ತೈಲ ಬೆಲೆ ಏರಿಕೆ: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ದರ ಕಡಿಮೆ; ಸಿಎಂ ಸಮರ್ಥನೆ

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ(Petrol-diesel price hike) ಹಿನ್ನಲೆ ಸಾರ್ವಜನಿಕರು ಕಂಗಾಲಾಗಿದ್ದು, ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ವಿಜಯಪುರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ‘ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್-ಡೀಸೆಲ್ ದರ ಕಡಿಮೆ ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ತೈಲ ಬೆಲೆ ಏರಿಕೆ: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ದರ ಕಡಿಮೆ; ಸಿಎಂ ಸಮರ್ಥನೆ
ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್-ಡೀಸೆಲ್ ದರ ಕಡಿಮೆ; ಸಿಎಂ ಸಮರ್ಥನೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 16, 2024 | 5:12 PM

ವಿಜಯಪುರ, ಜೂ.16: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ(Petrol-diesel price hike) ಹಿನ್ನಲೆ ಸಾರ್ವಜನಿಕರು ಕಂಗಾಲಾಗಿದ್ದು, ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ವಿಜಯಪುರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ‘ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್-ಡೀಸೆಲ್ ದರ ಕಡಿಮೆ ಇದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲೂ ನಮ್ಮಲ್ಲಿ ಡೀಸೆಲ್ ದರ ಕಡಿಮೆಯಿದೆ ಎನ್ನುವ ಮೂಲಕ ಸಿಎಂ ಸಮರ್ಥಿಸಿಕೊಂಡಿದ್ದಾರೆ.

‘ನಮ್ಮ ರಾಜ್ಯದ ಸಂಪನ್ಮೂಲವನ್ನ ಬಿಜೆಪಿ ಸರ್ಕಾರ ಇದ್ದಾಗ ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ತೈಲ ವ್ಯಾಟ್​ ಕಡಿಮೆ ಮಾಡಿತ್ತು. ಕೇಂದ್ರ ಸರ್ಕಾರ ಪದೇಪದೆ ವ್ಯಾಟ್ ಹೆಚ್ಚಳ ಮಾಡಿತ್ತು. ಇದರಿಂದ ನಮ್ಮ ರಾಜ್ಯದ ಆದಾಯ ಕುಂಠಿತವಾಗಿತ್ತು. ಆದರೆ, ಕೇಂದ್ರದ BJP ಸರ್ಕಾರ ಕನ್ನಡಿಗರನ್ನ ವಂಚಿಸಿ, ಹೆಚ್ಚು ತೆರಿಗೆ ಸಂಗ್ರಹಿಸಿತ್ತು ಎಂದು ಸಿಎಂ ಆರೋಪಿಸಿದ್ದಾರೆ.

ಇದನ್ನೂ ಓದಿ:ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ತೈಲ ದರ ತಲಾ 9.48 ರೂ., 3.56 ರೂ.ತೆರಿಗೆ ಇತ್ತು. ಬಿಜೆಪಿ ಅವಧಿಯಲ್ಲಿ ದಾಖಲೆ ಮಟ್ಟದಲ್ಲಿ ತೆರಿಗೆ ಹೆಚ್ಚಳವಾಗಿದೆ. ಪೆಟ್ರೋಲ್​​ಗೆ 32.98 ರೂ. ಡೀಸೆಲ್​​ಗೆ 31.83 ರೂ ಹೆಚ್ಚಳ ಮಾಡಲಾಗಿದೆ. ಆದರೆ, 2021-22ರಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಕಡಿಮೆ ಮಾಡಿ, ಪೆಟ್ರೋಲ್ 13 ರೂ, ಡೀಸೆಲ್ 16 ರೂ ಕಡಿಮೆ ಮಾಡಿತ್ತು. ಸದ್ಯ ಪೆಟ್ರೋಲ್ ಮೇಲಿನ ತೆರಿಗೆ ಪೆಟ್ರೋಲ್ 19.9 ರೂಪಾಯಿದ್ದರೆ, ಡೀಸೆಲ್ ಮೇಲೆ 18.8 ರೂಪಾಯಿ ತೆರಿಗೆ ಇದೆ. ಕೇಂದ್ರ ಸರ್ಕಾರ ಜನರ ಒಳಿತಿಗೆ ಕಡಿಮೆ ಮಾಡಬೇಕು. ವ್ಯಾಟ್ ಹೆಚ್ಚಳದಿಂದ ಬಂದ ಹಣ ಅಭಿವೃದ್ಧಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ. ಆ ಮೂಲಕ ಜವಾಬ್ದಾರಿ, ಸಮತೋಲಿತ ಆಡಳಿತ ನೀಡಲು ಬದ್ಧ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us