ವಿಕಲಾಂಗ ವಿದ್ಯಾರ್ಥಿಗೆ ಒಂದು ಗಂಟೆ ತಡವಾಗಿ SSLC ಪರೀಕ್ಷೆ ಬರೆಸಿದ ಅಧಿಕಾರಿಗಳು; ಪೋಷಕರ ಆಕ್ರೋಶ

ಕೈಗಳ ಶಕ್ತಿ ಕಳೆದುಕೊಂಡಿರುವ ವಿದ್ಯಾರ್ಥಿಗೆ ಸಹಾಯಕ ವಿದ್ಯಾರ್ಥಿ ನೀಡದೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಬರೋಬ್ಬರಿ ಒಂದು ಗಂಟೆ ತಡವಾಗಿ ಸಹಾಯಕ ವಿದ್ಯಾರ್ಥಿ ನೀಡಿ ಪರೀಕ್ಷೆ ಬರೆಸಿದ್ದಾರೆ. ಇದರಿಂದ ನೊಂದ ಪೋಷಕರು ಮುಂದಿನ ಪರೀಕ್ಷೆಗಳಿಗೆ ಈ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ವಿಕಲಾಂಗ ವಿದ್ಯಾರ್ಥಿಗೆ ಒಂದು ಗಂಟೆ ತಡವಾಗಿ SSLC ಪರೀಕ್ಷೆ ಬರೆಸಿದ ಅಧಿಕಾರಿಗಳು; ಪೋಷಕರ ಆಕ್ರೋಶ
ವಿಕಲಾಂಗ ವಿದ್ಯಾರ್ಥಿಗೆ ಸಹಾಯಕ ವಿದ್ಯಾರ್ಥಿ ನೀಡಲು ಅಧಿಕಾರಿಗಳ ನಿರ್ಲಕ್ಷ್ಯ
Edited By: ಆಯೇಷಾ ಬಾನು

Updated on: Mar 27, 2024 | 1:40 PM

ವಿಜಯಪುರ, ಮಾರ್ಚ್​.27: ಮಾರ್ಚ್​ 25ರಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exam) ಆರಂಭವಾಗಿದೆ. ಶಿಕ್ಷಣ ಇಲಾಖೆ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸೌಲಭ್ಯಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದೆ. ಆದರೆ ವಿಜಯಪುರದಲ್ಲಿ (Vijayapura) ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ವಿಕಲಾಂಗ ವಿದ್ಯಾರ್ಥಿ ಪರದಾಡಿದ ಘಟನೆ ನಡೆದಿದೆ. ವಿಕಲಾಂಗ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಸಹಾಯಕ ವಿದ್ಯಾರ್ಥಿ ನೀಡದೆ ವಿಜಯಪುರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಆಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮೊಹಮ್ಮದ್ ಅಜ್ಲಾನ್ ನಾಯ್ಕೋಡಿ ಎಂಬ ವಿಕಲಾಂಗ ವಿದ್ಯಾರ್ಥಿ ಕೈಗಳ ಶಕ್ತಿ ಕಳೆದುಕೊಂಡಿದ್ದಾನೆ. ಆತನಿಗೆ ಬರೆಯಲು ಆಗಲ್ಲ. ಹೀಗಾಗಿ ಸಹಾಯಕ ವಿದ್ಯಾರ್ಥಿ ನೀಡಿ ಪರೀಕ್ಷೆ ಬರೆಸಬೇಕಿತ್ತು. ಆದರೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಸಹಾಯಕ ವಿದ್ಯಾರ್ಥಿ ಇಲ್ಲದೆ ಅಜ್ಲಾನ್ ಪರೀಕ್ಷೆಯನ್ನು ತಡವಾಗಿ ಬರೆಯುವಂತಾಗಿದೆ. ತಮ್ಮ ಮಗನಿಗೆ ಪರೀಕ್ಷೆ ಬರೆಯಲು ಆಗಲ್ಲ. ಸಹಾಯಕ ವಿದ್ಯಾರ್ಥಿಯನ್ನೂ ನೀಡಿಲ್ಲ ಎಂದು ವಿದ್ಯಾರ್ಥಿ ತಂದೆ ಪರೀಕ್ಷಾ ಕೇಂದ್ರದ ಬಳಿ ಕಣ್ಣೀರು ಹಾಕಿದ್ರು. ಸಹಾಯಕ ವಿದ್ಯಾರ್ಥಿಯನ್ನು ಕೊಡಲು ಮರೆತಿದ್ದ ಅಧಿಕಾರಿಗಳು ಒಂದು ಗಂಟೆ ತಡವಾಗಿ ಸಹಾಯಕ ವಿದ್ಯಾರ್ಥಿ ನೀಡಿ ಪರೀಕ್ಷೆ ಬರೆಸಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಒಂದೇ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ತಾಯಿ

ವಿಜಯಪುರ ನಗರದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಂಸ್ಥೆ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿರೋ ವಿದ್ಯಾರ್ಥಿ ಮೊಹಮ್ಮದ್ ಅಜ್ಲಾನ್ ಸಹಾಯಕ ವಿದ್ಯಾರ್ಥಿ ಇಲ್ಲದ ಕಾರಣ ಪರೀಕ್ಷೆಯನ್ನು ಬರೆಯಲಾಗದೆ ಕುಳಿತಿದ್ದರು. ಸಹಾಯಕ ವಿದ್ಯಾರ್ಥಿ ನೀಡಲು ಕಳೆದ ಫೆಬ್ರವರಿಯಲ್ಲೇ ವಿದ್ಯಾರ್ಥಿಯ ಶಾಲೆಯವರು ಡಿಡಿಪಿಐ ಕಚೇರಿಗೆ ಮನವಿ ಮಾಡಿದ್ದರು. ಫೆಬ್ರವರಿಯಲ್ಲಿ ಮನವಿ ನೀಡಿದ್ದರೂ ಸಹಾಯಕ ವಿದ್ಯಾರ್ಥಿಗೆ ಅವಕಾಶ ನೀಡದೇ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು. ಕೊನೆಗೆ ಒಂದು ಗಂಟೆ ತಡವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸಹಾಯಕ ವಿದ್ಯಾರ್ಥಿಗೆ ಅವಕಾಶ ನೀಡಿದರು. ಮುಂದಿನ ಪರೀಕ್ಷೆಗಳಿಗೆ ಈ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಪೋಷಕರು ಮನವಿ ಮಾಡಿದ್ದಾರೆ.

SSLC ಪರೀಕ್ಷೆ ಬರೆಯುವಾಗ ವಿದ್ಯಾರ್ಥಿ ಸಾವು

SSLC ಪರೀಕ್ಷೆ ಬರೆಯುವಾಗ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ತುರುವೇಕೆರೆ ಸರಸ್ವತಿ ಬಾಲಕರ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಚಿಕ್ಕರಾಂಪುರ ನಿವಾಸಿ ಮೋಹನ್ ಮೃತಪಟ್ಟ ದುರ್ದೈವಿ. ನಿನ್ನೆ ಸರಸ್ವತಿ ಬಾಲಕರ ಪ್ರೌಢಶಾಲಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಮೋಹನ್ ಬಂದಿದ್ದ. ಪರೀಕ್ಷೆ ಬರೆಯುವಾಗ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆಸ್ಪತ್ರೆ ಸಾಗಿಸಲಾಯ್ತು, ಆದ್ರೆ, ಸಾಗಿಸುವ ಮಾರ್ಗಮಧ್ಯೆ ಮೋಹನ್ ಕುಮಾರ್ ಕೊನೆಯುಸಿರೆಳೆದಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us