ಕರ್ನಾಟಕದಲ್ಲಿ ಬಾಲ ಬಿಚ್ಚಿದ ಪಾಕ್​ ಪ್ರೇಮಿ: ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್​ ಪರ ಪೋಸ್ಟ್​​, ದೂರು ದಾಖಲು

ಗಡಿಯಲ್ಲಿ ಅತ್ತ ಪಾಕ್​​ ಬಾಲ ಬಿಚ್ಚಿದ್ದಂತೆ ಇತ್ತ ಕರ್ನಾಟದಲ್ಲಿ ಕೆಲ ಪಾಕ್​​ ಪ್ರೇಮಿಗಳು ಕೂಡ ಬಾಲ ಬಿಚ್ಚಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್​ಗಳನ್ನು ಹರಿಬಿಡುತ್ತಿದ್ದಾರೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಸದ್ಯ ಆಕೆ ವಿರುದ್ಧ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಾಗಿದೆ. ಕೇಸ್​ ದಾಖಲಾಗುತ್ತಿದ್ದಂತೆ ವಿದ್ಯಾರ್ಥಿನಿ ಉಲ್ಟಾ ಹೊಡೆದಿದ್ದಾಳೆ.

ಕರ್ನಾಟಕದಲ್ಲಿ ಬಾಲ ಬಿಚ್ಚಿದ ಪಾಕ್​ ಪ್ರೇಮಿ: ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್​ ಪರ ಪೋಸ್ಟ್​​, ದೂರು ದಾಖಲು
ವೈರಲ್​ ಪೋಸ್ಟ್
Edited By:

Updated on: May 09, 2025 | 8:10 AM

ವಿಜಯಪುರ, ಮೇ 09: ಆಪರೇಷನ್ ಸಿಂಧೂರದಿಂದ (Operation Sindoor) ಕಂಗೆಟ್ಟಿದ್ದ ಪಾಕ್ ಮತ್ತೆ ಬಾಲ ಬಿಚ್ಚಿದೆ. ಜಮ್ಮು ಕಾಶ್ಮೀರದ ಹಲವೆಡೆ ಮಿಸೈಲ್ ದಾಳಿ ನಡೆಸಿ ಅಟ್ಟಹಾಸ ಮೆರೆದಿದೆ. 35 ನಿಮಿಷ ಡ್ರೋನ್ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಶಾಸ್ತಿ ಮಾಡಿದೆ. ಪಾಕಿಸ್ತಾನದ ಮಿಸೈಲ್​ಗಳನ್ನು S-400 ಮಿಸೈಲ್ ಜೆಟ್ ಹೊಡೆದುರುಳಿಸಿದೆ. ಅತ್ತ ಪಾಕ್​​ ಬಾಲ ಬಿಚ್ಚಿದ್ದಂತೆ ಇತ್ತ ಕರ್ನಾಟದಲ್ಲಿ ಕೆಲ ಪಾಕ್​​ ಪ್ರೇಮಿಗಳು ಕೂಡ ಬಾಲ ಬಿಚ್ಚಿದ್ದಾರೆ. ವಿಜಯಪುರದ (Vijayapura) ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್​​ ಹಂಚಿಕೊಂಡಿದ್ದಾಳೆ. ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಪೆಹೆಲ್ಗಾಮ್​ನಲ್ಲಿ ಪಾಕ್​​ ಉಗ್ರರಿಂದ 26 ಭಾರತೀಯ ಪ್ರವಾಸಿಗರ ಹತ್ಯೆ ವಿಚಾರವಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡುವ ಮೂಲಕ ಭಾರತೀಯ ಸೇನೆ ಈಗಾಗಲೇ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ತಷಾವುದ್ದ ಫಾರೂಖಿ ಶೇಖ್ ಎಂಬ ವಿದ್ಯಾರ್ಥಿನಿ ಪಾಕಿಸ್ತಾನದ ಪರ ಪೋಸ್ಟ್ ಹರಿಬಿಟ್ಟಿದ್ದಾಳೆ.

ವಿದ್ಯಾರ್ಥಿನಿ ತಷಾವುದ್ದ ಪೋಸ್ಟ್​ನಲ್ಲಿ ಏನಿದೆ?

ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್​ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಮೀನ್#sos” ಎಂದು ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ತನ್ನ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಕೂಡ ಪೋಸ್ಟ್ ಹಾಕಿದ್ದಾಳೆ.

ಇದನ್ನೂ ಓದಿ
ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು
ಮೋದಿ ನಾಯಕತ್ವ ಮೆಚ್ಚಿದ ದೇವೇಗೌಡ: ಪ್ರಧಾನಿಗೆ ಮಾಜಿ ಪ್ರಧಾನಿ ಪತ್ರ
ಪಾಕ್​ಗೆ ತೆರಳಲು ಸಮಯ ಕೋರಿದ್ದ ಅರ್ಜಿ ವಜಾ, ಕೋರ್ಟ್ ಹೇಳಿದ್ದೇನು?
ಆಪರೇಷನ್ ಸಿಂಧೂರ್​​ ಬೆನ್ನಲ್ಲೇ ಕರ್ನಾಟದ ಡ್ಯಾಂಗಳಲ್ಲಿ ಹೈ ಅಲರ್ಟ್

ಇದನ್ನೂ ಓದಿ: ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು: ಓವರ್ ಟೈಂ ಕೆಲಸಕ್ಕೆ ಸಿದ್ಧರಿರಲು ಸೂಚನೆ

ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್​ ಪೋಸ್ಟ್ ವೈರಲ್​ ಬೆನ್ನಲ್ಲೇ ಆಕೆಯ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ಪರ ಸಂಘಟನೆಗಳಿಂದ ಒತ್ತಾಯಿಸಲಾಗಿದೆ. ಬಳಿಕ ಪಿಎಸ್ಐ ವಿನೋದ ದೊಡಮನಿಯಿಂದ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಪಾಕ್ ಪರ ಪೋಸ್ಟ್ ಹಾಕಿದ್ದಕ್ಕೆ ದೇಶದ ಸಾರ್ವಭೌಮತ್ವದ ಘನತೆಗೆ ಅಪಾಯಕಾರಿಯಾಗುವ ರೀತಿಯಲ್ಲಿ, ದೇಶದ ಏಕತೆಗೆ ಧಕ್ಕೆ ತರುವಂತಹ ಪೋಸ್ಟ್ ಹಾಕಿದ ಕಾರಣ ದಂತ ವೈದ್ಯಕೀಯ ವಿದ್ಯಾರ್ಥಿನಿ ತಷಾವುದ್ದ ಮೇಲೆ BNS 152. 197.3(5) ಅಡಿ ದೂರು ದಾಖಲಾಗಿದೆ.

ಯೂ ಟರ್ನ್ ಹೊಡೆದ ತಷಾವುದ್ದ 

ಅತ್ತ ದೂರು ದಾಖಲಾಗುತ್ತಿದ್ದಂತೆ ಇತ್ತ ವಿದ್ಯಾರ್ಥಿನಿ ತಷಾವುದ್ದ ಯೂ ಟರ್ನ್ ಹೊಡೆದಿದ್ದಾಳೆ. “ನನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿನ ನನ್ನ ಕಾಮೆಂಟ್‌ಗೆ ಸಂಬಂಧಿಸಿದೆ ಅದು ಕೆಲವರನ್ನು ನೋಯಿಸಿದೆ. ಮನನೊಂದಿರುವ ಎಲ್ಲರಿಗೂ ನನ್ನ ಹೃದಯದಿಂದ ಕ್ಷಮೆಯಾಚಿಸುತ್ತೇನೆ. ಭಾರತೀಯಳಾದ ನಾನು ನನ್ನ ರಾಷ್ಟ್ರವನ್ನು ಪ್ರೀತಿಸುತ್ತೇನೆ. ಇದು ನನ್ನ ತಾಯ್ನಾಡು. ಭಾರತದಲ್ಲಿ ಹುಟ್ಟಿ ಬೆಳೆದದ್ದು. ನಾನು ಕಮೆಂಟ್ ಮಾಡಿದ್ದು ಮೂರ್ಖತನದ ಕೃತ್ಯವಾಗಿದೆ ಮತ್ತೊಮ್ಮೆ! ನಿಜವಾಗಿಯೂ ಎಲ್ಲರಿಗೂ ಕ್ಷಮೆಯಾಚಿಸುವೆ. ಮುಂದೆ ನಾನು ಎಂದಿಗೂ ಈ ರೀತಿಯ ತಪ್ಪನ್ನು ಮಾಡುವುದಿಲ್ಲ ಎಂದು ಖಚಿತಪಡಿಸಿತ್ತೇನೆ. ಜೈ ಹಿಂದ್” ಎಂದು ಪೋಸ್ಟ್ ಮಾಡಿದ್ದಾಳೆ. ಸದ್ಯ ತಷಾವುದ್ದ ಮುಂಬೈನಲ್ಲಿರುವ ಮಾಹಿತಿ ಇದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Loading...
Unable to load recommendations.
Follow Us