AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧುತ್ವ, ನೇಮಕಾತಿ ಆದೇಶ ಪತ್ರ ವಿಚಾರವಾಗಿ ವಿಜಯಪುರದಲ್ಲಿ ಅಭ್ಯರ್ಥಿಗಳ ಪ್ರತಿಭಟನೆ

2022ನೇ ಸಾಲಿನ ಜಿಪಿಟಿ ಶಿಕ್ಷಕರ ನೇಮಕಾತಿಯಲ್ಲಿ ಸಾಮಾನ್ಯ ವರ್ಗದಲ್ಲಿ ನೂರಾರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ, ನೇಮಕಾತಿ ಆದೇಶ ಪ್ರತಿ ನೀಡುವಂತೆ ವಿಜಯಪುರ ನಗರದ ಡಿಡಿಪಿಐ ಕಚೇರಿಯ ಎದುರು ಶಿಕ್ಷಕ ಅಭ್ಯರ್ಥಿಗಳ ಪ್ರತಿಭಟನೆ ನಡೆಸಿದರು.

ಸಿಂಧುತ್ವ, ನೇಮಕಾತಿ ಆದೇಶ ಪತ್ರ ವಿಚಾರವಾಗಿ ವಿಜಯಪುರದಲ್ಲಿ ಅಭ್ಯರ್ಥಿಗಳ ಪ್ರತಿಭಟನೆ
ಡಿಡಿಪಿಐ ಕಚೇರಿ ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Nov 08, 2023 | 2:35 PM

Share

ವಿಜಯಪುರ ನ.08: ಹಿಂದುಳಿದ ವರ್ಗದ (OBC) ಅಭ್ಯರ್ಥಿಗಳು ಮೀಸಲಾತಿ ಪಡೆಯದೇ ಸಾಮಾನ್ಯ ವರ್ಗದಲ್ಲಿ ಆಯ್ಕೆ ಆದರೂ ಅಧಿಕಾರಿಗಳು ಸಿಂಧುತ್ವ ಕೇಳುತ್ತಿರುವುದನ್ನು ಪ್ರಶ್ನಿಸಿ ವಿಜಯಪುರದ (Vijayapura) ಡಿಡಿಪಿಐ ಕಚೇರಿ ಎದುರು ನೂರಾರು ಶಿಕ್ಷಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಸಾಮಾನ್ಯ ಕೆಟಗೆರಿಯಲ್ಲಿ ಆಯ್ಕೆ ಆದವರಿಗೆ ಸಿಂಧುತ್ವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿಗಳ ಆದೇಶವಿದ್ದರೂ ಅಧಿಕಾರಿಗಳು ಸಿಂಧುತ್ವ ಕೇಳುತ್ತಿದ್ದಾರೆ. ಇದರಿಂದ ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಜಿಲ್ಲೆಯ 700ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದಲ್ಲಿ ಏನಿದೆ

ರಾಜ್ಯ ನಾಗರಿಕ ಸೇವಾದ ಸಾಮಾನ್ಯ ವರ್ಗದ ಹುದ್ದೆಗಳಿಗೆ ಮೀಸಲಾತಿ ಪಡೆಯದೇ ಆಯ್ಕೆಯಾದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಕಡ್ಡಾಯಗೊಳಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿ ಸೂಚಿಸಿದ್ದರು.

ರಾಜ್ಯದ ಅನುಸೂಚಿತ ಜಾತಿಗಳು, ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ ನಿಯಮಗಳು 1992ರ ಅನ್ವಯ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಅಂತಿಮ ಆಯ್ಕೆ ಪಟ್ಟಿಯಲ್ಲಿ ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಹಾಗೂ ಸದರಿ ಮೀಸಲಾತಿಯಿಂದ ರಿಯಾಯಿತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೇ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಸಿಂಧುತ್ವ ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ.

ಇದನ್ನೂ ಓದಿ: ಸಮಸ್ಯೆಯ ಸುಳಿಯಲ್ಲಿ ಪದವೀಧರ ಶಾಲಾ ಶಿಕ್ಷಕರ ನೇಮಕಾತಿ, ತೊಂದರೆಗೆ ಸಿಲುಕಿದ ಸಾವಿರಾರು ಮಹಿಳಾ ಅಭ್ಯರ್ಥಿಗಳು -ಸರ್ಕಾರದಿಂದಲೂ ಸ್ಪಂದನೆಯಿಲ್ಲ

ಆದರೆ, ಮೀಸಲಾತಿ ಕೋರಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡಾಗಲೂ ಸಿಂಧುತ್ವ ಪ್ರಮಾಣ ಪತ್ರ ಸಲ್ಲಿಸುವಂತೆ ಕೆಲವು ನೇಮಕಾತಿ ಪ್ರಾಧಿಕಾರಿಗಳು ಅಭ್ಯರ್ಥಿಗಳಿಗೆ ಸೂಚಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಳು ಈ ನಿರ್ದೇಶನ ನೀಡಿದ್ದಾರೆ.

ನೇಮಕಾತಿ ಆದೇಶ ಕೊಡುವವರೆಗೂ ಭಾವಿ ಶಿಕ್ಷಕರ ಪ್ರತಿಭಟನೆ

2022ನೇ ಸಾಲಿನ ಜಿಪಿಟಿ ಶಿಕ್ಷಕರ ನೇಮಕಾತಿಯಲ್ಲಿ ಸಾಮಾನ್ಯ ವರ್ಗದಲ್ಲಿ ನೂರಾರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇವರ ನೇಮಕಾತಿ ಆದೇಶ ಕೊಡುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಭಾವಿ ಶಿಕ್ಷಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜಿಪಿಟಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ, ನೇಮಕಾತಿ ಆದೇಶ ಪ್ರತಿ ನೀಡುವಂತೆ ವಿಜಯಪುರ ನಗರದ ಡಿಡಿಪಿಐ ಕಚೇರಿಯ ಎದುರು ಭಾವಿ ಶಿಕ್ಷಕರು ಪ್ರತಿಭಟನೆ ನಡೆಸಿದರು.

ಕೆಲವೊಂದು ಸಮಸ್ಯೆಗಳು ನಮಗೆ ತಿಳಿಸದೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೇಮಕಾತಿ ಆದೇಶ ಪ್ರತಿ ನೀಡುತ್ತಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಲ್ಲಿ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿದೆ. ತಕ್ಷಣವೇ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಡಿಡಿಪಿಐ ಮ‌ೂಲಕ ಅಭ್ಯರ್ಥಿಗಳು ಸರ್ಕಾರಕ್ಕೆ ಆಗ್ರಹಿಸಿದರು.

ಸರ್ಕಾರದ ನಿಯಮಗಳ ಪ್ರಕಾರ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಡಿಡಿಪಿಐ ಎನ್​ಹೆಚ್ ನಾಗೂರ ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ