AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಜಿಲ್ಲೆಯಲ್ಲಿ ಆರ್​ಎಸ್​ಎಸ್ ಸರಸಂಘಚಾಲಕ; ಯಾರ ಭೇಟಿಗೂ ಸಿಗದೇ ಧ್ಯಾನಾಸಕ್ತರಾಗಿರೋ ಮೋಹನ್ ಭಾಗವತ್

ಇಂಡಿ ತಾಲೂಕಿನ ನಿಂಬಾಳ ಗ್ರಾಮದ ಬಳಿಯ ಶ್ರೀ ಗುರುದೇವ ರಾನಡೆ ಆಶ್ರಮದಲ್ಲಿ ಆರ್​​ಎಸ್​ಎಸ್ ಸರಸಂಘಚಾಲಕ ಮೋಹನ್ ಭಾಗವತ್ (RSS Sarsanghchalak Mohan Bhagwat)  ಬೀಡು ಬಿಟ್ಟಿದ್ದಾರೆ. ಸಂಘ ಸಂಘಟನೆ ರಾಜಕೀಯ ವಿಚಾರಗಳಿಂದ ದೂರವಿದ್ದು, ಕೇವಲ ಧ್ಯಾನದಲ್ಲೇ ಕಾಲ ಕಳೆಯುತ್ತಿದ್ದಾರೆ. ಜೊತೆಗೆ ಝಡ್ ಪ್ಲಸ್ ಭದ್ರತೆ ಒದಗಿಸಲಾಗಿದ್ದು, ಯಾರ ಭೇಟಿಗೂ ಅವಕಾಶವಿಲ್ಲ.

ವಿಜಯಪುರ ಜಿಲ್ಲೆಯಲ್ಲಿ ಆರ್​ಎಸ್​ಎಸ್ ಸರಸಂಘಚಾಲಕ; ಯಾರ ಭೇಟಿಗೂ ಸಿಗದೇ ಧ್ಯಾನಾಸಕ್ತರಾಗಿರೋ ಮೋಹನ್ ಭಾಗವತ್
ವಿಜಯಪುರ ಜಿಲ್ಲೆಯಲ್ಲಿ ಆರ್​ಎಸ್​ಎಸ್ ಸರಸಂಘಚಾಲಕ ಮೋಹನ್​ ಭಾಗವತ್​
ಅಶೋಕ ಯಡಳ್ಳಿ, ವಿಜಯಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 26, 2024 | 5:59 PM

Share

ವಿಜಯಪುರ, ಜೂ.26: ವಿಜಯಪುರ(Vijayapura) ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಗ್ರಾಮದ ಬಳಿಯ ಶ್ರೀ ಗುರುದೇವ ರಾನಡೆ ಆಶ್ರಮದಲ್ಲಿ ಆರ್​​ಎಸ್​ಎಸ್ ಸರಸಂಘಚಾಲಕ ಮೋಹನ್ ಭಾಗವತ್ (RSS Sarsanghchalak Mohan Bhagwat)  ಬೀಡು ಬಿಟ್ಟಿದ್ದಾರೆ. ಜೂನ್ 24 ರಿಂದಲೇ ರಾನಡೆ ಆಶ್ರಮದಲ್ಲಿ ಬೀಡು ಬಿಟ್ಟಿರುವ ಅವರು ಯಾರ ಭೇಟಿಗೂ ಸಿಗದೇ ಧ್ಯಾನಾಸಕ್ತರಾಗಿದ್ದಾರೆ.

ಪ್ರತಿ ವರ್ಷ ಆಶ್ರಮಕ್ಕೆ ಭೇಟಿ ನೀಡುವ ಮೋಹನ್ ಭಾಗವತ್

ಜೂನ್ 24 ರಿಂದ ರಾನಡೆ ಆಶ್ರಮದಲ್ಲಿ ಧ್ಯಾನ ಮಾಡುತ್ತಿರುವ ಆರ್​ಎಸ್​ಎಸ್ ಮುಖಂಡ ಮೋಹನ್​ ಭಾಗವತ್​, ಪ್ರತಿ ವರ್ಷ ಜೂನ್ ಅಥವಾ ಜುಲೈ ತಿಂಗಳಲ್ಲಿ ಶ್ರೀ ಗುರುದೇವ ರಾನಡೆ ಆಶ್ರಮಕ್ಕೆ ಬರುತ್ತಾರೆ. ಜೊತೆಗೆ ನಾಲ್ಕು ದಿನಗಳ ಕಾಲ ಇಲ್ಲಿಯೇ ತಂಗುವುದು ವಾಡಿಕೆಯಾಗಿದೆ. ಹಲವಾರು ವರ್ಷಗಳಿಂದ ಶ್ರೀ ಗುರುದೇವ ರಾನಡೆ ಆಶ್ರಮಕ್ಕೆ ತಪ್ಪದೇ ಬರುತ್ತಿದ್ದಾರೆ.

ಇದನ್ನೂ ಓದಿ:ಮಣಿಪುರಕ್ಕೆ ಆದ್ಯತೆ ನೀಡಬೇಕು, ಹಿಂಸೆ ನಿಲ್ಲಿಸಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಕೇವಲ ಧಾನ್ಯದಲ್ಲೇ ಕಾಲ

ಇನ್ನು ಇಲ್ಲಿಗೆ ಬರುವ ಅವರು, ಸಂಘ ಸಂಘಟನೆ ರಾಜಕೀಯ ವಿಚಾರಗಳಿಂದ ದೂರವಿದ್ದು, ಕೇವಲ ಧ್ಯಾನದಲ್ಲೇ ಕಾಲ ಕಳೆಯುತ್ತಾರೆ. ಈ ಆಶ್ರಮದಲ್ಲಿ ಕೆಲವೇ ಜನರ ಜೊತೆಗಿರೋ ಮೋಹನ್ ಭಾಗವತ್ ಅವರಿಗೆ ಝಡ್ ಪ್ಲಸ್ ಭದ್ರತೆ ಇದ್ದು, ಭಾಗವತ್ ಅವರ ಭೇಟಿಗೆ ಯಾರಿಗೂ ಅವಕಾಶವಿಲ್ಲ. ರಾನಡೆ ಆಶ್ರಮದ ಹೊರಗಡೆ ಜಿಲ್ಲಾ ಪೊಲೀಸರಿಂದ ಭದ್ರತೆ ಮಾಡಲಾಗಿದೆ. ನಾಳೆ(ಜೂ.27) ಬೆಳಿಗ್ಗೆ ರಾನಡೆ ಆಶ್ರಮದಿಂದ ಹೊರಟು ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ದೇವರನಿಂಬರಗಿ ಗ್ರಾಮದ ಮಠಕ್ಕೆ ಭೇಟಿ ನೀಡಿ ಅಲ್ಲಿಂದ ಮಹಾರಾಷ್ಟ್ರದ ಉಮದಿಗೆ ತೆರಳಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More