಗಳಿಗೆ ಅನ್ಯಾಯ ಆಗಬಾರದು. ಒಂದೇ ನಿಯಮದಡಿ ಶಿಕ್ಷಣ ಕಲಿಯಬೇಕು ಮದರಾಸಗಳನ್ನ ಸ್ಥಗಿತಗೊಳಬೇಕು ಎನ್ನುವುದಲ್ಲ, ಅಲ್ಲಿ ಹಿಂದೂ ವಿರೋಧಿ ಚಟುವಟಿಕೆ ಆಗಬಾರದು ಎಂದು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:11 pm, Wed, 7 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?