Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಧರ್ಮಗುರು, ಯತ್ನಾಳ್ ಮಧ್ಯೆ ಇತ್ತೇ ಪೂರ್ವದ್ವೇಷ? ಪ್ರಶ್ನೆ ಉದ್ಭವಕ್ಕೆ ಕಾರಣವಾಯ್ತು ಈ ಎರಡು ಪ್ರಸಂಗ

ಮುಸ್ಲಿಂ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರಾ ಪೀರಾ ಹಾಸ್ಮೀಂ ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂದು ಬಸನಗೌಡ ಪಾಟೀಲ್​​ ಯತ್ನಾಳ್​ ಆರೋಪ ಮಾಡಿದ್ದಾರೆ. ಹೀಗೆ ​ಆರೋಪ ಮಾಡಲು ಬಸನಗೌಡ ಪಾಟೀಲ್​ ಯತ್ನಾಳ್​ ಅವರಿಗೆ ಧರ್ಮಗುರು ಮೇಲೆ ವೈಯಕ್ತಿ ಧ್ವೇಷವಿದೆಯಾ? ಎಂಬ ಪ್ರಶ್ನೆಯೂ ಉದ್ಭವವಾಗಿದೆ. ಏನದು ವೈಯಕ್ತಿಕ ಧ್ವೇಷ ಇಲ್ಲಿದೆ ಓದಿ..

ಮುಸ್ಲಿಂ ಧರ್ಮಗುರು, ಯತ್ನಾಳ್ ಮಧ್ಯೆ ಇತ್ತೇ ಪೂರ್ವದ್ವೇಷ? ಪ್ರಶ್ನೆ ಉದ್ಭವಕ್ಕೆ ಕಾರಣವಾಯ್ತು ಈ ಎರಡು ಪ್ರಸಂಗ
ಬಸನಗೌಡ ಪಾಟೀಲ್​ ಯತ್ನಾಳ್, ಸಯ್ಯದ್ ಮೊಹಮ್ಮದ್​​ ತನ್ವೀರ್​ ಪೀರಾ ಹಾಸ್ಮೀ
Follow us
Jagadisha B
| Updated By: ವಿವೇಕ ಬಿರಾದಾರ

Updated on:Dec 08, 2023 | 9:45 AM

ವಿಜಯಪುರ ಡಿ.06: ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದ್ದ ಮುಸ್ಲಿಂ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಐಸಿಸ್​ ಜೊತೆ ನಂಟು ಹೊಂದಿದ್ದ ವ್ಯಕ್ತಿಯ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ (Basangouda Patil Yatnal) ಆರೋಪ ಮಾಡಿದ್ದರು. ಇದಾದ ಬಳಿಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಇವರೇ ನೋಡಿ ಐಸಿಸ್​ ಜೊತೆ ನಂಟು ಹೊಂದಿರವ ವ್ಯಕ್ತಿ ಎಂದು ವಿಜಯಪುರದ (Vijaypura) ಹಾಸೀಂಪೀರಾ ದರ್ಗಾದ ಧರ್ಮ ಗುರುಗಳಲ್ಲಿ ಒಬ್ಬರಾದ ಸಯ್ಯದ್ ಮೊಹಮ್ಮದ್ ತನ್ವೀರ್​​​ ಪೀರಾ ಹಾಸ್ಮೀಂ ಅವರ ಫೋಟೋವನ್ನು ಸಾಮಾಜಿಕ ಜಾಲತಾಣ ಅಕೌಂಟ್​​ನಲ್ಲಿ ಹಂಚಿಕೊಂಡರು. ಸದ್ಯ ಈ ವಿಚಾರ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಲ್ಲದೆ ಅಧಿವೇಶನದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಆದರೆ ಇದೀಗ ಬಸನಗೌಡ ಪಾಟೀಲ್​​ ಯತ್ನಾಳ್​ ಅವರು ವೈಯಕ್ತಿಕ ದ್ವೇಷದಿಂದ ಈ ರೀತಿ ಆರೋಪ ಮಾಡಿದ್ರಾ? ಎಂಬ ಪ್ರಶ್ನೆ ಉದ್ಭವಾಗಲು ಈ ಕೆಳಗಿನ ಸನ್ನೀವೇಶಗಳು ಪುಷ್ಠಿ ನೀಡುವಂತಿವೆ.

ಹೌದು 2018ರ ವಿಧಾನಸಭೆ ಚುನಾವಣೆ ಬಳಿಕ ಜೂನ್​​​ ತಿಂಗಳಲ್ಲಿ ಶಾಸಕ ಬಸನಗೌಡ ಪಾಟೀಲ್ ವಿಜಯಪುರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. “ಬುರ್ಖಾಧಾರಿಗಳು, ಸ್ಕಲ್​ ಟೋಪಿ ಹಾಕಿದವರು‌ ಮತ್ತು ಗಡ್ಡದವರು ನನ್ನ ಹಿಂದೆ ಮುಂದೆ ಬರಬೇಡಿ” ಎಂದು ಹೇಳಿದ್ದರು. ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು.

ಇದನ್ನೂ ಓದಿ: ಐಸಿಸ್ ನಂಟು ಹೊಂದಿರುವನ ಜತೆ ವೇದಿಕೆ ಹಂಚಿಕೊಂಡ ಸಿಎಂ: ಫೋಟೋ ಬಿಡುಗಡೆ ಮಾಡಿದ ಯತ್ನಾಳ್​

ಈ ಹೇಳಿಕೆ ಬಳಿಕ ನಡೆದ ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಕಾರ್ಯಕ್ರಮದಲ್ಲಿ “ಸಂದರ್ಭ ಬಂದರೇ ಬಕ್ರೀದಗೆ ಬಲಿ ಕಡಿಯುತ್ತೇವೆ” ಎಂದು ಪರೋಕ್ಷವಾಗಿ ಬಸನಗೌಡ ಪಾಟೀಲ್​ ಯತ್ನಾಳ್​ ಅವರಿಗೆ ಧರ್ಮಗುರು ಸಯ್ಯದ್ ಮೊಹಮ್ಮದ್​​ ತನ್ವೀರ್​ ಪೀರಾ ಹಾಸ್ಮೀ ಟಾಂಗ್ ಕೊಟ್ಟಿದ್ದರು.

ಈ ಕಾರಣದಿಂದ ಧರ್ಮಗುರು ಸಯ್ಯದ್ ಮೊಹಮ್ಮದ್​​ ತನ್ವೀರ್​ ಪೀರಾ ಹಾಸ್ಮೀ ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವೈಯಕ್ತಿಕ ದ್ವೇಷದಿಂದ​ಆರೋಪ ಮಾಡಿದರೇ ಎಂಬ ಪ್ರಶ್ನೆ ಉದ್ಭವವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:40 pm, Wed, 6 December 23

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ