ಪಾಲಿಕೆ ಆಯುಕ್ತ, ಅಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ರೌಡಿಶೀಟರ್ ಮತ್ತವನ ಸಹಚರರು! ಕಾರಣವೇನು?

ಪಾಲಿಕೆ ಆಯುಕ್ತ ಹಾಗೂ ಆಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ನಾಲ್ವರು ಯುವಕರ ವಿರುದ್ಧ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಮುಖ ಆರೋಪಿ ರೌಡಿಶೀಟರ್ ಸಮರ್ಥ್ ಸಿಂದಗಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪಾಲಿಕೆ ಆಯುಕ್ತ, ಅಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ರೌಡಿಶೀಟರ್ ಮತ್ತವನ ಸಹಚರರು! ಕಾರಣವೇನು?
ಆರೋಪಿ ಸಮರ್ಥ್ ಸಿಂದಗಿ
Follow us
TV9 Web
| Updated By: preethi shettigar

Updated on:Dec 20, 2021 | 4:03 PM

ವಿಜಯಪುರ: ಪಾಲಿಕೆ ಆಯುಕ್ತರ ಮೇಲೆ ರೌಡಿಶೀಟರ್ (Rowdy sheeter) ಮತ್ತು ಸಂಗಡಿಗರು ಹಲ್ಲೆ ಮಾಡಿದ ಘಟನೆ ವಿಜಯಪುರ ನಗರದ ರಿಂಗ್ ರೋಡ್‌ನಲ್ಲಿ ನಡೆದಿದೆ. ಆಯುಕ್ತ ವಿಜಯ್ ಮೆಕ್ಕಳಕಿ ಮತ್ತು ಇಬ್ಬರು ಅಧಿಕಾರಿಗಳ ಮೇಲೆ ರೌಡಿಶೀಟರ್ ಸಮರ್ಥ್ ಸಿಂದಗಿ, ಸುರೇಶ್, ಮತ್ತಿಬ್ಬರು ಸೇರಿ ಹಲ್ಲೆ ಮಾಡಿದ್ದಾರೆ. ರಿಂಗ್ ರೋಡ್‌ನಲ್ಲಿ ತೆಗ್ಗು ಗುಂಡಿಗಳ ಪರಿಶೀಲನೆ ಮಾಡುತ್ತಿದ್ದ ಅಧಿಕಾರಿಗಳ ಕಾರಿಗೆ ರೌಡಿಶೀಟರ್ ಕಾರು ಮತ್ತು ಬೈಕ್​ ಡಿಕ್ಕಿಯಾಗಿದೆ. ಇದನ್ನು ಪ್ರಶ್ನಿಸಿದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪಾಲಿಕೆ ಆಯುಕ್ತ ಹಾಗೂ ಆಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ನಾಲ್ವರು ಯುವಕರ ವಿರುದ್ಧ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಮುಖ ಆರೋಪಿ ರೌಡಿಶೀಟರ್ ಸಮರ್ಥ್ ಸಿಂದಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಪರಾರಿಯಾದ ಮೂವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಅಧಿಕಾರಿಗಳ ಮೇಲಿನ ಹಲ್ಲೆಗೆ ಕಾರಣ ಏನು? ಇದೇ ಮುಂಬರುವ ಡಿಸೆಂಬರ್ 25 ರಂದು ಸಿಎಂ ಬಸವರಾಜ ಬೊಮ್ಮಾಯಿ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಈ ಕಾರಣದಿಂದ ಕೆಲ ರಸ್ತೆಗಳ ಪರಿಶೀಲನೆಗೆ ಖಾಸಗಿ ಕಾರಿನಲ್ಲಿ ಪಾಲಿಕೆಯ ಆಯುಕ್ತ ವಿಜಯ್ ಮೆಕ್ಕಳಕಿ ಸೊಲ್ಲಾಪುರ ಹಾಗೂ ಅಥಣಿ ರಸ್ತೆಗಳನ್ನು ಸಂಪರ್ಕಿಸುವ ರಿಂಗ್ ರೋಡ್​ಗೆ ಹೋಗಿದ್ದಾರೆ. ರಿಂಗ್ ರೋಡ್​ನಲ್ಲಿ ಕೆಎ 04 ಎಂಆರ್ 3143 ನಂಬರಿನ ಕಾರನ್ನು ನಿಲ್ಲಿಸಿ ರಸ್ತೆಯಲ್ಲಿನ ತೆಗ್ಗು ಗುಂಡಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಂಬರ್ ಪ್ಲೇಟ್ ಇಲ್ಲದ ಬುಲೆಟ್ ಬೈಕ್​ನಲ್ಲಿ ಸಮರ್ಥ ಸಿಂದಗಿ ಆಗಮಿಸಿದ್ದಾನೆ. ಇವನ ಹಿಂದೆಯೇ  ನಂಬರ್ ಪ್ಲೇಟ್ ಇಲ್ಲದ ಪೋರ್ಡ್ ಕಾರಿನಲ್ಲಿ ನಾಲ್ವರು ಯುವಕರು ಆಗಮಿಸಿದ್ದಾರೆ. ಅಲ್ಲದೇ ಆಯುಕ್ತರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿದಾಗ ಹಲ್ಲೆಗೆ ಮುಂದಾಗಿದ್ದಾರೆ.

ವಿಜಯಪುರ ಪಾಲಿಕೆ ಆಯುಕ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ‌ ಹಾಗೂ ಇತರೆ ಅಧಿಕಾರಿಗಳ ಮೇಲೆ ರೌಡಿಶೀಟರ್ ಹಾಗೂ ಆತನ‌ ಸ್ನೇಹಿತರಿಂದ‌ ಹಲ್ಲೆ ವಿರೋಧಿಸಿ ಸರ್ಕಾರಿ ನೌಕರರ ಸಂಘ, ಮಹಾನಗರ ಪಾಲಿಕೆ ಸಿಬ್ಬಂದಿ  ಹಾಗೂ‌ ಪೌರ ಕಾರ್ಮಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಆಯುಕ್ತರು ಹಾಗೂ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು

ಪೊಲೀಸರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

Published On - 12:08 pm, Mon, 20 December 21

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ