ವಕ್ಫ್​ ಆಸ್ತಿ ವಿವಾದ: ರೈತರನ್ನು ಟೆಂಟ್​ನಲ್ಲಿ ಕೂರಿಸಿದವರನ್ನು ಜೈಲಿನಲ್ಲಿ ಕೂರಿಸೋಣ ಎಂದ ಜೋಶಿ

ವಕ್ಫ್ ಬೋರ್ಡ್ ಆಸ್ತಿ ವಿವಾದ ಕರ್ನಾಟಕದಾದ್ಯಂತ ತೀವ್ರ ಸದ್ದು ಮಾಡುತ್ತಿದೆ. ಹಲವು ಜಿಲ್ಲೆಗಳಲ್ಲಿ ರೈತರ ಜಮೀನ ಪಹಣಿಗಳಲ್ಲಿ ಕರ್ನಾಟಕ ವಕ್ಫ್ ಬೋರ್ಡ್​ ಎಂದು ಹೆಸರು ಉಲ್ಲೇಖವಾಗಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ವಿಜಯಪುರದಲ್ಲಿ ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನಿಮ್ಮೊಂದಿಗೆ ಇದ್ದೇವೆ ಎಂದು ರೈತರಿಗೆ ಆತ್ಮಸ್ಥೈರ್ಯ ತುಂಬಿದರು.

ವಕ್ಫ್​ ಆಸ್ತಿ ವಿವಾದ: ರೈತರನ್ನು ಟೆಂಟ್​ನಲ್ಲಿ ಕೂರಿಸಿದವರನ್ನು ಜೈಲಿನಲ್ಲಿ ಕೂರಿಸೋಣ ಎಂದ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ರಮೇಶ್ ಬಿ. ಜವಳಗೇರಾ

Updated on: Oct 30, 2024 | 5:59 PM

ವಿಜಯಪುರ, (ಅಕ್ಟೋಬರ್ 30): ವಿಜಯಪುರದಲ್ಲಿ ರೈತರ ಜಮೀನನ ಪಹಣಿಯಲ್ಲಿ ಕರ್ನಾಟಕ ವಕ್ಫ್ ಎಂದು ಹೆಸರು ಬರುತ್ತಿದೆ. ಅಲ್ಲದೇ ವಕ್ಫ್​ ಆಸ್ತಿ ಬಿಡಬೇಕೆಂದು ರೈತರಿಗೆ ನೋಟಿಸ್ ನೀಡಲಾಗಿದೆ. ಇದರಿಂದ ರೈತರ ಆತಂಕಗೊಂಡಿದ್ದು, ಪ್ರತಿಭಟನೆಗಿಳಿದಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರೆಲ್ಲರೂ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ವಕ್ಫ್ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ ರೈತರ ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಮುಂದಿನ ಹೋರಾಟಕ್ಕೆ ನಿಮ್ಮೊಂದಿಗೆ ಇರುತ್ತೇವೆ ಎಂದು ರೈತರಿಗೆ ಧೈರ್ಯ ತುಂಬಿದರು.

ರೈತರ ಜೊತೆ ಚರ್ಚಿಸಿದ ಬಳಿಕ ಮಾತನಾಡಿದ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ಬೋರ್ಡ್​ನ ಅನ್​ಲಿಮಿಟೆಡ್ ಅಧಿಕಾರ ತೆಗೆಯಲು ಕ್ರಮಕೈಗೊಳ್ಳಲಾಗುತ್ತಿದ್ದು, ಕಾನೂನು ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಅಲ್ಲದೇ ರೈತರ ಕಾನೂನು ಹೋರಾಟಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ

ಕಾನೂನು ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈ ತೀರ್ಮಾನ ಮಾಡಿದ ನಂತರ ಪ್ರತಿ ಜಿಲ್ಲೆಯಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ವಕ್ಫ್ ಅದಾಲತ್ ಮಾಡಿ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. 1974ರ ಗೆಜೆಟ್ ಆದೇಶ ಹೊರ ತೆಗೆಯಲು ಮುಂದಾಗಿದ್ದಾರೆ. ಪಹಣಿಯಲ್ಲಿ ವಕ್ಫ್ ಎಂದು ಸೇರಿಸಿದ್ದನ್ನು ಖಂಡಿಸಿ ರೈತರು ಹೋರಾಟ ಮಾಡುತ್ತಿದ್ದಾರೆ. ಇದು ರೈತರ ಹೋರಾಟ, ಬಿಜೆಪಿ ಹೋರಾಟವಲ್ಲ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲವಿದೆ. ರೈತರನ್ನು ಟೆಂಟ್​ನಲ್ಲಿ ಕೂರಿಸಿದವರನ್ನು ಜೈಲಿನಲ್ಲಿ ಕೂರಿಸೋಣ. ಸುಪ್ರೀಂಕೋರ್ಟ್, ಹೈಕೋರ್ಟ್​ಗೆ ಹೋದರೂ ಕಾನೂನು ನೆರವು ನೀಡುವುದಾಗಿ ರೈತರಿಗೆ ಧೈರ್ಯ ತುಂಬಿದರು.

ಪಹಣಿ ಕಾಲಂ 11ರಲ್ಲಿ ವಕ್ಫ್ ಎಂದು ನಮೂದು ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ ನಂತರ ಹಿಂಪಡೆಯುವುದಾಗಿ ಅಧಿಕಾರಿಗಳು ಹೇಳಿದ್ದಾರೆ. 1974ರಿಂದ ದಾಖಲೆ ವಿಚಾರದಲ್ಲಿ ಅಧಿಕಾರಿಗಳು ನಾಟಕ ಬಿಡಬೇಕು. ಬಿಜೆಪಿಯವರು ವಕ್ಫ್ ಮಾಡಿದ್ದಾರೆಂದು ಆರೋಪ ಮಾಡುತ್ತಿದ್ದಾರೆ. ಇದು 2,000 ರೂ.ಗೆ ಮತ ಹಾಕಿದ್ದರ ಪರಿಣಾಮವೆಂದು ಕಿಡಿಕಾರಿದರು.

ಬಿಜೆಪಿ ಅವಧಿಯಲ್ಲಿ ನೋಟಿಸ್ ನೀಡಿದ್ದರೆ ಅದನ್ನು ಹಿಂಪಡೆಯಲಿ. ಕೇಂದ್ರ ಸರ್ಕಾರದ ವಕ್ಫ್ ಅಮೆಂಡ್ಮೆಂಟ್ ಜಾರಿಯಾದರೆ ಕಡಿವಾಣ ಬೀಳುತ್ತೆ. ವಿಜಯಪುರ ಡಿಸಿ ವಕ್ಫ್ ಅದಾಲತ್ ಪ್ರೊಸೀಡಿಂಗ್ಸ್ ಪ್ರತಿ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ವಕ್ಫ್ ಆಸ್ತಿ ಎಂದು ಸೇರಿಸಲು ಆದೇಶಿಸಿದ್ದಾರೆ. ಇಲ್ಲವಾದರೆ ಕ್ರಮ ಎಂದು ಜಮೀರ್ ಪ್ರೊಸೀಡಿಂಗ್ಸ್​ನಲ್ಲಿ ಹೇಳಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಕೇವಲ ಮುಸ್ಲಿಮರ ಮತಗಳಿಂದ ಅಧಿಕಾರಕ್ಕೆ ಬಂದಿದೆಯಾ? ಕಾಂಗ್ರೆಸ್ ಲ್ಯಾಂಡ್ ಜಿಹಾದ್ ಮಾಡಲು ಹೊರಟಿದೆ. ವಿಜಯಪುರ, ಧಾರವಾಡ ಜಿಲ್ಲೆಯ ರೈತರಿಗೆ ನೋಟಿಸ್ ನೀಡಲಾಗಿದೆ. ಭೂಮಿ ತಂತ್ರಾಂಶದ ನೆಟ್​ವರ್ಕ್ ಡೌನ್ ಎಂದು ತೋರಿಸುತ್ತಿದ್ದಾರೆ. ಕೂಡಲೇ ವಕ್ಫ್ ಅದಾಲತ್ ನಡೆಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿದ ಜೋಶಿ, ಇಲ್ಲವಾದರೆ ಸಿಎಂ ಕೂಡ ಶಾಮೀಲಾಗಿದ್ದಾರೆಂಬಂತೆ ಆಗುತ್ತದೆ. ಕೋರ್ಟ್​ಗೆ ಹೋದರೆ ಡಿಸಿ ಸೇರಿದಂತೆ ಎಲ್ಲರ ವಿರುದ್ಧ ಕ್ರಮವಾಗುತ್ತೆ ಎಂದರು.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ