AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CD ತೋರಿಸಿ ಸಿದ್ದರಾಮಯ್ಯ ರಾಜೀನಾಮೆ ಪಡೆದಿದ್ದಾರೆ’: ಸ್ಫೋಟಕ ಆರೋಪ ಮಾಡಿದ ಯತ್ನಾಳ್​

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ತೀವ್ರಗೊಂಡಿರುವ ನಡುವೆಯೇ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಡಿ ತೋರಿಸಿ ರಾಜೀನಾಮೆ ಪಡೆಯಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಆರೋಪ ಮಾಡಿದ್ದಾರೆ. ಸಿಎಂ ಸ್ಟಿಂಗ್ ಬಗ್ಗೆ ಹುಷಾರಾಗಿರಬೇಕೆಂದು ಹೇಳುತ್ತಾರೆ. ಹಾಗಾದ್ರೆ ಸ್ಟಿಂಗ್ ಆಪರೇಷನ್ ಮಾಡಿದ್ದು ಸಿಎಂಗೆ ಹೇಗೆ ಗೊತ್ತಾಯ್ತು? ಎಂದೂ ಪ್ರಶ್ನಿಸಿದ್ದಾರೆ.

'CD ತೋರಿಸಿ ಸಿದ್ದರಾಮಯ್ಯ ರಾಜೀನಾಮೆ ಪಡೆದಿದ್ದಾರೆ': ಸ್ಫೋಟಕ ಆರೋಪ ಮಾಡಿದ ಯತ್ನಾಳ್​
ಸ್ಫೋಟಕ ಆರೋಪ ಮಾಡಿದ ಯತ್ನಾಳ್​Image Credit source: Tv9 Kannada
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 13, 2026 | 6:27 PM

Share

ವಿಜಯಪುರ, ಅಕ್ಟೋಬರ್​​ 13: ಸ್ಟಿಂಗ್ ಆಪರೇಷನ್ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿರುವ ನಡುವೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಸ್ಫೋಟಕ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸುವ ಹಿಂದಿನ ದಿನ ಮಧ್ಯರಾತ್ರಿವರೆಗೆ ರಾಹುಲ್ ಗಾಂಧಿ ಸಭೆ ನಡೆಸಿದ್ದಾರೆ. ಅಹಿಂದ ನಾಯಕ ನೀವೇ, ದೊಡ್ಡ ನಾಯಕ ಎಂದು ರಾಹುಲ್ ಹೇಳಿದ್ದಾರೆ. ಆದರೆ ಆ ಬಳಿಕ ಪ್ರಿಯಾಂಕಾ ಗಾಂಧಿ, ಸೋನಿಯಾ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯಗೂ ಸಿಡಿ ತೋರಿಸಿ ರಾಜೀನಾಮೆ ನೀಡುವಂತೆ ಹೇಳಿದ್ದರಂತೆ. ಇಂತಹ ಕೆಲಸ ಮಾಡಿದವರನ್ನು ಯಾವುದೇ ದೊಡ್ಡ ಹುದ್ದೆಯಲ್ಲಿದ್ದರೂ ಪದಚ್ಯುತಿ ಮಾಡಬೇಕು ಎಂದವರು ಆಗ್ರಹಿಸಿದ್ದಾರೆ.

‘ಸ್ಟಿಂಗ್ ಆಪರೇಷನ್ ಮಾಡಿದ್ದು ಸಿಎಂಗೆ ಹೇಗೆ ಗೊತ್ತಾಯ್ತು?’

ಸತೀಶ್ ಜಾರಕಿಹೊಳಿಯವರನ್ನೂ ಅದೇ ಟೀಂ ಇಡಿಗೆ ಸಿಲುಕಿಸಿದೆ. ಸಿಎಂ ಸ್ಟಿಂಗ್ ಬಗ್ಗೆ ಹುಷಾರಾಗಿರಬೇಕೆಂದು ಹೇಳುತ್ತಾರೆ. ಹಾಗಾದ್ರೆ ಸ್ಟಿಂಗ್ ಆಪರೇಷನ್ ಮಾಡಿದ್ದು ಸಿಎಂಗೆ ಹೇಗೆ ಗೊತ್ತಾಯ್ತು? ಎಂದು ಯತ್ನಾಳ್​​ ಪ್ರಶ್ನಿಸಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಬಳಿ ಬಹಳ ಮಾಹಿತಿಯಿದೆ. ಅವರು ಯಾವ ಹೋಟೆಲ್​ನಲ್ಲಿದ್ದರು, ಎಲ್ಲಿ ಊಟ ಮಾಡಿದರು, ಎಷ್ಟು ಹಣ ಕೊಟ್ಟರು ಸೇರಿ ಎಲ್ಲ ಹೆಚ್​ಡಿಕೆ ಬಳಿಯಿವೆ. ಅದನ್ನೆಲ್ಲಾ ಹಿಡಿದು ಬಿಟ್ಟು ಮಾಡುವ ಬದಲು ಬಹಿರಂಗ ಮಾಡಬೇಕು. ದೊಡ್ಡ ಸ್ಕ್ರೀನ್​ನಲ್ಲಿ ಹಾಕಿ ಜನರಿಗೆ ತೋರಿಸಬೇಕು. ಆಗ ಎಷ್ಟು ಹಲ್ಕಾ ಕೆಲಸ ಮಾಡುತ್ತಾರೆಂದು ಜನರಿಗೆ ಗೊತ್ತಾಗುತ್ತದೆ ಎಂದು ಅವರು ಹೇಳಿದ್ದಾರೆ.

LIVE TV

ಇದನ್ನೂ ಓದಿ: ಕಮಿಷನರ್​​ಗೆ ದೂರು, ಕೋರ್ಟ್​​ಗೆ ಅರ್ಜಿ: ಸ್ಟಿಂಗ್ ಆಪರೇಷನ್ ಬಗ್ಗೆ ಸ್ಫೋಟಕ ಸಂಗತಿಗಳೊಂದಿಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

‘ಸಿದ್ದರಾಮಯ್ಯ ಹೆಸರು ಹಾಳು ಮಾಡಿದ್ದು ಯತೀಂದ್ರ’

ಸಿದ್ದರಾಮಯ್ಯ ಒಳ್ಳೆಯ ಹೆಸರು ಇಟ್ಟುಕೊಂಡಿದ್ದ ನಾಯಕ. ಆದರೆ ಅವರ ಹೆಸರನ್ನು ಪುತ್ರ ಯತೀಂದ್ರ ಹಾಳುಗೆಡವಿದ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲರ ಬಳಿ ಯತೀಂದ್ರ ಹಣ ವಸೂಲಿ ಮಾಡಿದ್ದಾರೆ. ಸಿದ್ದರಾಮಯ್ಯ ತಮ್ಮದೇ ಹಾಲುಮತ ಸಮಾಜಕ್ಕೆ ಏನೂ ಮಾಡಲಿಲ್ಲ. ಹಿಂದೂಗಳಿಗೆ ಏನೂ ಕೊಡದೆ, ಕೇವಲ ಮುಸ್ಲಿಮರಿಗೆ ಯೋಜನೆ ಹಾಗೂ ಅನುದಾನ ನೀಡಿದರು. ಹೀಗಿದ್ದರೂ ಕಷ್ಟಕಾಲದಲ್ಲಿ ಸಿದ್ದರಾಮಯ್ಯ ಬೆನ್ನಿಗೆ ಮುಸ್ಲಿಂ ಸಮಾಜ ನಿಲ್ಲಲಿಲ್ಲ. ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆಯನ್ನು ಪಾಲಿಕೆಯ ವಾಹನದಲ್ಲಿ ಸಾಗಿಸಿ ಅವಮಾನ ಮಾಡಿದ್ದಾರೆ. ಎಲ್ಲರ ಭ್ರಷ್ಟಾಚಾರದ ದಾಖಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಯಿದೆ. ಅವೆಲ್ಲವೂ ಹೊರಗೆ ತರಬೇಕೆಂದು ಯತ್ನಾಳ್​​ ಒತ್ತಾಯಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:26 pm, Tue, 13 October 26

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ