ವಿಜಯಪುರದ ಸಿದ್ದೇಶ್ವರ ಜಾತ್ರೆಯಲ್ಲಿ ಅನ್ಯಕೋಮಿನ ವ್ಯಾಪಾರಿಗಳಿಗೆ ಅವಕಾಶವಿಲ್ಲ: ಹಿಂದೂ ಸಂಘಟನೆಗಳ ಒಕ್ಕೂಟದ ಬ್ಯಾನರ್
ವಿಜಯಪುರದಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಸಂಕ್ರಾಂತಿ ಹಬ್ಬದ ವೇಳೆ ನಡೆಯುವ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಕೋಮಿನ ವ್ಯಾಪಾರಿಗಳಿಗೆ ಅವಕಾಶ ನೀಡುವುದಿಲ್ಲ. ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ದೇಗುಲದ ಮುಂದೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ.
ವಿಜಯಪುರ, ಜನವರಿ 07: ಈ ಹಿಂದೆ ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ವ್ಯಪಾರಿ ಧರ್ಮ ದಂಗಲ್ ಈ ಬಾರಿಯೂ ಮುಂದುವರಿಯುವ ಲಕ್ಷಣಗಳು ಗೋಚರಿಸುತ್ತಿದೆ. ಹೌದು ವಿಜಯಪುರ ನಗರದಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಸಂಕ್ರಾಂತಿ ಹಬ್ಬದ ವೇಳೆ ನಡೆಯುವ ಸಿದ್ದೇಶ್ವರ ದೇವಸ್ಥಾನದ (Siddheshwar Temple) ಜಾತ್ರೆಯಲ್ಲಿ ಅನ್ಯಕೋಮಿನ ವ್ಯಾಪಾರಿಗಳಿಗೆ ಅವಕಾಶ ನೀಡುವುದಿಲ್ಲ. ಕೇವಲ ಹಿಂದೂ (Hindu) ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ದೇಗುಲದ ಮುಂದೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ.
ಈ ದೇಶದ ಕಾನೂನಿಗೆ, ನಾಯಾಲಯದ ತೀರ್ಪಿಗೆ ಗೌರವ ನೀಡದವರಿಗೆ, ಪದೇ ಪದೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ, ಜಿಹಾದ್ ಹೆಸರಿನಲ್ಲಿ ದೇಶದ ಅಖಂಡತೆಗೆ ಮಾರಕವಾಗಿರುವ ಕ್ರೂರ ಮತಾಂಧರೊಂದಿಗೆ ಹಿಂದೂಗಳು ವ್ಯಾಪಾರ, ವಹಿವಾಟು ನಡೆಸಲ್ಲ. ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂದು ದೇವಸ್ಥಾನದ ಎದುರಿಗೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ.
ಇದನ್ನೂ ಓದಿ: Dharma Dangal: ಮತ್ತೆ ಧರ್ಮ ದಂಗಲ್ ಶುರು? ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಒಡೆದ ಪ್ರಕರಣಕ್ಕೆ ಮತ್ತೆ ಜೀವ
ಅನ್ಯಕೋಮಿನವರಿಗೆ ಅವಕಾಶ ನೀಡದಂತೆ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೂ ಹಿಂದೂ ಸಂಘಟನೆಗಳ ಒಕ್ಕೂಟ ಮನವಿ ಸಲ್ಲಿಸಿದೆ. ಸದ್ಯ ಇದು ಪರ ವಿರೋಧಕ್ಕೆ ಕಾರಣವಾಗಿದೆ.
ವ್ಯಾಪಾರಿ ಧರ್ಮ ದಂಗಲ್
ಕಳೆದ ಎರಡು ವರ್ಷ ರಾಜ್ಯದಲ್ಲಿ ಧಾರ್ಮಿಕ ವ್ಯಾಪಾರಿ ಧರ್ಮ ದಂಗಲ್ ಭಾರೀ ವಿವಾದ ಸೃಷ್ಟಿಸಿತ್ತು. ಕರಾವಳಿಯಲ್ಲಿ ಆರಂಭವಾದ ಈ ವಿವಾದ ರಾಜ್ಯಾದ್ಯಂತ ಹಬ್ಬುವ ಮೂಲಕ ಮತ್ತಷ್ಟು ಬಿಸಿಯೇರಿತ್ತು. ದೇವಸ್ಥಾನಗಳ ಜಾತ್ರೆಯ ಹೊತ್ತಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರ ನಿಷೇಧ ಅನ್ನೋ ಬ್ಯಾನರ್ ಹಾಕುವ ಮೂಲಕ ಹಿಂದೂ ಸಂಘಟನೆಗಳು ವಿವಾದ ಎಬ್ಬಿಸಿದ್ದವು. ಧಾರ್ಮಿಕ ದತ್ತಿ ಕಾನೂನಿನ ಪ್ರಕಾರವೇ ಅನ್ಯ ಧರ್ಮೀಯರಿಗೆ ವ್ಯಾಪಾರದ ಅವಕಾಶ ಇಲ್ಲ ಅಂತ ವಾದಿಸಿ ಸಂಘರ್ಷ ಎದ್ದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:55 pm, Sun, 7 January 24