ವಿಜಯಪುರ ಡಿ.06: ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದ್ದ ಮುಸ್ಲಿಂ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಐಸಿಸ್ ಜೊತೆ ನಂಟು ಹೊಂದಿದ್ದ ವ್ಯಕ್ತಿಯ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ (Basangouda Patil Yatnal) ಆರೋಪ ಮಾಡಿದ್ದರು. ಇದಾದ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇವರೇ ನೋಡಿ ಐಸಿಸ್ ಜೊತೆ ನಂಟು ಹೊಂದಿರವ ವ್ಯಕ್ತಿ ಎಂದು ವಿಜಯಪುರದ (Vijaypura) ಹಾಸೀಂಪೀರಾ ದರ್ಗಾದ ಧರ್ಮ ಗುರುಗಳಲ್ಲಿ ಒಬ್ಬರಾದ ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಹಾಸ್ಮೀಂ ಅವರ ಫೋಟೋವನ್ನು ಸಾಮಾಜಿಕ ಜಾಲತಾಣ ಅಕೌಂಟ್ನಲ್ಲಿ ಹಂಚಿಕೊಂಡರು. ಸದ್ಯ ಈ ವಿಚಾರ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಲ್ಲದೆ ಅಧಿವೇಶನದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಆದರೆ ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೈಯಕ್ತಿಕ ದ್ವೇಷದಿಂದ ಈ ರೀತಿ ಆರೋಪ ಮಾಡಿದ್ರಾ? ಎಂಬ ಪ್ರಶ್ನೆ ಉದ್ಭವಾಗಲು ಈ ಕೆಳಗಿನ ಸನ್ನೀವೇಶಗಳು ಪುಷ್ಠಿ ನೀಡುವಂತಿವೆ.
ಹೌದು 2018ರ ವಿಧಾನಸಭೆ ಚುನಾವಣೆ ಬಳಿಕ ಜೂನ್ ತಿಂಗಳಲ್ಲಿ ಶಾಸಕ ಬಸನಗೌಡ ಪಾಟೀಲ್ ವಿಜಯಪುರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. “ಬುರ್ಖಾಧಾರಿಗಳು, ಸ್ಕಲ್ ಟೋಪಿ ಹಾಕಿದವರು ಮತ್ತು ಗಡ್ಡದವರು ನನ್ನ ಹಿಂದೆ ಮುಂದೆ ಬರಬೇಡಿ” ಎಂದು ಹೇಳಿದ್ದರು. ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಇದನ್ನೂ ಓದಿ: ಐಸಿಸ್ ನಂಟು ಹೊಂದಿರುವನ ಜತೆ ವೇದಿಕೆ ಹಂಚಿಕೊಂಡ ಸಿಎಂ: ಫೋಟೋ ಬಿಡುಗಡೆ ಮಾಡಿದ ಯತ್ನಾಳ್
ಈ ಹೇಳಿಕೆ ಬಳಿಕ ನಡೆದ ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಕಾರ್ಯಕ್ರಮದಲ್ಲಿ “ಸಂದರ್ಭ ಬಂದರೇ ಬಕ್ರೀದಗೆ ಬಲಿ ಕಡಿಯುತ್ತೇವೆ” ಎಂದು ಪರೋಕ್ಷವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಹಾಸ್ಮೀ ಟಾಂಗ್ ಕೊಟ್ಟಿದ್ದರು.
ಈ ಕಾರಣದಿಂದ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಹಾಸ್ಮೀ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವೈಯಕ್ತಿಕ ದ್ವೇಷದಿಂದಆರೋಪ ಮಾಡಿದರೇ ಎಂಬ ಪ್ರಶ್ನೆ ಉದ್ಭವವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:40 pm, Wed, 6 December 23