ನಾಳೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲಿರುವ ಸಿಎಂ ಸಿದ್ದರಾಮಯ್ಯ: ಆಲಮಟ್ಟಿಯಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್

ನಾಳೆ ಸಿಎಂ ಸಿದ್ದರಾಮಯ್ಯ ಕೃಷ್ಣಾ ನದಿಗೆ ಗಂಗಾ ಪೂಜೆ ನೆರವೇರಿಸಿ ಬಳಿಕ ಬಾಗೀನ ಅರ್ಪಿಸಲಿದ್ದಾರೆ. ವಿಜಯಪುರ ‌ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ‌ ನಿರ್ಮಿಸಲಾದ ಡ್ಯಾಂನಲ್ಲಿ ಕೃಷ್ಣಾ‌‌ ಭಾಗ್ಯ ಜಾಲ ‌ನಿಯಮಿತ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಜಿಲ್ಲಾ‌ ಉಸ್ತುವಾರಿ ಸಚಿವ ಎಂ‌ಬಿ‌ ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ನಾಳೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲಿರುವ ಸಿಎಂ ಸಿದ್ದರಾಮಯ್ಯ: ಆಲಮಟ್ಟಿಯಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್
ಕೃಷ್ಣಾ ನದಿ, ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Edited By:

Updated on: Sep 01, 2023 | 10:18 AM

ವಿಜಯಪುರ, ಸೆಪ್ಟೆಂಬರ್ 1: ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ‌ (Krishna river) ನಿರ್ಮಿಸಲಾದ ಡ್ಯಾಂನಲ್ಲಿ ಕೃಷ್ಣಾ‌‌ ಭಾಗ್ಯ ಜಾಲ ‌ನಿಯಮಿತದಿಂದ ಗಂಗಾ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಾಳೆ  ಕೃಷ್ಣಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗೀನ ಅರ್ಪಿಸಲಿದ್ದಾರೆ. ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಬಳ್ಳಾರಿ‌ಯ ಜಿಂದಾಲ್​ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, 11 ಗಂಟೆಗೆ ಜಿಂದಾಲ್​ನಿಂದ‌‌ ವಿಶೇಷ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಲಿದ್ದಾರೆ.

ಆಲಮಟ್ಟಿಯ‌ ಡ್ಯಾಂ ಆವರಣದಲ್ಲಿ ಮೊದಲು ಕೃಷ್ಣೆಗೆ‌ ಗಂಗಾಪೂಜೆ ನೆರವೇರಿಸಿ ಬಳಿಕ ಬಾಗೀನ‌ ಅರ್ಪಿಸಲಿದ್ದಾರೆ. ಜಿಲ್ಲಾ‌ ಉಸ್ತುವಾರಿ ಸಚಿವ ಎಂ‌ಬಿ‌ ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು ಮುಖಂಡರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್​ಐಆರ್ ದಾಖಲಿಸಿದ ಪೊಲೀಸರು

ಬಳಿಕ ಕೆಬಿಜೆಎನ್ಎಲ್​ಎಂಡಿ ಕಚೇರಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಕುರಿತ ಭೂಸ್ವಾಧೀನ, ಪುನರ್ ವಸತಿ, ಪುನರ್ ನಿರ್ಮಾಣ ಕುರಿತು ಅಧಿಕಾರಿಗಳೊಂದಿಗೆ ಸಭೆ ಮಾಡಲಿದ್ದಾರೆ. ಬಳಿಕ‌ ರೈತರ ಅಹವಾಲು ಸ್ವೀಕಾರ ಮಾಡಲಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ರಾಜಕೀಯೇತರ ಬಾಂಧವ್ಯ ಇದೆ: ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಶಾಸಕ

ಜಿಲ್ಲೆಯನ್ನು ಸಂಪುರ್ಣ‌ ಬರಗಾಲ ಜಿಲ್ಲೆಯೆಂದು ಘೋಷಣೆ ಹಾಗೂ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಮನವಿ ಸಲ್ಲಿಸಲಿದ್ದಾರೆ. ಬಳಿಕ ಮದ್ಯಾಹ್ನ 3 ಕ್ಕೆ ಜಿಂದಾಲ್ ಮಾರ್ಗವಾಗಿ ಬೆಂಗಳೂರಿಗೆ ವಾಪಸ್​​ ಆಗಲಿದ್ದಾರೆ.

ಎಸ್ಪಿ ಅವರ ನೇತೃತ್ವದಲ್ಲಿ ಭದ್ರತೆ

ವಿಜಯಪುರಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಎಸ್ಪಿ ಅವರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ. ಓರ್ವ ಎಎಸ್ಪಿ, 4 ಡಿಎಸ್ಪಿ, 7 ಜನ ಇನ್ಸಪೆಕ್ಟರ್ಸ್, 31 ಪಿಎಸ್ಐ, ಎಎಸೈ 20,
ಹೆಡ್ ಕಾನ್ಸಸ್ಟೇಬಲ್ ಹಾಗೂ ಕಾನ್ಸಸ್ಟೇಬಲ್ 260, ಕೆಎಸ್ಆರ್ಪಿ 2 ತುಕಡಿ ಮತ್ತು ಡಿಎಆರ್ 4 ತುಕಡಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:17 am, Fri, 1 September 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us