ಮೈತ್ರಿಗೆ ವಿರೋಧವಿಲ್ಲ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪಕ್ಷ ಬಿಡುವುದಿಲ್ಲ: ಶಾಸಕ ಜಿಟಿ ದೇವೇಗೌಡ

ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರೋಧವಿಲ್ಲ. ಅವರು ಪಕ್ಷ ಬಿಡುವುದಿಲ್ಲ. ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಇಬ್ರಾಹಿಂ ಮಾತನಾಡಿದ್ದಾರೆ. ಹೇಗೆ ಒಟ್ಟಾಗಿ ಹೋಗಬೇಕು ಎನ್ನುವುದಕ್ಕೆ ಅವರೇ ಸಲಹೆ ನೀಡಿದ್ದಾರೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಮೈತ್ರಿಗೆ ವಿರೋಧವಿಲ್ಲ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪಕ್ಷ ಬಿಡುವುದಿಲ್ಲ: ಶಾಸಕ ಜಿಟಿ ದೇವೇಗೌಡ
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 11, 2023 | 2:48 PM

ವಿಜಯಪುರ, ಅಕ್ಟೋಬರ್​​ 11: ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ (CM Ibrahim) ವಿರೋಧವಿಲ್ಲ. ಅವರು ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಇಬ್ರಾಹಿಂ ಮಾತನಾಡಿದ್ದಾರೆ. ಬಿಜೆಪಿ ಜತೆ ಮೈತ್ರಿಗೆ ವಿರೋಧವಿಲ್ಲ. ಹೇಗೆ ಒಟ್ಟಾಗಿ ಹೋಗಬೇಕು ಅನ್ನೋದು ಸಿ.ಎಂ.ಇಬ್ರಾಹಿಂ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಅವರೇ ಮುಂದೆ ನಿಂತು ನನ್ನ ಅಧ್ಯಕ್ಷ ಸ್ಥಾನ ಅನೌನ್ಸ್ ಮಾಡಿದ್ದಾರೆ, ನೀವೆ ನೋಡಿದ್ದೀರಿ. ಬಿಜೆಪಿ ಜೊತೆಗೆ ಎಷ್ಟು ಸೀಟ್ ಹಂಚಿಕೆಯಾಗಬೇಕು. ಮುಂದೆ ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಸಲಹೆ ಇಬ್ರಾಹಿಂರದ್ದು ಎಂದಿದ್ದಾರೆ.

ಗೃಹಜ್ಯೋತಿ, ಅನ್ನಭಾಗ್ಯ ಎಲ್ಲಾ ಸುಳ್ಳು ಎಂದ ಜಿಟಿ ದೇವೆಗೌಡ

ನನಗೂ ಇನ್ನೂರು ಯುನಿಟ್, ಮಹಾದೇವಪ್ಪಾ ನಿನಗೂ ಇನ್ನೂರು ಯುನಿಟ್ ಎಂದು ಸಿದ್ದಮಯ್ಯನವರು ಹೇಳಿದ್ದರು. ಆಯ್ಕೆಯಾದ ಮೇಲೆ 53 ಯುನಿಟ್ ಘೋಷಣೆ ಮಾಡಿದ್ದಾರೆ. ಕರೆಂಟ್ ಬಿಲ್ ಜಾಸ್ತಿ ಮಾಡಿದ್ದಾರೆ. ರೈತರಿಗೆ ಏಳು ಗಂಟೆ ವಿದ್ಯುತ್ ಕೊಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾಗಲೇ ಆದೇಶ ಮಾಡಿದ್ದಾರೆ. ಆದರೆ ಇದೀಗ ಎರಡು ಗಂಟೆ ಕರೆಂಟ್ ಇಲ್ಲವಾಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನುಡಿದಂತೆ ನಡೆದ ಮುನಿರತ್ನ: ಡಿಕೆ ಶಿವಕುಮಾರ್ ಇದ್ದಲ್ಲಿಗೆ ಹೋಗಿ ಕಾಲಿಗೆ ಬಿದ್ದ ಬಿಜೆಪಿ ಶಾಸಕ

ಬರಗಾಲದಲ್ಲಿ ಕರೆ ಕಟ್ಟೆಯಲ್ಲಿ ನೀರಿಲ್ಲ, ಬಾವಿಗಳಿಗೆ ಕರೆಂಟ್ ಇಲ್ಲ. ಕರೆಂಟ್ ಎಲ್ಲಿ ಕೊಟ್ಟರು? ಯಾರಿಗೆ ಕೊಟ್ಟರು? ಬರೀ ಸುಳ್ಳು ಹೇಳುವುದು ಆಗಿದೆ. ಕರೆಂಟ್ ಸುಳ್ಳು, ಗೃಹಜ್ಯೋತಿ ಸುಳ್ಳು, ಅನ್ನಭಾಗ್ಯ ಸುಳ್ಳು ಎಂದು ಆರೋಪಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ವಿಚಾರವಾಗಿಯೂ ಅಸಮಾಧಾನ ಹೊರ ಹಾಕಿದ್ದು, ಮನೆ ಯಜಮಾನಿ ಸತ್ತರೆ ಯಜಮಾನನಿಗೆ ಕೊಡಲ್ಲಾ, ತಂದೆ-ತಾಯಿ ಇಬ್ಬರೂ ಸತ್ತರೆ ಪಾಪ ಮಕ್ಕಳಿಗೆ ಇಲ್ಲ. ಇದು ಗೃಹಲಕ್ಷ್ಮಿ, ಇಂತಹ ಕಾರ್ಯಕ್ರಮ ಯಾವುದು ಬರುತ್ತಿಲ್ಲ. ಯಾವುದಕ್ಕೂ ಹಣ ಇಲ್ಲಾ, ಬರೀ ಸುಳ್ಳು ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ರೈತರಿಗೆ ಲೋಡ್​ಶೆಡ್ಡಿಂಗ್​​ ಶಾಕ್​: ಪಂಪ್​ಸೆಟ್​ಗಳಿಗೆ ಅಸಮರ್ಪಕ ವಿದ್ಯುತ್​ ಪೂರೈಕೆಯಿಂದ ಅನ್ನದಾತ ಕೆಂಡಾಮಂಡಲ

ಕಾಂಗ್ರೆಸ್ ಸರ್ಕಾರ ಬದಲಾವಣೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಜಮೀರ್ ಅಹ್ಮದಖಾನ್ ತಿರುಗೇಟು ವಿಚಾರವಾಗಿ ಮಾತನಾಡಿದ ಅವರು, ಹಗಲುಗನಸು ನಾವು ಕಾಣುತ್ತಿಲ್ಲಾ. ಲೋಕಸಭೆಯಲ್ಲಿ ಗೆಲ್ಲದೆ ಹೋದರೆ ರಾಜೀನಾಮೆ ಕೊಡಬೇಕು ಎಂದು ಅವರೇ ಹೇಳಿದ್ದು. ಇದನ್ನಾ ನಾವು ಹೇಳಿದ್ದಾ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಶಾಸಕರೆ ಬಾಯಿ ಬಡ್ಕೋತಿದ್ದಾರೆ. ಈಗಾಗಲೇ ಕಂಪ್ಲಿ ಶಾಸಕ ಗಣೇಶ್, ರಾಯರೆಡ್ಡಿ ಅಸಮಧಾನ ಹೊರ ಹಾಕಿದ್ದಾರೆ. ರಾಜ್ಯದ ಜನ ಅದಕ್ಕಿಂತ ಜಾಸ್ತಿ ಬಾಯಿ ನಡೆಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಕಣ್ಣು ಇಲ್ಲ, ಕಿವಿಯೂ ಇಲ್ಲ ಎಂದು ಹರಿಹಾಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್